ನಮ್ಮ ಸರ್ಕಾರ ಬಡವರ ಪರ ಸರ್ಕಾರವಾಗಿದೆ:ಸಚಿವ ಈಶ್ವರ ಬಿ. ಖಂಡ್ರೆ
ಬೀದರ: ಮಾ. 14: ನಮ್ಮ ಸರ್ಕಾರ ಬಡವರ ಪರ ಸರಕಾರವಾಗಿದ್ದು ಬಡವರಿಗೆ ಅನುಕೂಲವಾಗಲು 5 ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರಲಾಗಿದೆ ಎಂದು ಅರಣ್ಯ. ಜೈವಿಕ ಮತ್ತು ಪರಿಸರ ಹಾಗೂ ಬೀದರ ಜಿಲ್ಲಾ ಉಸ್ತುವಾರಿ ಸಚಿವರಾದ ಈಶ್ವರ ಬಿ. ಖಂಡ್ರೆ ಹೇಳಿದರು.
ಅವರು ಬುಧವಾರ ಬೀದರ ನಗರದ ಘಾಳೆ ಫಂಕ್ಷನ್ ಹಾಲನಲ್ಲಿ ಹಮ್ಮಿಕೊಂಡಿದ್ದ ಬೀದರ ಜಿಲ್ಲಾ ಗ್ಯಾರಂಟಿ ಸಮಾವೇಶ ಮತ್ತು ಬೀದರ ತಾಲ್ಲೂಕಿನ ಜನಸ್ಪಂಧನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಗೃಹಲಕ್ಷೀ ಯೋಜನೆ ಅಡಿಯಲ್ಲಿ ಮನೆಯ ಯಜಮಾನಿಗೆ ಪ್ರತಿ ತಿಂಗಳು ಎರಡು ಸಾವಿರ ರೂ. ಯಾವುದೇ ಜಾತಿ ಭೇದವನ್ನದೆ ಎಲ್ಲರಿಗೂ ನೀಡುತ್ತಿದ್ದೆವೆ. ರಾಜದಲ್ಲಿ 1 ಕೋಟಿ 25 ಲಕ್ಷ ಜನರಿಗೆ ತಿಂಗಳಿಗೆ 2500 ಕೋಟಿ ಇದಕ್ಕೆ ಕರ್ಚಾಗುತ್ತದೆ. ಅನ್ನಭಾಗ್ಯ ಯೋಜನೆ ಅಡಿಯಲ್ಲಿ 10 ಕೆ.ಜಿ ಅಕ್ಕಿ ನೀಡಲಾಗುತ್ತಿದ್ದು ಇದರ ಲಾಭ ಎಲ್ಲಾ ಜನರಿಗೆ ಸಿಗುತ್ತಿದೆ ಸಿಗದವರು ಮಾಹಿತಿ ನೀಡಬೇಕೆಂದರು.
ಯುವನಿಧಿ ಯೋಜನೆಯಲ್ಲಿ ಪದವಿ ಹಾಗೂ ಡಿಪೆÇ್ಲಮಾ ಪದವಿ ಪಡೆದ ನಿರುದ್ಯೋಗಿ ಯುವಕ ಯುವತಿಯರಿಗೆ 2 ವರ್ಷಗಳವರೆಗೆ ನಿರುದ್ಯೋಗ ಭತ್ಯಯನ್ನು ನಮ್ಮ ಸರ್ಕಾರ ನೀಡುತ್ತಿದೆ. ಶಕ್ತಿ ಯೋಜನೆ ಅಡಿಯಲ್ಲಿ ಮಹಿಳೆಯರು ರಾಜ್ಯದಾದ್ಯಂತ ಸರಕಾರಿ ಬಸ್ಸಿನಲ್ಲಿ ಉಚಿತವಾಗಿ ಪ್ರಯಾಣ ಮಾಡುತ್ತಿದ್ದಾರೆ. ಗೃಹ ಜ್ಯೋತಿ ಯೋಜನೆ ಅಡಿಯಲ್ಲಿ ಎಲ್ಲರ ಮನೆಗಳಿಗೆ 200 ಯುನಿಟ್ ವಿದ್ಯುತ್ ಉಚಿತವಾಗಿ ನೀಡಲಾಗುತ್ತಿದೆ ಎಂದರು.
