ನಾಗಮಂಗಲ ಗಲಭೆ: ಎಲ್ಲ ಆಯಾಮಗಳಿಂದ ತನಿಖೆ
ಕಲಬುರಗಿ,ಸೆ.17-ನಾಗಮಂಗಲ ಗಲಭೆಗೆ ಸಂಬಂಧಿಸಿದಂತೆ ಎಲ್ಲ ಆಯಾಮಗಳಿಂದ ತನಿಖೆ ನಡೆಸಲಾಗುತ್ತಿದ್ದು, ತನಿಖಾ ವರದಿ ಬಂದ ನಂತರ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ ತಿಳಿಸಿದರು.
ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಅಹಿತಕರ ಘಟನೆಗೆ ಸಂಬಂಧಿಸಿದಂತೆ ಈಗಾಗಲೇ ತಪ್ಪಿತಸ್ಥ ಪೊಲೀಸ್ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ. ಗಲಭೆಯಲ್ಲಿ ಯಾರ್ಯಾರು ಭಾಗಿಯಾಗಿದ್ದಾರೆ ಎಂಬುದು ತನಿಖೆಯಿಂದ ಬಯಲಿಗೆ ಬರಲಿದೆ ಎಂದರು.
ಶಾಸಕ ಮುನಿರತ್ನ ಅವರನ್ನು ತರಾತುರಿಯಲ್ಲಿ ಬಂಧಿಸಿಲ್ಲ. ದೂರು ದಾಖಲಾದ ನಂತರ ಬಂಧಿಸಲಾಗಿದೆ. ಯಾದಗಿರಿ ಶಾಸಕರ ಮೇಲಿನ ದೂರಿಗೂ ಇದಕ್ಕೂ ವ್ಯತ್ಯಾಸವಿದೆ ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.