ಘನತ್ಯಾಜ್ಯ ನಿರ್ವಹಣೆಗೆ ಜಾಗೃತಿ
೧೭sm೨/೧೭sm೨ ಠಿhoಣo
ಬೆಂಗಳೂರು, ಮಾ.೧೭-ಬಿಬಿಎಂಪಿಯ ದಕ್ಷಿಣ ವಲಯ ವ್ಯಾಪ್ತಿಯಲ್ಲಿ ಘನತ್ಯಾಜ್ಯ ನಿರ್ವಹಣೆಗೆ ಕುರಿತಂತೆ ಸಾರ್ವಜನಿಕ ಸ್ಥಳಗಳಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡಲಾಯಿತು.
ನಗರದಲ್ಲಿಂದು ಘನತ್ಯಾಜ್ಯ ನಿರ್ವಹಣೆ ಕುರಿತಂತೆ ದಕ್ಷಿಣ ವಲಯದ ವಿವಿಧ ಸ್ಥಳಗಳಲ್ಲಿ ’ತ್ಯಾಜ್ಯ ವಿಂಗಡಣೆ, ಪರಿಸರ ಸ್ವಚ್ಛತೆ ಹಾಗೂ ಏಕ ಬಳಕೆ ಪ್ಲಾಸ್ಟಿಕ್ ನಿಷೇಧದ’ ಕುರಿತಂತೆ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಸಂಬಂಧ ದಕ್ಷಿಣ ವಲಯದ ವಲಯ ಆಯುಕ್ತೆ ವಿನೋತ್ ಪ್ರಿಯಾ, ಜಂಟಿ ಆಯುಕ್ತ ಶಿವಕುಮಾರ್ ಅಧ್ಯಕ್ಷತೆ ಹಾಗೂ ಮುಖ್ಯ ಅಭಿಯಂತರ ಎಸ್.ವಿ ರಾಜೇಶ್ ನೇತೃತ್ವದಲ್ಲಿ ಸ್ಥಳೀಯ ಮಟ್ಟದಲ್ಲಿ ಸಾಮೂಹಿಕವಾಗಿ ಐಇಸಿ ಚಟುವಟಿಕೆಯನ್ನು ನಡೆಸಲಾಯಿತು.
ದಕ್ಷಿಣ ವಲಯದಲ್ಲಿ ಘನತ್ಯಾಜ್ಯ ವಿಲೇವಾರಿ, ಹಸಿ ಕಸ, ಒಣ ಕಸ ಹಾಗೂ ಸ್ಯಾನಿಟರಿ ಕಸ ವಿಂಗಡಣೆ, ಮೂಲದಲ್ಲಿಯೆ ತ್ಯಾಜ್ಯವನ್ನು ಸಂಸ್ಕರಿಸುವ, ಏಕ ಬಳಕೆ ಪ್ಲಾಸ್ಟಿಕ್ ಬಳಕೆ ನಿಷೇಧ, ರಸ್ತೆ ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ತ್ಯಾಜ್ಯ ಬಿಸಾಡದಿರುವುದು, ಖಾಲಿ ನಿವೇಶನಗಳಲ್ಲಿ ಕಸ ಹಾಕದಿರುವುದು ಸೇರಿದಂತೆ ಇನ್ನಿತರೆ ವಿಷಯಗಳ ಕುರಿತು ನಾಗರೀಕರಲ್ಲಿ ಜಾಗೃತಿ ಮೂಡಿಸಲಾಯಿತು.
ಪ್ರತಿನಿತ್ಯ ಆಟೋ ಟಿಪ್ಪರ್ ಗಳ ಮೂಲಕ ಮೆನೆ ಮೆನೆಗೆ ತರಳಿ ಹಸಿ ಕಸ ಸಂಗ್ರಹಿಸಲಾಗುತ್ತದೆ. ಇನ್ನು ವಾರಕ್ಕೆ ಎರಡು ದಿನಗಳ ಕಾಲ ಒಣ ಕಸವನ್ನು ಸಂಗ್ರಹಿಸಲಾಗುತ್ತದೆ. ಎಲ್ಲಾ ನಾಗರೀಕರು ರಸ್ತೆ, ಬೀದಿ ಬದಿ ಹಾಗೂ ಖಾಲಿ ನಿವೇಶನಗಳಲ್ಲಿ ಕಸವನ್ನು ಬಿಸಾಡದೆ ಆಟೋ ಟಿಪ್ಪರ್ ಗಳಿಗೆ ಕಸವನ್ನು ನೀಡಿ ನಗರವನ್ನು ಸ್ವಚ್ಛ ಸುಂದರ ನಗರವನ್ನಾಗಿಸುವ ಪಣವನ್ನು ಎಲ್ಲರೂ ತೊಡೋಣ ಎಂದು ಅರಿವು ನೀಡಿದರು.
ಘನತ್ಯಾಜ್ಯ ಸಮರ್ಪಕ ನಿರ್ವಹಣೆಯ ಕುರಿತು ಭಿತ್ತಿ ಪತ್ರಗಳನ್ನು ಹಂಚುತ್ತಾ, ರಸ್ತೆಯುದ್ದಕ್ಕೂ ಜಾಗೃತಿ ಘೋಷಣೆಗಳನ್ನು ಕೂಗುತ್ತಾ ನಾಗರೀಕರಲ್ಲಿ ಅರಿವು ಮೂಡಿಸುವ ದೃಶ್ಯ ಕಂಡಿತು.