ಅನಂತಕುಮಾರ ಹೆಗೆಡೆ ಪಕ್ಷದಿಂದ ಉಚ್ಚಾಟನೆ ಆಗ್ರಹ
ರಾಯಚೂರು.ಮಾ.೧೫- ಸಂವಿಧಾನ ಬದಲಾವಣೆಯಿಂದ ತಿದ್ದುಪಡಿಗೆ ಬದಲಾವಣೆ ಕುರಿತು ಹೇಳಿಕೆ ನೀಡಿರುವ ಸಂಸದ ಅನಂತಕುಮಾರ ಹೆಗಡೆ ಇವರನ್ನು ತಕ್ಷಣವೇ ಬಿಜೆಪಿ ಪಕ್ಷದಿಂದ ಉಚ್ಚಾಟನೆ ಮಾಡುವಂತೆ ಆಗ್ರಹಿಸಿ ಮಾದಿಗ ದಂಡೋರ ಜಿಲ್ಲಾ ಸಮತಿ ಜಿಲ್ಲಾಧಿಕಾರಿಗಳ ಮೂಲಕ ರಾಜ್ಯ ಬಿಜೆಪಿ ಅಧ್ಯಕ್ಷ ಬಿ. ವೈ ವಿಜಯೇಂದ್ರ ಅವರಿಗೆ ಮನವಿ ಸಲ್ಲಿಸಿ ಆಗ್ರಹಿಸಿದ್ದಾರೆ. ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ರವರು ರಚಿಸಿದ ಭಾರತ ದೇಶದ ಸಂವಿಧಾನವನ್ನು ತಿದ್ದುಪಡಿ ಮಾಡಲು ಈ ಬಾರಿ ಬಿಜೆಪಿ ಪಕ್ಷಕ್ಕೆ ಮತ ಹಾಕಿರಿ ಎಂದು ಬಹಿರಂಗವಾಗಿ ಹೇಳಿಕೆ ನೀಡುತ್ತಿರುವ ಸಂಸದ ಅನಂತಕುಮಾರ್ ಹೆಗಡೆಯನ್ನು ತಕ್ಷಣವೇ ಬಿಜೆಪಿ ಪಕ್ಷದಿಂದ ಉಚ್ಚಾಟನೆ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.
ಸಂವಿಧಾನ ಬದಲಾವಣೆ ಕುರಿತು ಪದೇ ಪದೇ ಹೇಳಿಕೆ ನೀಡುತ್ತಿರುವ ಇವರಿಗೆ ಮುಂಬರುವ ಚುನಾವಣೆಯಲ್ಲಿ ಯಾವುದೇ ಕ್ಷೇತ್ರಕ್ಕೂ ಪಕ್ಷದಿಂದ ಟಿಕೇಟ್ ನೀಡಬಾರದು. ಒಂದು ವೇಳೆ ಟಿಕೇಟ್ ನೀಡಿದಲ್ಲಿ ದಲಿತ ಸಮುದಾಯ ಸಂಪೂರ್ಣವಾಗಿ ಬಿಜೆಪಿ ವಿರುದ್ಧ ಮತ ಚಲಾಯಿಸಿ ಅನಂತ್ ಕುಮಾರ್ ಹೆಗಡೆ ಇವರನ್ನು ಕಂಡಕಂಡಲ್ಲಿ ಘೆರಾವ್ ಹಾಕಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಎಲುಬು ಇಲ್ಲದ ನಾಲಿಗೆಯನ್ನು ಹರಿಬಿಟ್ಟು ಮನ ಬಂದಂತೆ ಹೇಳಿಕೆ ನೀಡುತ್ತಿರುವ ಅನಂತಕುಮಾರ್ ಹೆಗಡೆಇವರು ದೇಶದ ೧೪೫ ಕೋಟಿ ಜನರ ಮನಸ್ಸನ್ನು ನೋಯಿಸಿದ್ದು, ಇದು ಮೊದಲ ಬಾರಿಯಲ್ಲ ಈ ಹಿಂದೆ ಹಲವಾರು ಬಾರಿ ಇದೇ. ರೀತಿಯ ಹೇಳಿಕೆ ನೀಡುತ್ತಾ ಬಂದಿದ್ದು, ಇವರು ಕೂಡಲೇ ಬಹಿರಂಗವಾಗಿ ಕ್ಷಮಾಪಣೆ ಕೇಳಬೇಕು. ಅನಂತಕುಮಾರ್ ಹೆಗಡೆ ಇವರು ನೀಡಿರುವ ಸಂವಿಧಾನ ತಿದ್ದುಪಡಿ ಮಾಡುವ ಹೇಳಿಕೆಯನ್ನು ರಾಜ್ಯದ ಗೃಹ ಸಚಿವರು ಸ್ವಯಂ ಪ್ರೇರಿತರಾಗಿ ಕ್ರಿಮಿನಲ್ ಮೊಕದ್ದಮೆ ಹೂಡಬೇಕೆಂದು ಆಗ್ರಹಿಸುತ್ತೇವೆ. ಇನ್ನು ಮುಂದೆ ಯಾವುದೇ ವ್ಯಕ್ತಿ ಸಂವಿಧಾನದ ಬಗ್ಗೆ ಹಗುರವಾಗಿ ಮಾತನಾಡಿದರೆ
ಅವರ ವಿರುದ್ಧ ರಾಜ್ಯಾದ್ಯಂತ ಹೋರಾಟ ತೀವ್ರಗೊಳಿಸಲಾಗುವುದು ಎಂದು ಎಚ್ಚರಿಕೆ ನೀಡಿದದ ಪ್ರತಿಭಟನೆಯನ್ನು ಹಮ್ಮಿಕೊಳ್ಳ ಲಾಗುವುದೆಂದು ಎಚ್ಚರಿಕೆ ನೀಡಿದರು.
ಈ ಸಂದರ್ಭದಲ್ಲಿ ಹೇಮರಾಜ ಆಸ್ಕಿಹಾಳ, ಪ್ರಭು ಮಾರ್ಚಟಲ, ಜಿ.ನರಸಿಂಹಲು ಸೇರಿದಂತೆ ಉಪಸ್ಥಿತರಿದ್ದರು.