ಸಂಜೀವಿನಿ ಮಹಿಳಾ ಒಕ್ಕೂಟಕ್ಕೆ ಜಿಲ್ಲಾ ಮಟ್ಟದ ಪ್ರಶಸ್ತಿ
ನವಲಗುಂದ,ಮಾ.15: ಸಮೀಪದ ಇಂಬ್ರಾಹಿಂಪುರ ಗ್ರಾಮ ಪಂಚಾಯತ ಮಟ್ಟದ ಸಂಜೀವಿನಿ ಮಹಿಳಾ ಒಕ್ಕೂಟಕ್ಕೆ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಅತ್ಯುತಮ ಸಂಜೀವಿನಿ ಒಕ್ಕೂಟ ಎಂದು ಜಿಲ್ಲಾ ಮಟ್ಟದ ದ್ವಿತೀಯ ಸ್ಥಾನ ಪಡೆದ ಒಕ್ಕೂಟಕ್ಕೆ 75000 ರೂಪಾಯಿಗಳ ನಗದು ಚೆಕ್ ಮತ್ತು ಪ್ರಮಾಣ ಪತ್ರವನ್ನು ನೀಡಿ ಒಕ್ಕೂಟದ ಪದಾಧಿಕಾರಿಗಳಿಗೆ ಧಾರವಾಡ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸ್ವರೂಪ ಟಿ.ಕೆ. ರವರು ಸನ್ಮಾನಿಸಿದ್ದಾರೆ.
ಪ್ರಶಸ್ತಿ ಸ್ವೀಕರಿಸಿದ ಜರೀನಾಬಾನು ನವಲೂರ ಮಾತನಾಡಿದ ಮಹಿಳೆಯರು ಸರ್ಕಾರದ ಸೌಲಭ್ಯಗಳನ್ನು ಪಡೆದು ಸ್ವಾವಲಂಬಿಗಳಾಗಬೇಕು. ಕೆಲವರು ಮೂಢನಂಬಿಕೆಯಿಂದ ಮಹಿಳೆಯರನ್ನು ಉದ್ಯೋಗಕ್ಕೆ ಕಳುಹಿಸಲು ಹಿಂಜರಿಯುತ್ತಾರೆ. ಈ ಪ್ರವೃತ್ತಿ ದೂರವಾಗಿ ಎಲ್ಲ ರಂಗಗಳಲ್ಲಿ ಮಹಿಳೆಯರು ಸಕ್ರಿಯವಾಗಿ ಪಾಲ್ಗೊಳ್ಳುವಂತಾಗಬೇಕು ಎಂದರು.
ಜಿ.ಪಂ. ಮುಖ್ಯ ಲೆಕ್ಕಾಧಿಕಾರಿ ಲಲಿತಾ ಲಮಾಣಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕಿ ಪದ್ಮಾವತಿ, ಜಿಲ್ಲಾ ಕೈಗಾರಿಕಾ ಕೇಂದ್ರದ ಉಪ ನಿರ್ದೇಶಕ ಡಾ. ಭೀಮಪ್ಪ ಎಂ.ಎನ್, ಜಿ.ಪಂ. ಮುಖ್ಯ ಯೋಜನಾಧಿಕಾರಿ ದೀಪಕ ಮಡಿವಾಳರ ಇತರರಿದ್ದರು. ಸಂಜೀವಿನಿ ಸ್ವ ಸಹಾಯ ಸಂಘಗಳ ಸದಸ್ಯರು, ಅಧಿಕಾರಿಗಳು ಉಪಸ್ಥಿತರಿದ್ದರು.