ಜಗದ್ಗುರು ರೇಣುಕಾಚಾರ್ಯ ಜಯಂತಿ
ಬೈಲಹೊಂಗಲ,ಮಾ19: ಮಾ. 23 ರಂದು ಜಗದ್ಗುರು ರೇಣುಕಾಚಾರ್ಯ ಜಯಂತಿ ಆಚರಿಸುವುದಾಗಿ ಹಿಂದೂ ವೀರಶೈವ ಸಮಾಜದ ಮುಖಂಡ ಪ್ರಮೋದಕುಮಾರ ವಕ್ಕುಂದ ತಿಳಿಸಿದ್ದಾರೆ.
ಮಾರ್ಚ್ 23 ರಂದು ಮುಂಜಾನೆ 9.30 ಘಂಟೆಗೆ ಪಟ್ಟಣದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಮೂರುಸಾವಿರ ಮಠದ ಪೂಜ್ಯ ಮನಿಪ್ರಸ್ವ ಪ್ರಭು ನೀಲಕಂಠ ಸ್ವಾಮೀಜಿಗಳ ದಿವ್ಯ ಸಾನಿಧ್ಯದಲ್ಲಿ ಜಗದ್ಗುರು ರೇಣುಕಾಚಾರ್ಯ ಭಾವಚಿತ್ರಕ್ಕೆ ಪೂಜೆ ಸಲ್ಲಿಸಲಾಗುವುದು.
ಎಲ್ಲ ವರ್ಗದ ಜನತೆ ಪೂಜಾ ಕಾರ್ಯಕ್ರಮದಲ್ಲಿ ಭಾಗಿಯಾಗುವಂತೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.