ಲೋಕಸಭೆ ಸಾರ್ವತ್ರಿಕ ಚುನಾವಣೆ ಘೋಷಣೆ ಹಿನ್ನಲೆಯಲ್ಲಿ ರಾಜಕೀಯ ಪಕ್ಷದ ಮುಖಂಡರೊಂದಿಗೆ ಸಭೆ:ಬಿ.ಫೌಜಿಯಾ ತರನ್ನುಮ್
ಕಲಬುರಗಿ,ಮಾ.17: ಭಾರತ ಚುನಾವಣಾ ಆಯೋಗವು ಸಾರ್ವತ್ರಿಕ ಲೋಕಸಭೆ ಚುನಾವಣೆ ಘೋಷಣೆ ಮಾಡಿದ್ದು, ಕಲಬುರಗಿ ಲೋಕಸಭಾ ಕ್ಷೇತ್ರದ ಚುನಾವಣೆ ಮೂರನೇ ಹಂತದಲ್ಲಿ ನಡೆಯಲಿದೆ. ಇನ್ನು ಜಿಲ್ಲೆಯಾದ್ಯಂತ ತಕ್ಷಣದಿಂದಲೆ ಮಾದರಿ ನೀತಿ ಸಂಹಿತೆ ಜಾರಿಗೆ ಬಂದಿದೆ ಎಂದು ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಚುನಾವಣಾಧಿಕಾರಿ ಬಿ.ಫೌಜಿಯಾ ತರನ್ನುಮ್ ರಾಜಕೀಯ ಪಕ್ಷದ ಮುಖಂಡರೊಂದಿಗೆ ಸಭೆ ನಡೆಸಿದರು.
ಶನಿವಾರ ತಮ್ಮ ಕಚೇರಿ ಸಭಾಂಗಣದಲ್ಲಿ ಮಾತನಾಡಿದ ಅವರು, ತಕ್ಷಣದಿಂದಲೆ ನೀತಿ ಸಂಹಿತೆ ಜಾರಿಯಾದ ಹಿನ್ನೆಲೆಯಲ್ಲಿ ಕಲಬುರಗಿ ಲೋಕಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಏಪ್ರಿಲ್ 12 ರಂದು ಚುನಾವಣಾ ಅಧಿಸೂಚನೆ ಹೊರಡಿಸಲಾಗುತ್ತದೆ. ಏಪ್ರಿಲ್ 19ರ ವರೆಗೆ ನಾಮಪತ್ರ ಸಲ್ಲಿಸಲು ಅವಕಾಶವಿದ್ದು, ಏಪ್ರಿಲ್ 20ಕ್ಕೆ ನಾಮಪತ್ರ ಪರಿಶೀಲನಾ ಕಾರ್ಯ ನಡೆಯಲಿದೆ. ಏಪ್ರಿಲ್ 22ಕ್ಕೆ ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನವಾಗಿದೆ. ಮೇ 7ಕ್ಕೆ ಮತದಾನ ಮತ್ತು ಜೂನ್ 4ಕ್ಕೆ ಮತ ಎಣಿಕೆ ನಡೆದು ಅಂದೇ ಫಲಿತಾಂಶ ಹೊರಬೀಳಲಿದೆ. ಒಟ್ಟಾರೆಯಾಗಿ ಜೂನ್ 6 ರೊಳಗೆ ಎಲ್ಲಾ ಚುನಾವಣಾ ಪ್ರಕ್ರಿಯೆ ಮುಗಿಯಲಿದೆ ಎಂದರು.
ಕಾಸಿಗಾಗಿ ಸುದ್ದಿ ಮೇಲೆ ನಿಗಾ:
ಚುನಾವಣೆ ಸಂದರ್ಭದಲ್ಲಿ ಯಾವುದೇ ಅಭ್ಯರ್ಥಿ, ಪಕ್ಷದ ಪರವಾಗಿ ಮತದಾರರ ಮೇಲೆ ಪ್ರಭಾವ ಬೀರುವ ಸುದ್ದಿ ಪ್ರಕಟಣೆ, ಬಿತ್ತರಣೆ ಮಾಡುವ ಮಾಧ್ಯಮ ಸಂಸ್ಥೆಗಳ ಮೇಲೆ ನಿಗಾ ವಹಿಸಲು ಎಂ.ಸಿ.ಎಂ.ಸಿ. ಸಮಿತಿ ರಚಿಸಿಲಾಗಿದೆ. ವಿಶೇಷವಾಗಿ ಸಾಮಾಜಿಕ ಜಾಲತಾಣಗಳ ಮೇಲೆ ಹದ್ದಿನ ಕಣ್ಣು ಇಡಲಾಗಿದ್ದು, ಇದಕ್ಕಾಗಿ ಪ್ರತ್ಯೇಕ ಸೆಲ್ ಸಹ ರಚಿಸಲಾಗಿದೆ ಎಂದು ಡಿ.ಸಿ. ಅವರು ತಿಳಿಸಿದರು.
