ಬೀದರ್: ನೀತಿ ಸಂಹಿತೆ ಜಾರಿ; ಫ್ಲೆಕ್ಸ್, ಬ್ಯಾನರ್ ತೆರವು
ಬೀದರ್:ಮಾ.17: ಲೋಕಸಭಾ ಚುನಾವಣೆಗೆ ದಿನಾಂಕ ಘೋಷಣೆಯಾಗಿ ಮಾದರಿ ನೀತಿ ಸಂಹಿತೆ ಜಾರಿಗೆ ಬಂದಿರುವುದರಿಂದ ನಗರದಲ್ಲಿ ಶನಿವಾರ ಸಂಜೆ ಫ್ಲೆಕ್ಸ್, ಬ್ಯಾನರ್ ತೆರವುಗೊಳಿಸಲಾಯಿತು.
ಜಿಲ್ಲಾ ಚುನಾವಣಾಧಿಕಾರಿ ನಿರ್ದೇಶನದ ಮೇರೆಗೆ ಚುನಾವಣಾ ಹಾಗೂ ನಗರಸಭೆ ಸಿಬ್ಬಂದಿ ನಗರದಲ್ಲಿ ಜಂಟಿ ಕಾರ್ಯಾಚರಣೆ ನಡೆಸಿ ಎಲ್ಲಾ ರೀತಿಯ ಫ್ಲೆಕ್ಸ್, ಬ್ಯಾನರ್‍ಗಳನ್ನು ತೆರವುಗೊಳಿಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿ, ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ, ತಹಶೀಲ್ದಾರ್ ಕಚೇರಿ, ಪ್ರವಾಸಿ ಮಂದಿರ ಸೇರಿದಂತೆ ಇತರೆ ಸರ್ಕಾರಿ ಕಚೇರಿಗಳ ಆವರಣ ಹಾಗೂ ಹೊರಭಾಗದಲ್ಲಿ ಅಳವಡಿಸಿದ್ದ ರಾಜ್ಯ ಹಾಗೂ ಕೇಂದ್ರ ಸರ್ಕಾರದ ವಿವಿಧ ಯೋಜನೆಗಳಿಗೆ ಸಂಬಂಧಿಸಿದ ಫ್ಲೆಕ್ಸ್‍ಗಳನ್ನು ತೆರವುಗೊಳಿಸಲಾಯಿತು. ಇನ್ನು, ನಗರದ ಡಾ.ಬಿ.ಆರ್. ಅಂಬೇಡ್ಕರ್ ವೃತ್ತ, ಬಸವೇಶ್ವರ ವೃತ್ತ, ಬೊಮ್ಮಗೊಂಡೇಶ್ವರ ವೃತ್ತ, ಹೊಸ ಬಸ್ ನಿಲ್ದಾಣ, ನೆಹರೂ ಕ್ರೀಡಾಂಗಣ, ಮಡಿವಾಳೇಶ್ವರ ವೃತ್ತ, ಹಡಪದ ಅಪ್ಪಣ್ಣ ವೃತ್ತ ಸೇರಿದಂತೆ ಹಲವು ಕಡೆಗಳಲ್ಲಿ ಅಳವಡಿಸಿದ್ದ ವಿವಿಧ ರಾಜಕೀಯ ಪಕ್ಷಗಳ ಫ್ಲೆಕ್ಸ್, ಬ್ಯಾನರ್‍ಗಳನ್ನು ತೆರವುಗೊಳಿಸಿದರು.
ನಗರಸಭೆಗೆ ಸೇರಿದ ಬೃಹತ್ ಹೋಡಿರ್ಂಗ್‍ಗಳ ಮೇಲೆ ಹಾಕಿದ್ದ ರಾಜಕೀಯ ಪಕ್ಷಗಳ ಪ್ರಚಾರದ ಫ್ಲೆಕ್ಸ್‍ಗಳನ್ನೂ ತೆಗೆಯಲಾಯಿತು. ನಗರದ ಪ್ರಮುಖ ರಸ್ತೆ, ವೃತ್ತಗಳು ಸೇರಿದಂತೆ ಎಲ್ಲೆಂದರಲ್ಲಿ ಬೇಕಾಬಿಟ್ಟಿ ಫ್ಲೆಕ್ಸ್, ಬ್ಯಾನರ್ ಅಳವಡಿಸಲಾಗಿತ್ತು. ಇದರಿಂದ ಸಂಚಾರಕ್ಕೆ ತೊಂದರೆಯಾಗುತ್ತಿದ್ದು, ತೆರವುಗೊಳಿಸುವಂತೆ ಸಂಘ ಸಂಸ್ಥೆಗಳು ಹಲವು ಸಲ ಮನವಿ ಸಲ್ಲಿಸಿದ್ದವು. ಆದರೆ, ಯಾವುದೇ ಪ್ರಯೋಜನವಾಗಿರಲಿಲ್ಲ. ಈಗ ನೀತಿ ಸಂಹಿತೆ ಜಾರಿಗೆ ಬಂದಿರುವುದರಿಂದ ನಗರಸಭೆ ಕಾರ್ಯಾಚರಣೆ ನಡೆಸಿ, ಫ್ಲೆಕ್ಸ್, ಬ್ಯಾನರ್‍ಗಳನ್ನು ತೆರವುಗೊಳಿಸಿದ್ದು, ನಗರ ಸುಂದರವಾಗಿ ಕಾಣುತ್ತಿದೆ.
‘ಆಯುಧ ಪೆÇಲೀಸ್ ಠಾಣೆಗೆ ಒಪ್ಪಿಸಿ’
‘ಚುನಾವಣೆ ನೀತಿ ಸಂಹಿತೆ ಜಾರಿಗೆ ಬಂದಿರುವುದರಿಂದ ಅನುಮತಿ ಪಡೆದು ಆಯುಧ ಹೊಂದಿದವರು ಕೂಡಲೇ ಸಮೀಪದ ಪೆÇಲೀಸ್ ಠಾಣೆಗಳಲ್ಲಿ ಜಮೆ ಮಾಡಬೇಕು. ಸಾರ್ವಜನಿಕ ಸ್ಥಳಗಳಲ್ಲಿ ಆಯುಧ ತೆಗೆದುಕೊಂಡು ಹೋಗುವುದು ಪ್ರದರ್ಶಿಸುವುದು ನಿಷೇಧಿಸಲಾಗಿದೆ. ಬ್ಯಾಂಕಿನ ಸೆಕ್ಯೂರಿಟಿ ಗಾರ್ಡ್ ಹೊರತುಪಡಿಸಿ ಬೇರೆ ಯಾರೂ ಆಯುಧಗಳನ್ನು ಇಟ್ಟುಕೊಳ್ಳುವಂತಿಲ್ಲ. ಚುನಾವಣೆ ಪ್ರಕ್ರಿಯೆ ಪೂರ್ಣಗೊಂಡ ನಂತರ ಜೂ. 6ರ ಬಳಿಕ ಆಯುಧಗಳನ್ನು ಹಿಂಪಡೆಯಬಹುದು’ ಎಂದು ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ ತಿಳಿಸಿದ್ದಾರೆ.