ಗ್ರಾ ಪಂ ಅಧ್ಯಕ್ಷ ಉಪಾಧ್ಯಕ್ಷ ಚುನಾವಣಾ ಪ್ರಕ್ರಿಯೆ
ಕೊಲ್ಹಾರ:ಅ.4: ತಾಲೂಕಿನ ಹಣಮಾಪುರ ಗ್ರಾಮ ಪಂಚಾಯಿತಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ನಡೆಯಿತು.
ಅಧ್ಯಕ್ಷೆಯಾಗಿ ತೇಜಸ್ವಿನಿ ಸಂಗಮೇಶ ಕುಬಕಡ್ಡಿ, ಉಪಾಧ್ಯಕ್ಷರಾಗಿ ಸರಸ್ವತಿ ನಿಂಗನಗೌಡ ಬಿರಾದಾರ ಅವಿರೋಧವಾಗಿ ಆಯ್ಕೆಯಾದರು.
ಒಟ್ಟು 18 ಸದಸ್ಯ ಬಲ ಹೊಂದಿರುವ ಹಣಮಾಪುರ ಗ್ರಾಮ ಪಂಚಾಯಿತಿ ಅಧ್ಯಕ್ಷಸ್ಥಾನ ಬ ವರ್ಗ ಹಾಗು ಉಪಾಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಮೀಸಲು ನಿಗದಿಪಡಿಸಲಾಗಿದ್ದು ಗುರುವಾರ ಚುನಾವಣೆ ಪ್ರಕ್ರಿಯೆ ಜರಗಿತು.
ತಾಲೂಕ ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿ ಸುನೀಲ್ ಮುದ್ದಿನ ಚುನಾವಣಾಧಿಕಾರಿಯಾಗಿ ಕಾರ್ಯನಿರ್ವಹಿಸಿದರು.
ನೂತನ ಅಧ್ಯಕ್ಷೆ ತೇಜಸ್ವಿನಿ ಕುಬಕಡ್ಡಿ ಮಾತನಾಡಿ, ಅವಿರೋಧ ಆಯ್ಕೆಗೆ ಸಹಕರಿಸಿದ ಎಲ್ಲ ಸದಸ್ಯರಿಗೆ ಅಭಿನಂದನೆ ಸಲ್ಲಿಸಿದರು. ಗ್ರಾಮಗಳ ಸಮಸ್ಯೆ ಪರಿಹಾರಕ್ಕಾಗಿ ಶ್ರಮಿಸುತ್ತೇನೆ. ಪಕ್ಷಾತೀತ ನೆಲೆಯಲ್ಲಿ ಅಭೀವೃದ್ಧಿ ಕಾರ್ಯಗಳನ್ನು ಹಂತ ಹಂತವಾಗಿ ಕೈಗೊಳ್ಳುತ್ತೇನೆ ಎಂದು ಭರವಸೆ ನೀಡಿದರು.
ವಿಜಯೋತ್ಸವ. ಅಧ್ಯಕ್ಷ ಉಪಾಧ್ಯಕ್ಷ ಚುನಾವಣಾ ಪ್ರಕ್ರಿಯ ನಂತರ ಅಭಿಮಾನಿಗಳು ಪರಸ್ಪರ ಗುಲಾಲು ಎರಚಿ ಪಟಾಕಿ ಸಿಡಿಸಿ ಸಂಭ್ರಮಿಸಿದರು.
ಈ ಸಂದರ್ಭದಲ್ಲಿ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಕಲ್ಲು ದೇಸಾಯಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಆರ್ ಬಿ ಪಕಾಲಿ ತಾನಾಜಿ ನಾಗರಾಳ,ಇದ್ದರು.