ಜಿಲ್ಲಾ ವಕೀಲರ ಸಂಘದಿಂದ ಅಂತಾರಾಷ್ಟಿçÃಯ ಮಹಿಳಾ ದಿನಾಚರಣೆ

ಸಂಜೆವಾಣಿ ವಾರ್ತೆ
ದಾವಣಗೆರೆ,ಮಾ.೧೭;- ಅಂತಾರಾಷ್ಟಿçÃಯ ಮಹಿಳಾ ದಿನವು ಲಿಂಗಸಮಾನತೆ ಮತ್ತು ಮಹಿಳಾ ಹಕ್ಕುಗಳ ಕುರಿತ ಅಪಾರ ಮಹತ್ವವನ್ನು ಹೊಂದಿದೆ. ವಿಶ್ವಾದ್ಯಂತ ಮಹಿಳೆಯರ ಸಾಮಾಜಿಕ, ಆರ್ಥಿಕ, ಸಾಂಸ್ಕೃತಿಕ ಮತ್ತು ರಾಜಕೀಯ ಸಾಧನೆಗಳ ಬಗ್ಗೆ ಜಾಗೃತಿ ಮೂಡಿಸುವ ವೇದಿಕೆಯಾಗಿ ಕಾರ್ಯನಿರ್ವಹಿಸುತ್ತದೆ. ಲಿಂಗ ಆಧಾರಿತ ತಾರತಮ್ಯ, ಹಿಂಸೆ ಮತ್ತು ಶಿP್ಷÀಣ ಮತ್ತು ಉದ್ಯೋಗಾವಕಾಶಗಳಿಗೆ ಅಸಮಾನ ಪ್ರವೇಶ ಸೇರಿದಂತೆ ಮಹಿಳೆಯರು ಎದುರಿಸುತ್ತಿರುವ ನಿರಂತರ ಸವಾಲುಗಳು ಮತ್ತು ಅಡೆತಡೆಗಳ ಕುರಿತು ಚರ್ಚಿಸುವ ಒಂದು ಅವಕಾಶವನ್ನು ಒದಗಿಸುತ್ತದೆ.ಹೆಣ್ಣಿನ ಉಡುಗೆ-ತೊಡುಗೆ ಬಗ್ಗೆ ಡಿಬೇಟ್ ಮಾಡದೇ, ಹೆಣ್ಣನ್ನು ನೋಡುವ ದೃಷ್ಟಿಕೋನ ಬದಲಾಯಿಸಿಕೊಳ್ಳಿ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಶ್ರೀಮತಿ ರಾಜೇಶ್ವರಿ ಎನ್. ಹೆಗಡೆ ಹೇಳಿದರು.ಜಿಲ್ಲಾ ವಕೀಲರ ಸಂಘದಿAದ ನಗರದ ವಕೀಲರ ಸಾಂಸ್ಕೃತಿಕ ಸಮುದಾಯ ಭವನದಲ್ಲಿ ಹಮ್ಮಿಕೊಂಡಿದ್ದ ಅಂತಾರಾಷ್ಟಿçÃಯ ಮಹಿಳಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಮಹಿಳೆಯರ ರP್ಷÀಣೆಗಾಗಿ ಸಾಕಷ್ಟು ಕಾನೂನುಗಳು ಇದ್ದರೂ ಇಂದಿಗೂ ಮಹಿಳೆಯರ ಮೇಲೆ ದೌರ್ಜನ್ಯ ನಡೆಯುತ್ತಲಿವೆ ಮತ್ತು ಸಮಾಜದಲ್ಲಿ ಬಾಲ್ಯ ವಿವಾಹದ ಪ್ರಕರಣ ತಗ್ಗಿಲ್ಲ ಎಂದು ತಿಳಿಸಿದರು.ಮಹಿಳೆಯರ ಶಿP್ಷÀಣಕ್ಕಾಗಿ ಹೋರಾಡಿದ ಅನೇಕ ಸಮಾಜ ಸುಧಾರಕರ ಪ್ರತಿಫಲದಿಂದಾಗಿ ಇಂದು ಸಮಾಜದ ಪ್ರತಿ ಕ್ಷೇತ್ರದಲ್ಲೂ ಮಹಿಳೆಯರೇ ಮುಂಚೂಣಿಯಲ್ಲಿz್ದÁರೆ ಎಂದರು.ಸ್ತಿçÃ ಶಕ್ತಿ ಸಂಘಗಳು ಇನ್ನೂ ಹೆಚ್ಚಾಗಿ ಮಹಿಳಾ ಸಬಲೀಕರಣ ಕುರಿತು ಚಿಂತನೆ ಬೆಳೆಸಿಕೊಳ್ಳಬೇಕು ಎಂದು ಅಭಿಪ್ರಾಯಪಟ್ಟರು.ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕರಾದ ವಾಸಂತಿ ಉಪ್ಪಾರ ಮಾತನಾಡಿ, ಹೆಣ್ಣಿಗೆ ಹೆಣ್ಣೇ ಶತೃ ಎಂಬ ಮಾತನ್ನು ಮೀರಿ, ಮಹಿಳೆ ಅಗಾಧವಾಗಿ ಬೆಳೆದು ಅನ್ಯೋನ್ಯತೆಯಿಂದ ಬದುಕಿz್ದÁರೆ ಎಂದು ಹೇಳಿದರು.