ಗ್ಯಾರಂಟಿ ಸಮಿತಿ ಪದಾಧಿಕಾರಿಗಳ ನೇಮಕ
ಗದಗ, ಮಾ15: ಗದಗ ತಾಲೂಕು ಮಟ್ಟದ ಗ್ಯಾರಂಟಿ ಸಮಿತಿಗೆ ಪದಾಧಿಕಾರಿಗಳನ್ನು ನೇಮಕಗೊಳಿಸಿ ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್ ಅವರು ಆದೇಶ ಹೊರಡಿಸಿದ್ದಾರೆ.
ತಾಲೂಕು ಮಟ್ಟದ ಗ್ಯಾರಂಟಿ ಸಮಿತಿಯ ಅಧ್ಯಕ್ಷರಾಗಿ ಅಶೋಕ ಮಂದಾಲಿ ನೇಮಕಗೊಳಿಸಲಾಗಿದೆ. ಸಮಿತಿಯ ಸದಸ್ಯರ ವಿವರ ಈ ಮುಂದಿನಂತಿದೆ:
ಶಂಭು ಎಸ್ ಕಾಳೆ, ಮೀನಾಕ್ಷಿ ಬೆನಕಣ್ಣವರ, ಸಾವಿತ್ರಿ ಹೂಗಾರ , ದಯಾನಂದ ಪವಾರ,ಸಂಗು ಕೆರಕಲಮಟ್ಟಿ, ನಿಂಗಪ್ಪ ದೇಸಾಯಿ, ಸಂಗಮೇಶ ಹಾದಿಮನಿ, ರಮೇಶ ಹೊನ್ನಿಕಾಯಕರ, ದೇವರೆಡ್ಡಿ ತಿರ್ಲಾಪುರ, ಮಲ್ಲಪ್ಪ ದಂಡಿನ, ಗಣೇಶಸಿಂಗ್ ಮಿಟಾಡೆ, ಮಲ್ಲಪ್ಪ ಬಾರ್ಕೇರ, ಭಾಷಾ ಮಲ್ಲಸಮುದ್ರ, ಕೃಷ್ಣಗೌಡ ಎಚ್ ಪಾಟೀಲ ಸದಸ್ಯರಾಗಿದ್ದು ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಗಳು ಸದಸ್ಯ ಕಾರ್ಯದರ್ಶಿಗಳಾಗಿ ನೇಮಕಗೊಳಿಸಲಾಗಿದೆ.
ಸಮಿತಿಯ ಅಧ್ಯಕ್ಷರು ಹಾಗೂ ಸದಸ್ಯರು ಸರ್ಕಾರ ಆದೇಶದಲ್ಲಿ ತಿಳಿಸಿರುವಂತೆ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಟಾನ ಹಾಗೂ ಮೇಲ್ವಿಚಾರಣೆ ಮಾಡಲು ಜಿಲ್ಲಾಧಿಕಾರಿಗಳು ಆದೇಶದಲ್ಲಿ ತಿಳಿಸಿದ್ದಾರೆ.