ಸರ್ದಾರ ವಲ್ಲಭಭಾಯಿ ಪಟೇಲ್ ಪ್ರತಿಮೆಗೆ ಸಿಎಂ ಮಾಲಾರ್ಪಣೆ
ಕಲಬುರಗಿ, ಸೆ.17:ಕಲ್ಯಾಣ ಕರ್ನಾಟಕ ಮಹೋತ್ಸವ ಕಾರ್ಯಕ್ರಮಕ್ಕೆ ತೆರಳುವ ಮುನ್ನ ಕಲ್ಯಾಣ ಕರ್ನಾಟಕದ ಹರಿಕಾರ,ಏಕೀಕರಣದ ರೂವಾರಿ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಪುತ್ಥಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಬೆಳಿಗ್ಗೆ ಮಾಲಾರ್ಪಣೆ ಮಾಡಿದರು.
ಈ ಸಂದರ್ಭದಲ್ಲಿ ಸಚಿವರಾದ ಕೆ.ಎಚ್.ಮುನಿಯಪ್ಪ, ಕೆ.ಜೆ.ಜಾರ್ಜ್, ಪ್ರಿಯಾಂಕ್ ಖರ್ಗೆ, ಸುಧಾಕರ್, ಭೈರತಿ ಸುರೇಶ, ಸಂಸದ ರಾಧಾಕೃಷ್ಣ ದೊಡ್ಡಮನಿ, ಶಾಸಕರಾದ ಅಜಯ್ ಸಿಂಗ್,ಅಲ್ಲಮಪ್ರಭು ಪಾಟೀಲ್, ಶಶೀಲ್ ನಮೋಶಿ, ತಿಪ್ಪಣ್ಣಪ್ಪ ಕಮಕನೂರು ಸೇರಿದಂತೆ ಅನೇಕರು ಇದ್ದರು.