ಹೃದಯದ ರಕ್ಷಣೆಗಾಗಿ ಕ್ರಿಯಾಶೀಲರಾಗಿರಬೇಕು: ಡಾ. ಸಂಪತ ಗುಣಾರಿ
ವಿಜಯಪುರ,ಅ.4: ದಿನನಿತ್ಯ ಕನಿಷ್ಠ 30 ನಿಮಿಷ ಬಿರುಸಿನ ನಡಿಗೆ, ನಿಯಮಿತವಾಗಿ ವ್ಯಾಯಾಮ, 20 ನಿಮಿಷ ಈಜು, ನಿಯಮಿತ ಯೋಗಾಭ್ಯಾಸ ಸೇರಿದಂತೆ ಉತ್ತಮ ಅಭ್ಯಾಸ ರೂಢಿಸಿಕೊಳ್ಳುವ ಮೂಲಕ ಕ್ರೀಯಾಶೀಲರಾಗಿರಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಸಂಪತ ಗುಣಾರಿ ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಸರ್ವೇಕ್ಷಣಾಧಿಕಾರಿಗಳ ಕಛೇರಿ ಎನ್.ಸಿ.ಡಿ.ಘಟಕ, ಭಾರತೀಯ ರೆಡ್ ಕ್ರಾಸ್ ಸೊಸೈಟಿ ಜಿಲ್ಲಾ ಶಾಖೆ, ಡಾ. ಬಿದರಿಯವರ ಅಶ್ವಿನಿ ಆಸ್ಪತ್ರೆ ಹಾಗೂ ಅಶ್ವಿನಿ ಇನ್ಸಿಟ್ಯೂಟ್ ವಿವಿಧ ನರ್ಸಿಂಗ್ ಕಾಲೇಜಗಳು ಇವರ ಸಹಯೋಗದಲ್ಲಿ ಗುರುವಾರ ವಿಶ್ವ ಹೃದಯ ದಿನಾಚರಣೆ ಮತ್ತು ವಿಶ್ವ ರೇಬಿಸ್ ದಿನಾಚರಣೆ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.
ನಿಯಮಿತ ಯೋಗಾಭ್ಯಾಸದಿಂದ ಮಾನಸಿಕ ಒತ್ತಡ ಹಾಗೂ ಉದ್ವೇಗ ನಿಯಂತ್ರಿಸಬಹುದು ಎಂದೂ ಅವರು ಹೇಳಿದರು.
ಅಶ್ವಿನಿ ಆಸ್ಪತ್ರೆಯ ಮುಖ್ಯಸ್ಥ ಚಿಕ್ಕಮಕ್ಕಳ ತಜ್ಞ ಡಾ|| ಎಲ್.ಎಚ್ ಬಿದರಿ ಅವರು ಮಾತನಾಡಿ, ಧೂಮಪಾನ ಮಾಡುವುದರಿಂದ ರಕ್ತದಲ್ಲಿ ಕೊಬ್ಬಿನಾಂಶ ಹೆಪ್ಪುಗಟ್ಟಿ ರಕ್ತನಾಳಗಳನ್ನು ಕುಗ್ಗಿಸುತ್ತದೆ, ನಿಯಮಿತ ವ್ಯಾಯಾಮದಿಂದ ಹೃದಯಾಘಾತವನ್ನು ತಡೆಗಟ್ಟಿಬಹುದು. ಕಾಫಿ-ಚಹಾ ಸೇವನೆ ಮಿತವಾಗಿರಲಿ. ಸಕ್ಕರೆ ಕಾಯಿಲೆಗೆ ನಿಯಮಿತವಾಗಿ ವೈದ್ಯಕೀಯ ಚಿಕಿತ್ಸೆ ಪಡೆಯಬೇಕು. ವರ್ಷಕ್ಕೊಮ್ಮೆ ಹೃದಯ ಪರೀಕ್ಷೆ ಮಾಡಿಸಿಕೊಳ್ಳಬೇಕು. ರಕ್ತದೊತ್ತಡವನ್ನು ನಿಯಮಿತವಾಗಿ ಪರೀಕ್ಷೆ ಮಾಡಿಸಿಕೊಳ್ಳಬೇಕು. ರಕ್ತದೊತ್ತಡವನ್ನು ನಿಯಂತ್ರಣದಲ್ಲಿಟ್ಟುಕೊಳ್ಳಲು ತೂಕ ಹಾಗೂ ಆಹಾರ ಕ್ರಮದ ಬಗ್ಗೆ ಕಾಳಜಿ ವಹಿಸಬೇಕು ಎಂದು ಅವರು ಹೇಳಿದರು.
ಆರೋಗ್ಯ ಧಾಮ ಆಸ್ಪತ್ರೆ ಕಾರ್ಡಿಯಾಲಾಜಿಸ್ಟ್ ಡಾ. ಗೌತಮ ವಗ್ಗರ ಅವರು ಹೃದಯದ ಕಾಳಜಿ ಹಾಗೂ ತಡೆಗಟ್ಟುವಿಕೆ ಕುರಿತು ಉಪನ್ಯಾಸವನ್ನು ನೀಡಿದರು.
ಜಿಲ್ಲಾ ಸರ್ವೆಕ್ಷಣಾಧಿಕಾರಿ ಡಾ. ಅಪ್ಪಾಸಾಹೆಬ ಆರ್ ಇನಾಮದಾರ, ಜಿಲ್ಲಾ ಕ್ಷಯ ರೋಗ ನಿಯಂತ್ರಣಾಧಿಕಾರಿÀ ಡಾ. ಎಮ್ ಬಿ. ಬಿರಾದಾರ, ಜಿಲ್ಲಾ ಮಲೇರಿಯಾ ಅಧಿಕಾರಿ ಡಾ. ಜಾನ್ ಕಟವಟೆ, ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಕೆ.ಡಿ. ಗುಂಡಬಾವಡಿ, ತಾಲೂಕಾ ಆರೋಗ್ಯಾಧಿಕಾರಿ ಡಾ. ಪರಶುರಾಮ ಹಿಟ್ಟನಳ್ಳಿ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಜಿ.ಎಮ್. ಕೋಲೂರ, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಎನ್.ಆರ್. ಬಾಗವಾನ, ಡಾ. ಸುರೆಶ ಪಾಶ್ಚಾಪುರ ಜಿಲ್ಲಾ ಎಪಿಡಮಾಲಾಜಿಸ್ಟ್ ಮತ್ತು ಜಿಲ್ಲಾ ಎನ್.ಸಿ.ಡಿ ಘಟಕದ ಡಾ. ಪ್ರಿಯದರ್ಶಿನಿ ಕೆಂಚರಡ್ಡಿ, ಶ್ರೀಕಾಂತ ಪೂಜಾರಿ, ಅಶ್ವಿನಿ ನರ್ಸಿಂಗ್ ಕಾಲೇಜು ವಿದ್ಯಾರ್ಥಿಗಳು ಹಾಗೂ ಉಪನ್ಯಾಸಕ ವೃಂದ, ಜಿಲ್ಲಾ ಎನ್.ಸಿ.ಡಿ ಘಟಕದ ಸಿಬ್ಬಂದಿ, ನಗರ ಆರೋಗ್ಯ ಕೇಂದ್ರದ ಸಿಬ್ಬಂದಿ, ಆಶಾ ಕಾರ್ಯಕರ್ತೆಯರು, ಆರೋಗ್ಯ ಇಲಾಖೆಯ ಅಧಿಕಾರಿ, ಸಿಬ್ಬಂದಿ ಇತರರು ಉಪಸ್ಥಿತರಿದ್ದರು.