ಜನರ ಸಣ್ಣಪುಟ್ಟ ಸಮಸ್ಯೆಗಳಾದ ಮಾಶಾಸನ, ಮನಸ್ವಿನಿ, ಮೈತ್ರಿ, ಪಹಣಿ ತಿದ್ದುಪಡಿ ಸೇರಿದಂತೆ ಇತರೆ ಸಮಸ್ಯೆಗಳಿಗೆ ಪರಿಹಾರ ನೀಡಲು ಜನಸ್ಪಂಧನ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ. ಜನರು ಕಛೇರಿಗಳಿಗೆ ಅಲೆದಾಡುವ ಅವಶ್ಯಕತೆ ಇಲ್ಲ ಸರ್ಕಾರವೆ ನಿಮ್ಮ ಮನೆಬಾಗಿಲಿಗೆ ಬರುತ್ತಿದೆ ಎಂದು ಹೇಳಿದರು.
ಈ ಎಲ್ಲಾ ಗ್ಯಾರಂಟಿ ಯೋಜನೆಗಳು ಬರುವ 5 ವರ್ಷಗಳವರೆಗೆ ಮುಂದುವರಿಲಿವೆ. ಬರುವ ದಿನಗಳಲ್ಲಿ ನಿಮ್ಮೆಲ್ಲರ ಬೆಂಬಲ ನಮಗೆ ಇರಬೇಕು. ಮಹಿಳಾ ಸ್ವಸಹಾಯ ಸಂಘಗಳಿಗೆ 5 ಲಕ್ಷ ರೂ. ಶೂನ್ಯ ಬಡ್ಡಿ ದರದಲ್ಲಿ ಸಾಲ ನೀಡಲಾಗುತ್ತಿದ್ದು ಇದರ ಸದುಪಯೋಗವನ್ನು ತಾವೆಲ್ಲರೂ ಪಡೆದುಕೊಳ್ಳಬೇಕು ಎಂದರು. ಬೀದರ ಜಿಲ್ಲೆಯ ಜಿಲ್ಲಾ ಸಂಕೀರ್ಣಕ್ಕೆ ಆಡಳಿತಾತ್ಮಕ ಅನುಮೋದನೆ ನೀಡಲಾಗಿದ್ದು ಇದನ್ನು ಮಾದರಿಯಾಗಿ ಜಿಲ್ಲೆಯಲ್ಲಿ ಮಾಡಲಾಗುವುದು ಎಂದು ಹೇಳಿದರು.
ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಗೆ 3 ಸಾವಿರ ಕೋಟಿ ಅನುದಾನ ಬಂದಿದ್ದು ಅದರಲ್ಲಿ ಬೀದರ ಜಿಲ್ಲೆಗೆ 400 ಕೋಟಿ ಹಣವನ್ನು ವಿವಿಧ ಅಭಿವೃದ್ಧಿ ಯೋಜನೆಗಳಿಗೆ ನೀಡಲಾಗಿದೆ. 2024-25 ನೇ ಸಾಲಿಗೆ 5 ಸಾವಿರ ಕೋಟಿ ಹಣ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿಗೆ ಮಂಜೂರಾಗಿದ್ದು ಅದರಲ್ಲಿ ಬೀದರ ಜಿಲ್ಲೆಗೆ ಅಂದಾಜು 750 ಕೋಟಿ ರೂ ಬರುತ್ತದೆ. ಜಿಲ್ಲೆಯ ಎಲ್ಲಾ ತಾಲ್ಲೂಕಿನಲ್ಲಿ ಜನಸ್ಪಂಧನ ಕಾರ್ಯಕ್ರಮಗಳನ್ನು ಮಾಡುವ ಮೂಲಕ ಜನರ ಸಮಸ್ಯೆಗಳಿಗೆ ಪರಿಹಾರ ನೀಡಲಾಗುತ್ತಿದೆ ಎಂದು ಹೇಳಿದರು.
ಪೌರಾಡಳಿತ ಮತ್ತು ಹಜ್ ಸಚಿವರಾದ ರಹೀಂಖಾನ ಅವರು ಮಾತನಾಡಿ ಜನರ ಸಮಸ್ಯೆಗಳಿಗೆ ಪರಿಹಾರ ನೀಡಲು ಜನಸ್ಪಂಧನ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ ಹಾಗೂ ಸನ್ಮಾನ್ಯ ಮುಖ್ಯಮಂತ್ರಿಗಳು ಪ್ರತಿ ಎರಡು-ಮೂರು ತಿಂಗಳಿಗೊಮ್ಮೆ ಈ ಕಾರ್ಯಕ್ರಮ ಮಾಡಿ ಜನರ ಸಮಸ್ಯೆಗಳಿಗೆ ಪರಿಹಾರ ನೀಡುವಂತೆ ಕ್ಯಾಬಿನೆಟ್‍ನಲ್ಲಿ ಹೇಳಿದ್ದಾರೆ. ಮೊದಲು ಜನರು ತಹಶಿಲ್ದಾರ ಕಚೇರಿ ಹಾಗೂ ಸರಕಾರಿ ಇತರೆ ಇಲಾಖೆಯ ಕಛೇರಿಗಳಿಗೆ ಅಲೆದರು ಕೆಲಸಗಳಾಗುತ್ತಿರಲಿಲ್ಲ ಈಗ ಜನರಿಗೆ ಸ್ಥಳದಲ್ಲಿಯೆ ಪರಿಹಾರ ನೀಡಲಾಗುತ್ತಿದೆ ಎಂದರು.
