ರಾಘವೇಂದ್ರ ಶ್ರೀಗಳ ರಥೋತ್ಸವ
ಸಂಜೆವಾಣಿ ವಾರ್ತೆ
ಸಿರುಗುಪ್ಪ, ಮಾ.17: ನಗರದ ವೇಣುಗೋಪಾಲಸ್ವಾಮಿ ದೇವಸ್ಥಾನದಲ್ಲಿ ಮಂತ್ರಾಲಯ ಶ್ರೀ ರಾಘವೇಂಧ್ರ ಸ್ವಾಮಿಗಳ 429ನೇ ವರ್ಧಂತಿ ಅಂಗವಾಗಿ ದೇವಸ್ಥಾನದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಮತ್ತು ರಥೋತ್ಸವ ನಡೆಯಿತು.
ಶ್ರೀ ವೇಣುಗೋಪಾಲಸ್ವಾಮಿ ದೇವಸ್ಥಾನದಲ್ಲಿ ಶ್ರೀ ವೇಣುಗೋಪಾಲಸ್ವಾಮಿ ಮತ್ತು ಶ್ರೀ ರಾಘವೇಂದ್ರ ಶ್ರೀಗಳ ಮೃತಿಕ ಬೃಂದಾವನಕ್ಕೆ ವಿವಿಧ ಅಭಿಷೇಕಗಳನ್ನು ನಡೆಸಲಾಯಿತು. ನಂತರ ಪೂಜೆ ನೆರವೇರಿಸಿ ವಿವಿಧ ಹೂಗಳು ಮತ್ತು ಬೆಳ್ಳಿಯ ಆಭರಣಗಳಿಂದ ಅಲಂಕರಿಸಿ ಮಹಾಮಂಗಳಾರತಿ ಮಾಡಲಾಯಿತು. ನೂರಾರು ಭಕ್ತರು ಸ್ವಾಮಿಯ ದರ್ಶನ ಪಡೆದರು.
ನಂತರ ನಗರದ ಪ್ರಮುಖ ಬೀದಿಗಳಲ್ಲಿ ಶ್ರೀ ವಾದಿರಾಜ ಸ್ವಾಮಿ ಮತ್ತು ಶ್ರೀ ರಾಘವೇಂದ್ರ ಸ್ವಾಮಿಗಳ ಉತ್ಸವ ಮೂರ್ತಿಯನ್ನು ರಥದಲ್ಲಿ ಕೂಡಿಸಿ ರಥೋತ್ಸವ ನಡೆಸಲಾಯಿತು. ಭಕ್ತರು ತೇರನ್ನೆಳೆದರು.
One attachment • Scanned by Gmail