ಕ್ಷೇತ್ರದ ಪ್ರತಿಯೊಂದು ಭಾಗಕ್ಕೆ ಅಭಿವೃದ್ಧಿ ಕಾಮಗಾರಿ ತಲುಪಿಸುವ ನಿಟ್ಟಿನಲ್ಲಿ ಶ್ರಮಿಸುವೆ: ಡಾ. ಶೈಲೇಂದ್ರ ಬೆಲ್ದಾಳೆ
ಬೀದರ್ :ಮಾ.17:ಗ್ರಾಮೀಣ ಭಾಗದಲ್ಲಿ ಶಾಶ್ವತ ಮೂಲ ಸೌಕರ್ಯಗಳ ಅಭಿವೃದ್ಧಿಗೆ ಆದ್ಯತೆ ನೀಡುತ್ತಾ ಬರುತ್ತಿದ್ದೇನೆ ಗೆಲುವಿನ ಬಳಿಕ ಕ್ಷೇತ್ರದ ಪ್ರತಿಯೊಂದು ಭಾಗಕ್ಕೆ ಅಭಿವೃದ್ಧಿ ಕಾಮಗಾರಿ ತಲುಪಿಸುವ ನಿಟ್ಟಿನಲ್ಲಿ ಹಗಲಿರುಳು ಶ್ರಮಿಸುತ್ತಿರುವೆ ಎಂದು ಬೀದರ್ ದಕ್ಷಿಣ ಕ್ಷೇತ್ರದ ಶಾಸಕರಾದ ಡಾ.ಶೈಲೇಂದ್ರ ಬೆಲ್ದಾಳೆ ಅವರು ಹೇಳಿದರು.
ಬೀದರ್ ದಕ್ಷಿಣ ಕ್ಷೇತ್ರದ ಬಹು ವರ್ಷಗಳ ಬೇಡಿಕೆಯಾಗಿದ್ದ ಆಣದೂರ ಗ್ರಾಮದಿಂದ ಅತಿವಾಳ ಗ್ರಾಮದ ವರೆಗಿನ ೧ಕೋಟಿ ೧೬ ಲಕ್ಷ ರೂ. ವೆಚ್ಚದ ರಸ್ತೆ ಕಾಮಗಾರಿಗೆ ಶನಿವಾರ ಬೆಳಿಗ್ಗೆ ಚಾಲನೆ ನೀಡಿ ಮಾತನಾಡಿದರು.
ಈ ರಸ್ತೆಯಲ್ಲಿ ವಾಹನ ಸವಾರರು ಭಾಲ್ಕಿ ಗ್ರಾಮಕ್ಕೆ ಹಾಗೂ ಸುಪ್ರಸಿದ್ಧ ದೇವಸ್ಥಾನಗಳಾದ ಹೊನ್ನಿಕೇರಿ ಸಿದ್ಧೇಶ್ವರ, ಶನಿಮಹಾತ್ಮಾ, ಗಾಯಮಖ್, ಮೈಲಾರ ಮಲ್ಲಣ್ಣ ದೇವಸ್ಥಾನಕ್ಕೆ ತೆರಳುವ ಹಿರಿಯರು, ಮಹಿಳೆಯರು, ಮಕ್ಕಳು ತೊಂದರೆ ಅನುಭವಿಸುತಿದ್ದರು ಇದೀಗ ಜನರ ನನಗೆ ಆಶೀರ್ವಾದ ನೀಡಿದ್ದಾರೆ ಇಂದು ಈ ಕೆಲಸಕ್ಕೆ ಚಾಲನೆ ನೀಡಿದ್ದೇನೆ.