ಹೋಡಿರ್ಂಗ್ಸ್,ಬಂಟಿಂಗ್ಸ್ ತೆರವಿಗೆ ಸೂಚನೆ:
ಚುನಾವಣೆ ಘೋಷಣೆಯಾಗಿರುವುದರಿಂದ ಜಿಲ್ಲೆಯಾದ್ಯಂತ ಇರುವ ಸರ್ಕಾರಿ ಮತ್ತು ಖಾಸಗಿ ಹೆದ್ದಾರಿ ಫಲಕಗಳು ಮೇಲಿನ ಸರ್ಕಾರಿ ಯೋಜನೆಗಳ ಪ್ರಚಾರದ ಬಂಟಿಂಗ್ಸ್, ಬ್ಯಾನರ್ಸ್, ಭಿತ್ತಿಪತ್ರ, ಕಟೌಟ್ಸ್ಗಳನ್ನು ಕೂಡಲೆ ತೆರವುಗೊಳಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ನಿರ್ದೇಶಿಸಿದೆ ಎಂದರು.
39 ಚೆಕ್ ಪೆÇೀಸ್ಟ್ ಸ್ಥಾಪನೆ:
ನೆರೆಯ ಮಹಾರಾಷ್ಟ್ರ ಮತ್ತು ತೆಲಾಂಗಾಣಾ ಗಡಿ ಸೇರಿದಂತೆ ಜಿಲ್ಲೆಯಾದ್ಯಂತ 39 ಚೆಕ್ ಪೆÇೀಸ್ಟ್ ಸ್ಥಾಪಿಸಲಾಗಿದೆ. 40 ಫ್ಲೈಯಿಂಗ್ ಸ್ಕ್ವಾಡ್ ತಂಡ, 9 ವಿ.ಎಸ್.ಟಿ. ತಂಡ, 9 ವಿ.ವಿ.ಟಿ. ತಂಡ, 10 ಖರ್ಚು ವೆಚ್ಚಗಳ ತಂಡ ರಚಿಸಲಾಗಿದೆ. ಮಾದರಿ ನೀತಿ ಸಂಹಿತೆ ಕಟ್ಟುನಿಟ್ಟಾಗಿ ಜಾರಿಗೆ ತರಲು 202 ಜನರನ್ನು ಸೆಕ್ಟರ್ ಅಧಿಕಾರಿಯನ್ನಾಗಿ ನೇಮಿಸಲಾಗಿದೆ.
85+ ಮತ್ತು ವಿಶೇಷಚೇತನರಿಗೆ ಮನೆಯಿಂದಲೆ ಮತದಾನಕ್ಕೆ ಅವಕಾಶ: 85 ವರ್ಷ ಮೇಲ್ಪಟ್ಟ ವಯೋವೃದ್ಧರು, ವಿಶೇಷ ಚೇತನರಿಗೆ ಮತಗಟ್ಟೆಗೆ ಬಂದು ಮತದಾನ ಮಾಡಲು ಸಾಧ್ಯವಾಗದಿದ್ದಲ್ಲಿ ಅಂತಹ ಮತದಾರರ ಮನೆಗೆ 12ಡಿ ನಮೂನೆ ನೀಡಿ ಮನೆಯಿಂದಲೆ ಮತದಾನಕ್ಕೆ ಅವಕಾಶ ನೀಡಲಾಗಿದೆ.
ಹೆಸರು ನೋಂದಣಿಗೆ ಇನ್ನು ಅವಕಾಶ:
ಇದೂವರೆಗೆ ಮತದಾರರ ಪಟ್ಟಿಯಲ್ಲಿ ಹೆಸರು ನೊಂದಾಯಿಸಿದವರು ನಾಮ ಪತ್ರ ಸಲ್ಲಿಕೆ ಕೊನೆ ದಿನಾಂಕದ 10 ದಿನಗಳ ಮುಂಚೆ ವರೆಗೂ ಆನ್ಲೈನ್ ಮೂಲಕ ಹೆಸರು ನೋಂದಾಯಿಸಬಹುದಾಗಿದೆ ಎಂದು ಡಿ.ಸಿ. ಬಿ.ಫೌಜಿಯಾ ತರನ್ನುಮ್ ಮಾಹಿತಿ ನೀಡಿದರು.
