ಮಲ ತ್ಯಾಜ್ಯ ನಿರ್ವಹಣಾ ಘಟಕ ಸ್ಥಾಪನೆಗೆ ಭೂಮಿ ಪೂಜೆ
ಸಂಜೆವಾಣಿ ವಾರ್ತೆ
ಕೊಳ್ಳೇಗಾಲ ಮಾ 16 :- ಮಲ ತ್ಯಾಜ್ಯ ನಿರ್ವಹಣಾ ಘಟಕ ಸ್ಥಾಪನೆಗೆ ಸುಮಾರು 70ಲಕ್ಷ ರೂ ವೆಚ್ಚದಲ್ಲಿ ನಿರ್ಮಾಣಕ್ಕೆ ಶಾಸಕ ಮಂಜುನಾಥ್ ಅವರು ಭೂಮಿ ಪೂಜೆ ನೆರವೇರಿಸಿದರು.
ತಾಲೂಕಿನ ಕಾಮಗೆರೆ, ಕೊಂಗರಹಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಗುಂಡಾಲ್ ಜಲಾಶಯದ ಮುಖ್ಯ ರಸ್ತೆಯ ಪಕ್ಕದಲ್ಲಿನ ಕಸ ವಿಲೇವಾರಿ ಘಟಕದ ಪಕ್ಕದಲ್ಲಿ ಮಲ ತ್ಯಾಜ್ಯ ನಿರ್ವಹಣಾ ಘಟಕ ಸ್ಥಾಪನೆಗೆ ಚಾಲನೆ ನೀಡಲಾಯಿತು.
ಈ ವೇಳೆ ಮಾತನಾಡಿದ ಶಾಸಕರು ನಗರ ಪ್ರದೇಶಗಳಲ್ಲಿ ಇಲ್ಲದೇ ಇರುವಂತಹ ಈ ಸೌಲಭ್ಯಗಳನ್ನು ಗ್ರಾಮೀಣ ವ್ಯಾಪ್ತಿಗಳಲ್ಲಿಯೂ ಒದಗಿಸುವ ಉದ್ದೇಶದಿಂದ ಈ ಘಟಕ ನಿರ್ಮಾಣ ಮಾಡಲಾಗುತ್ತಿದೆ.
ಮಲ ತ್ಯಾಜ್ಯ ನಿರ್ವಹಣಾ ಘಟಕವನ್ನು ಅಚ್ಚುಕಟ್ಟಾಗಿ ನಿರ್ವಹಣೆ ಮಾಡುವಂತೆ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.
ಈ ವೇಳೆ ಗ್ರಾಮ ಪಂಚಾಯತ್ ಪಿಡಿಒ ಮಹೇಂದ್ರ, ಅಧ್ಯಕ್ಷ ಚಿಕ್ಕಸ್ವಾಮಿ, ತಾಲೂಕು ಇ.ಒ ಶ್ರೀನಿವಾಸ್, ಕುಡಿಯುವ ನೀರು ನ್ಯೆರ್ಮಲ್ಯ ಎಇಇ ಹರೀಶ್ ಇನ್ನಿತರರು ಹಾಜರಿದ್ದರು.