ರಾಷ್ಟ್ರೀಯ ಲೋಕ ಅದಾಲತ್‍ದಲ್ಲಿ 277 ಪ್ರಕರಣ ವಿಲೇವಾರಿಗೊಳಿಸಿ7,94,33,281 ರೂ. ಗಳ ಪರಿಹಾರ ಮೊತ್ತ ಮಂಜೂರು
ಕಲಬುರಗಿ:ಮಾ.16:ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ಕಲಬುರಗಿ ಉಚ್ಚ ನ್ಯಾಯಾಲಯ ಕಾನೂನು ಸೇವಾ ಸಮಿತಿ ವತಿಯಿಂದ ಶನಿವಾರದಂದು ರಾಷ್ಟ್ರೀಯ ಲೋಕ ಅದಾಲತ್‍ನ್ನು ಆಯೋಜಿಸಿ, ಒಟ್ಟು 277 ಪ್ರಕರಣಗಳನ್ನು ವಿಲೇವಾರಿ ಮಾಡಿ 7,94,33,281 ರೂ.ಗಳ ಪರಿಹಾರ ಮೊತ್ತವನ್ನು ಮಂಜೂರು ಮಾಡಲಾಗಿದೆ ಎಂದು ಕಲಬುರಗಿ ಉಚ್ಛ ನ್ಯಾಯಾಲಯದ ಕಾನೂನು ಸೇವಾ ಸಮಿತಿಯ ಕಾರ್ಯದರ್ಶಿಗಳಾದ ದಯಾನಂದ ವೀ. ಹಿರೇಮಠ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಈ ರಾಷ್ಟ್ರೀಯ ಲೋಕ ಅದಾಲತ್‍ನಲ್ಲಿ ಮೋಟಾರು ವಾಹನ ವಿಮೆ ಪ್ರಕರಣಗಳನ್ನು ಕರ್ನಾಟಕ ಉಚ್ಛ ನ್ಯಾಯಾಲಯ ಕಲಬುರಗಿ ಪೀಠದಲ್ಲಿ ಸಂಧಾನದ ಮೂಲಕ ಇತ್ಯರ್ಥಪಡಿಸಲಾಯಿತು.
ಈ ಲೋಕ ಅದಾಲತ್‍ನಲ್ಲಿ ಗೌರವಾನ್ವಿತ ನ್ಯಾಯಮೂರ್ತಿಗಳಾದ ಜಿ.ಬಸವರಾಜ, ಸಿ.ಎಮ್.ಜೋಶಿ ಹಾಗೂ ಕೆ.ವಿ.ಅರವಿಂದ ಅವರು ಪಾಲ್ಗೊಂಡಿದ್ದರು.