ಪ್ರಜಾಪ್ರಭುತ್ವ ಆಶಯಗಳನ್ನು ಬಿತ್ತರಿಸುವುದು ಅವಶ್ಯಕ : ಪ್ರಾಚಾರ್ಯೆ ಡಾ. ಆರ್.ಎಂ.ಮಿರ್ದೆ
ವಿಜಯಪುರ,ಸೆ.17::ಸಂವಿಧಾನದ ಆಶಯಗಳಾದ ಸಮಾನತೆ, ಸ್ವಾತಂತ್ರ್ಯ ಹಾಗೂ ಭಾತೃತ್ವದ ಆದರ್ಶಗಳನ್ನು ಜನರಲ್ಲಿ ಗಟ್ಟಿಗೊಳಿಸುವಲ್ಲಿ ವಿಶ್ವ ಪ್ರಜಾಪ್ರಭುತ್ವ ದಿನ ಆಚರಿಸುತ್ತಿರುವುದು ನಿಜಕ್ಕೂ ಶ್ಲಾಘನೀಯವಾದದ್ದು. ಸಂವಿಧಾನದ ಆಶಯದಂತೆ ನಡೆಯುವುದು ನಮ್ಮ ಕರ್ತವ್ಯವೂ ಆಗಿದೆ ಎಂದು ಮಹಾವಿದ್ಯಾಲಯದ ಪ್ರಾಚಾರ್ಯ ಡಾ. ಆರ್.ಎಂ. ಮಿರ್ದೆ ಹೇಳಿದರು.
ನಗರದ ಬಿ.ಎಲ್.ಡಿ.ಈ ಸಂಸ್ಥೆಯಎಸ್.ಬಿ ಕಲಾ ಮತ್ತು ಕೆ.ಸಿ.ಪಿ ವಿಜ್ಞಾನ ಮಹಾವಿದ್ಯಾಲಯದಲ್ಲಿ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ಮಹಾವಿದಾಲಯದ ಆವರಣದಲ್ಲಿ ಬೃಹತ್ ಮಾನವ ಸರಪಳಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಈ ವೇಳೆಯಲ್ಲಿ ಸರ್ಕಾರದ ಆದೇಶದಂತೆ ಮಹಾವಿದ್ಯಾಲಯದ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಸರತಿ ಸಾಲಿನಲ್ಲಿ ನಿಂತು ನಾಡಗೀತೆ ಹಾಡಿದರು.
ಈ ಸಂದರ್ಭದಲ್ಲಿ ಮಹಾವಿದ್ಯಾಲಯದ ಪ್ರಾಚಾರ್ಯ ಡಾ.ಆರ್.ಎಂ.ಮಿರ್ದೆ ಸಂವಿಧಾನದ ಪ್ರಸ್ತಾವನೆ ಓದಿದರು. ಮಾನವ ಸರಪಳಿಯಲ್ಲಿ ಕೈ ಕೈ ಹಿಡಿದು ನಿಂತು ನಂತರ ತಮ್ಮ ಎರಡು ಕೈಗಳನ್ನು ಮೇಲಕೆÉತ್ತಿ ಜೈ ಹಿಂದ್À, ಜೈಕರ್ನಾಟಕ ಎಂದು ಘೋಷಣೆ ಕೂಗಿ ಸರಪಳಿ ಕಳಚಲಾಯಿತು.
ಈ ವೇಳೆಯಲ್ಲಿ ಶಿಕ್ಷಣ ಶಾಸ್ತ್ರ ವಿಭಾUದ ಉಪನ್ಯಾಸಕÀ ಪ್ರೊ. ಸಿ.ಎನ್. ಕುನ್ನೂರ ಮಾತನಾಡಿ, ನಮ್ಮ ಭಾರತ ದೇಶ ಬೃಹತ್ತಾದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಹೊಂದಿರುವಂಥದ್ದು. ಅದರ ಆಶಯದಂತೆ ಇಂದು ನಾವು ನ್ಯಾಯ, ಸ್ವಾತಂತ್ರ್ಯ, ಸಮಾನತೆ, ಭ್ರಾತೃತ್ವ, ಜಾತ್ಯಾತೀತದಿಂದ ಬದುಕವಂತಾಗಬೇಕು. ಪ್ರಜಾಸತ್ತಾತ್ಮಕ ಗಣರಾಜ್ಯವಾಗಿ ಸಂವಿಧಾನವನ್ನು ಜನವರಿ 26 1950 ರಲ್ಲಿ ಜಾರಿಗೊಳಿಸುವ ಮೂಲಕ ಭಾರತ ಸ್ವತಂತ್ರಗಣರಾಜ್ಯವಾಯಿತು. ದೇಶದ ಪ್ರಗತಿಗೆ ಮತ್ತು ಅಭಿವೃದ್ದಿಗೆ ಶ್ರಮಿಸಬೇಕಾಗಿದೆ. ಕೇವಲ ಆಚರಣೆಗೆ ಸೀಮಿತವಾಗದೆ ನಾವು ಪ್ರಜಾಪ್ರಭುತ್ವ ಮೌಲ್ಯಗಳು ಅಳವಡಿಸಿಕೊಂಡು ಬದುಕಬೇಕಾಗಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಪ್ರಾಚಾರ್ಯ ಡಾ. ಆರ್.ಎಂ. ಮಿರ್ದೆ, ಉಪ ಪ್ರಾಚಾರ್ಯ ಡಾ. ಅನೀಲ ನಾಯಕ, ಐಕ್ಯೂಎಸಿ ನಿರ್ದೇಶಕ ಡಾ. ಪಿ.ಎಸ್. ಪಾಟೀಲ, ನ್ಯಾಕ್ ಸಂಯೋಜಕ ಡಾ. ಕೆ. ಮಹೇಶಕುಮಾರ, ಎನ್‍ಸಿಸಿ ಅಧಿಕಾರಿ ಡಾ. ರಾಮಚಂದ್ರ ನಾಯಕ, ದೈಹಿಕ ನಿರ್ದೇಶಕ ಎಸ್.ಕೆ. ಪಾಟೀಲ, ಸಾಂಸ್ಕøತಿಕ ವಿಭಾಗದ ಕಾರ್ಯಾಧ್ಯಕ್ಷ ಡಾ. ಶ್ರೀನಿವಾಸ ದೊಡ್ಡಮನಿ, ವiಹಾವಿದ್ಯಾಲಯದ ಎಲ್ಲ ವಿಭಾಗದ ಮುಖ್ಯಸ್ಥರು, ಬೋಧP Àಹಾಗೂ ಬೋಧಕೇತರ ಸಿಬ್ಬಂದಿ ಮತ್ತು ಎನ್‍ಸಿಸಿ, ಎನ್‍ಎಸ್‍ಸ್ ಸ್ವಯಂ ಸೇವಕ ವಿದ್ಯಾರ್ಥಿ ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.