ಲೋಕಸಭಾ ಚುನಾವಣೆ ಹಿನ್ನಲೆ ವಿದ್ಯಾರ್ಥಿ ಪ್ರಣಾಳಿಕೆ ಬಿಡುಗಡೆ
ಕಲಬುರಗಿ,ಮಾ.15: ಎಐಡಿಎಸ್‍ಓ ಜಿಲ್ಲಾ ಸಮಿತಿಯಿಂದ ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ವಿದ್ಯಾರ್ಥಿ ಪ್ರಣಾಳಿಕೆಯನ್ನು ಬಿಡುಗಡೆಗೊಳಿಸಲಾಯಿತು. ಎನ್‍ಈಪಿಯನ್ನು ಹಿಂಪಡೆಯಬೇಕು, ಸರ್ಕಾರಿ ಶಿಕ್ಷಣ ಸಂಸ್ಥೆಗಳನ್ನು ಬಲಪಡಿಸಬೇಕು, ನಾಲ್ಕು ವರ್ಷದ ಪದವಿಯನ್ನು ಹಿಂಪಡೆಯಬೇಕು, ಸರ್ಕಾರಿ ಎಂಜಿನಿಯರಿಂಗ್ ಕಾಲೇಜು ಸ್ಥಾಪಿಸಬೇಕು ಹಾಗೂ ಇನ್ನಿತರ ಆಗ್ರಹಗಳನ್ನು ಈ ಪ್ರಣಾಳಿಕೆಯು ಒಳಗೊಂಡಿದೆ.
ಈ ಪ್ರಣಾಳಿಕೆ ಬಿಡುಗಡೆಯನ್ನು ಉದ್ದೇಶಿಸಿ ಎಐಡಿಎಸ್‍ಓ ಜಿಲ್ಲಾ ಅಧ್ಯಕ್ಷೆ ಸ್ನೇಹಾ ಕಟ್ಟಿಮನಿ ಮಾತನಾಡಿ, ಎಲ್ಲಾ ಸರ್ಕಾರಗಳು ದೇಶದ ನೈಜ ಸಮಸ್ಯೆಗಳನ್ನು ಮರೆಮಾಚುತ್ತಿವೆ. ತಮ್ಮ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಜಾತಿಮತಧರ್ಮದ ವಿಷಯಗಳನ್ನು ಮುನ್ನಲೆಗೆ ತರಲು ಯತ್ನಿಸುತ್ತಿವೆ. ಇಂತಹ ಸಂದರ್ಭದಲ್ಲಿ ವಿದ್ಯಾರ್ಥಿಗಳು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಸಂಸತ್ ನಲ್ಲಿ ಚರ್ಚೆಮಾಡುವ ರೀತಿ ವಿದ್ಯಾರ್ಥಿಗಳು ಪ್ರಜ್ಞಾವಂತಿಕೆಯಿಂದ ಧ್ವನಿಯೆತ್ತಬೇಕಿದೆ ಎಂದರು.ಕಾರ್ಯಕ್ರಮದಲ್ಲಿ ಎಐಡಿಎಸ್‍ಓ ಕಲಬುರಗಿ ಜಿಲ್ಲಾ ಉಪಾಧ್ಯಕ್ಷ ಗೋವಿಂದ ಯಾಳವಾರ, ನಾಗರಾಜ್ ರಾವೂರ್, ಜಿಲ್ಲಾ ಸಮಿತಿ ಸದಸ್ಯ ಸಿದ್ದಾರ್ಥ್ ಸೇರಿದಂತೆ ಹಲವಾರು ವಿದ್ಯಾರ್ಥಿಗಳು ಭಾಗವಹಿಸಿದ್ದರು.