ಸಿ-ವಿಜಿಲ್ನಲ್ಲಿ ದೂರು ಕೊಡಿ:
ಚುನಾವಣಾ ಅಕ್ರಮ, ಎಂ.ಸಿ.ಸಿ. ಉಲ್ಲಂಘನೆ ಸೇರಿದಂತೆ ಚುನಾವಣೆಗೆ ಸಂಬಂಧಿಸಿದ ಏನೇ ದೂರುಗಳಿದಲ್ಲಿ ಸಿ-ವಿಜಿಲ್ ತಂತ್ರಾಂಶ ಮತ್ತು 1950 ಟೋಲ್ ಫ್ರೀ ಸಂಖ್ಯೆಗೆ ಕರೆ ಮಾಡಿ ದೂರು ಸಲ್ಲಿಸಬಹುದಾಗಿದೆ. ವಿವಿಧ ತಂಡಗಳು ತಪಾಸಣೆ ಸಂದರ್ಭದಲ್ಲಿ ವಶಕ್ಕೆ ಪಡೆಯಲಾದ ಹಣ, ಇತರೆ ಬೆಲೆ ಬಾಳುವ ವಸ್ತುಗಳ ಪರಿಶೀಲನೆಗೆ ಜಿಲ್ಲಾ ಪಂಚಾಯತ್ ಸಿ.ಇ.ಓ ನೇತೃತ್ವದಲ್ಲಿ ಕ್ಯಾಶ್ ರಿಡ್ರೆಸಲ್ ಸಮಿತಿ ರಚಿಸಲಾಗಿದೆ.
ಸ್ವೀಪ್ ಚಟುವಟಿಕೆ ಚುರುಕು:
ಜಿಲ್ಲಾ ಪಂಚಾಯತ್ ಸಿ.ಇ.ಓ ಮತ್ತು ಸ್ವೀಪ್ ಸಮಿತಿ ಅಧ್ಯಕ್ಷ ಭಂವರ್ ಸಿಂಗ್ ಮಾತನಾಡಿ, ಜಿಲ್ಲೆಯಾದ್ಯಂತ ಕಳೆದ 6 ತಿಂಗಳಿನಿಂದ ಮತದಾರರಲ್ಲಿ ಜಾಗೃತಿ ಮೂಡಿಸುವ ಕೆಲಸ ನಿರಂತರವಾಗಿ ಮಾಡಲಾಗಿದೆ. ಇದೀಗ ಚುನಾವಣೆ ಘೋಷಣೆಯಾಗಿದ್ದರಿಂದ ಸ್ವೀಪ್ ಚಟುವಟಿಕೆ ಮತ್ತಷ್ಟು ಚುರುಕುಗೊಳಿಸಲಾಗುವುದು. ವಿಶೇಷವಾಗಿ ವಿಧಾನಸಭಾವಾರು ಕ್ಷೇತ್ರದ ಒಟ್ಟಾರೆ ಮತದಾನ ಪ್ರಮಾಣಕ್ಕಿಂತ ಶೇ.10 ರಷ್ಟು ಕಡಿಮೆ ಇರುವ 118, ಶೇ.25ರಷ್ಟು ಕಡಿಮೆ ಇರುವ 31 ಹಾಗೂ ಶೇ.50ರಷ್ಟು ಕಡಿಮೆ ಇರುವ 34 ಮತಗಟ್ಟೆಗಳನ್ನು ಗುರುತಿಸಿದ್ದು, ಇಲ್ಲಿ ಮತದಾನ ಪ್ರಮಾಣ ಹೆಚ್ಚಳಕ್ಕೆ ಹೆಚ್ಚಿನ ಒತ್ತು ನೀಡಲಾಗುವುದು ಎಂದರು.
ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಅಕ್ಷಯ ಹಾಕೈ ಮಾತನಾಡಿ, ಜಿಲ್ಲಾದ್ಯಂತ ಮುಕ್ತ, ನ್ಯಾಯಸಮ್ಮತ ಹಾಗೂ ನಿರ್ಭತಿಯಿಂದ ಮತ ಚಲಾವಣೆಗೆ ಸೂಕ್ತ ಪೋಲಿಸ್ ಭದ್ರತೆ ನೀಡಲಾಗುತ್ತದೆ. ವಿಶೇಷವಾಗಿ ವಲನರೇಬಲ್, ಕ್ರೀಟಿಕಲ್ ಮತಗಟ್ಟೆ ವ್ಯಾಪ್ತಿಯಲ್ಲಿ ಮತದಾರರಲ್ಲಿ ಆತ್ಮವಿಶ್ವಾಸ ತುಂಬುವ ಕೆಲಸ ಮಾಡಲಾಗುತ್ತದೆ. ಸಿ.ಆರ್.ಪಿ.ಎಫ್. ಪ್ಯಾರಾ ಮಿಲಿಟತರಿ ಪೋರ್ಸ ಬರಲಿದೆ. ಸಾಮಾಜಿಕ ಜಾಲತಾಣದಲ್ಲಿ ಯಾರಾದರೂ ಆಕ್ಷೇಪಾರ್ಹ ಅಂಶಗಳ ಬಗ್ಗೆ ಪ್ರಸಾರ ಮಾಡಿದಲ್ಲಿ ಕಾನೂನು ರೀತಿ ಕ್ರಮಕೈಗೊಳ್ಳಲಾಗುವುದೆಂದರು.
ಇದೇ ಸಂದರ್ಭದಲ್ಲಿ ಅಪರ ಜಿಲ್ಲಾ ರಾಯಪ್ಪ ಹುಣಸಗಿ ಸೇರಿದಂತೆ ಆಯಾ ಪಕ್ಷದ ಮುಖಂಡರು ಭಾಗವಹಿಸಿದ್ದರು.