ಮಂಜು ನೇಮಕ
ಸಂಜೆವಾಣಿ ವಾರ್ತೆ
ಚಾಮರಾಜನಗರ, ಮಾ. 15- ಜಿಲ್ಲಾ ಬಿಜೆಪಿ ಕಾನೂನು ಪ್ರಕೋಷ್ಠ ಸಂಚಾಲಕರಾಗಿ ವಕೀಲ ಹರವೆ ಮಂಜು ಅವರನ್ನು ನೇಮಕ ಮಾಡಿ ಜಿಲ್ಲಾಧ್ಯಕ್ಷ ಸಿ.ಎಸ್. ನಿರಂಜನ್‍ಕುಮಾರ್ ಅದೇಶ ಹೊರಡಿಸಿದ್ದಾರೆ.
ಜಿಲ್ಲೆಯಲ್ಲಿ ಬಿಜೆಪಿಯನ್ನು ಬಲಗೊಳಿಸುವ ನಿಟ್ಟಿನಲ್ಲಿ ಕಾನೂನು ಪ್ರಕೋಷ್ಠದ ಸಂಚಾಲಕರನ್ನಾಗಿ ನಿಮ್ಮನ್ನು ನೇಮಕ ಮಾಡಿಕೊಂಡಿದ್ದು, ಇಂದಿನಿಂದಲೇ ಹೊಣೆಗಾರಿಕೆಯನ್ನುವಹಿಸಿಕೊಂಡು ಪಕ್ಷವನ್ನು ತಳಮಟ್ಟದಲ್ಲಿ ಸಂಘಟನೆ ಮಾಡುವ ಜೊತೆಗೆ ಮುಂಬರುವ ಎಲ್ಲಾ ಸವಾಲುಗಳನ್ನು ಎದುರಿಸಿ, ಪಕ್ಷದ ವರ್ಚಸ್ಸು ಹಾಗೂ ಸಂಘಟನೆಯನ್ನು ಬಲಗೊಳಿಸಲು ಶ್ರಮವಹಿಸಬೇಕು ಎಂದು ಆದೇಶ ಪ್ರತಿಯಲ್ಲಿ ತಿಳಿಸಿದ್ದಾರೆ.