ಚುನಾವಣೆ ಹಿಂದೆ ಯಾವ ರೀತಿ ಮಾತುಕೊಟ್ಟಿದ್ದೆನೋ ಅದೇ ರೀತಿ ಜನರ ಸಮಸ್ಯೆಗಳಿಗೆ ಸ್ಪಂದಿಸುತ್ತಾ ಬಂದಿದ್ದು, ರೈತರ ಸಮಸ್ಯೆ ಬಗೆಹರಿಸುವ ನಿಟ್ಟಿಲ್ಲಿ ಯಾವುದೇ ಸಮಸ್ಯೆಗಳ ಇತ್ಯರ್ಥಪಡಿಸಲು ಕ್ರಮ ವಹಿಸಲಾಗುವುದು ಎಂದು ಭರವಸೆ ನೀಡಿದರು. ಹೆಚ್ಚಿನದಾಗಿ ಜನರ ಸಮಸ್ಯೆಗೆ ಆದ್ಯತೆ ನೀಡುತ್ತೇನೆ. ಕ್ಷೇತ್ರದಲ್ಲಿ ಹಲವು ಸಮಸ್ಯೆಗಳ ದೂರುಗಳು ನಿತ್ಯವೂ ಬರುತ್ತವೆ ಅವುಗಳನ್ನು ಬಗೆಹರಿಸಲು ಕ್ರಮ ವಹಿಸುತಿದ್ದೇನೆ. ಗ್ರಾಮಸ್ಥರು ಒಗ್ಗಟ್ಟಿನಿಂದ ಗ್ರಾಮಗಳ ಅಭಿವೃದ್ಧಿಗೆ ಕೈಜೋಡಿಸಬೇಕು. ಗ್ರಾಮಗಳ ಅಭಿವೃದ್ಧಿ ಕಡೆ ಗಮನ ಹರಿಸಿ. ನಿಮ್ಮ ಗ್ರಾಮಗಳ ಅಭಿವೃದ್ಧಿಗೆ ನೇರವಾಗಿ ನನ್ನನ್ನು ಭೇಟಿ ಮಾಡಿ ಚರ್ಚಿಸಿ, ಸಮಸ್ಯೆ ಬಗೆಹರಿಸಿಕೊಳ್ಳಲು ಪ್ರಯತ್ನಿಸಿ ಎಂದು ಸಲಹೆ ನೀಡಿದರು. ಬಳಿಕ ಕಾಮಗಾರಿ ಉತ್ತಮವಾಗಿ ಪೂರ್ಣಗೊಳಿಸಲು ಅಧಿಕಾರಿಗಳಿಗೆ ಗುತ್ತಿಗೆದಾರರಿಗೆ ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಪರುಶುರಾಮ, ಉಪಾಧ್ಯಕ್ಷರಾದ ಸಂಜುಕುಮಾರ ಮಾಶೆಟ್ಟಿ, ಗ್ರಾಮ ಪಂ ಮಾಜಿ ಅಧ್ಯಕ್ಷೆ ಈಶ್ವರಿ ಹಣಮಂತಪ್ಪ, ಗ್ರಾಪಂ ಸದಸ್ಯ ಶಿವಕುಮಾರ ಕೋಳಾರೆ, ಗ್ರಾಪಂ ಸದಸ್ಯ ಸತೀಶ ಸಿಕೇಂದಪುರ, ಗ್ರಾಪಂ ಸದಸ್ಯೆ ಮೀನಾಕುಮಾರಿ, ಮುಖಂಡರಾದ ಹಣಮಂತಪ್ಪ ಮೈಲಾರೆ, ಮಾಣಿಕಪ್ಪ ಖಾಶೆಂಪುರ, ಬಸವರಾಜ ಸಿಂದಬAದಗಿ, ಸಂತೋಷ ಸೋರಳ್ಳಿ, ಬಸವರಾಜ ಪಟೋದಿ, ಶಿವಕುಮಾ ಬಿರಗೆ, ಕಾಶಿನಾಥ ಕೋಳಾರೆ, ಶಿವರಾಜ ಮೂಲಗೆ, ಗಂಗಾಧರ ರೋಢಾ, ಚನ್ನಬಸಪ್ಪ ಕೋಳಾರೆ, ಮಾಣಿಕಪ್ಪಾ ಮತ್ತಿತರರು ಉಪಸ್ಥಿತರಿದ್ದರು.