ರಾಜ್ಯದ ವೈದ್ಯಕೀಯ ಶಿಕ್ಷಣ ಸಚಿವರ ಪ್ರವಾಸ
ಕಲಬುರಗಿ:ಮಾ.15:ರಾಜ್ಯದ ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವರಾದ ಡಾ. ಶರಣಪ್ರಕಾಶ ಆರ್. ಪಾಟೀಲ ಅವರು ಮಾರ್ಚ್ 16 ರಂದು ಶನಿವಾರ ಬೆಳಿಗ್ಗೆ 10.30 ಗಂಟೆಗೆ ಸೇಡಂ ತಾಲೂಕಿನ ಸಿಂಧನಮಡು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳಿಗೆ ಭೇಟಿ ನೀಡಿ ಕಲಬುರಗಿಯಲ್ಲಿ ವಾಸ್ತವ್ಯ ಮಾಡುವರು.
ಮಾರ್ಚ್ 17 ರಂದು ಭಾನುವಾರ ಸೇಡಂ ತಾಲೂಕಿನ ಜಾಕನಪಲ್ಲಿ ಮತ್ತು ರಂಜೋಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳಿಗೆ ಭೇಟಿ ನೀಡಿ ನಂತರ ಕಲಬುರಗಿಯಲ್ಲಿ ವಾಸ್ತವ್ಯ ಮಾಡುವರು. ಮಾರ್ಚ್ 18 ರಂದು ಸೋಮವಾರ ಕಲಬುರಗಿಯಲ್ಲಿ ಸ್ಥಳೀಯ ಕಾರ್ಯಕ್ರಮದಲ್ಲಿ ಭಾಗವಹಿಸಿ ವಾಸ್ತವ್ಯ ಮಾಡುವರು.