ಈ ಹಿಂದೆ ಸುಮಾರು ಇಲಾಖೆಗಳಲ್ಲಿ ಅರ್ಜಿ ಪೆಂಡಿಂಗ್ ಇದ್ದವು ಈಗ 90 ಪ್ರತಿಶತ ಕಡಿಮೆಯಾಗಿದೆ. ಈಗ ಎಲ್ಲಾ ಅಧಿಕಾರಿಗಳು ನಿಮ್ಮ ಎದುರಲ್ಲೆ ಇದ್ದಾರೆ ನಿಮ್ಮ ಸಮಸ್ಯೆಗಳಿಗೆ ಸ್ಥಳದಲ್ಲಿ ಪರಿಹಾರ ನೀಡಲಾಗುತ್ತದೆ. ತಮ್ಮ ಯಾವುದೇ ಸಮಸ್ಯೆಗಳಿದ್ದರೆ ನಮ್ಮ ಗಮನಕ್ಕೆ ತನ್ನಿ ನಾವು ಯಾವಾಗಲೂ ನಿಮ್ಮ ಜೊತೆಗೆ ಇದ್ದೆವೆ ಎಂದು ಹೇಳಿದರು.
ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಅವರು ಪ್ರಾಸ್ತಾವಿಕವಾಗಿ ಮಾತನಾಡಿ ಸರ್ಕಾರದ 5 ಗ್ಯಾರಂಟಿ ಯೋಜನೆಗಳನ್ನು ಸರ್ಕಾರ ಜಾರಿಗೆ ತಂದಿದ್ದು ಇದರ ಲಾಭ ಎಷ್ಟು ಜನರಿಗೆ ತಲುಪಿದೆ ಎಂಬ ಮಾಹಿತಿಯನ್ನು ಈಗಾಗಲೇ ಅಂಗನವಾಡಿ ಕಾರ್ಯಕರ್ತರು ಶೇ. ,80 ಪ್ರತಿಶತ ಮನೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸಿದ್ದಾರೆ. ಇನ್ನೂ ಈ ಯೋಜನೆಗಳ ಲಾಭ ಪಡೆಯದ ಜನರು ಇವುಗಳ ಲಾಭ ಪಡೆಯಬೇಕೆಂದು ಹೇಳಿದರು.
ಇದೇ ಸಂದರ್ಭದಲ್ಲಿ ಸಚಿವರು ಮಹಿಳೆಯರಿಗೆ ಉಚಿತವಾಗಿ ಹೊಲಿಗೆ ಯಂತ್ರ. ಮಡಿವಾಳ ಸಮಾಜದವರಿಗೆ ಇಸ್ತ್ರಿ ಪೆಟ್ಟಿಗೆ ಮತ್ತು ಟೇಬಲ. ಬಡಿಗ ಸಮಾಜದವರಿಗೆ ಡ್ರೀಲಿಂಗ್ ಕಟಿಂಗ ಮಶೀನ್. ಹಾಗೂ ಕೃಷಿ ಇಲಾಖೆಯಿಂದ ರೈತರಿಗೆ ಸ್ಪಿಂಕಲರ ಪೈಪಗಳನ್ನು ವಿತರಿಸಿದರು.
ಅಂಗವಿಕಲರ ಮಾಶಾಸನ ಆದೇಶವಾದರು ಹಣ ಬಂದಿಲ್ಲ. ರೇಷನ್ ಕಾರ್ಡನಲ್ಲಿ ಹೆಸರಿದ್ದರು ಹಣ ಬರುತ್ತಿಲ್ಲ. ಸಂದ್ಯಾ ಸುರಕ್ಷಾ. ಸೇರಿದಂತೆ ಇವರೆ ಅಹವಾಲುಗಳನ್ನು ಸಾರ್ವಜನಿಕರು ಸಚಿವರಿಗೆ ಸಲ್ಲಿಸಿದರು ಕೆಲವು ಸಮಸ್ಯೆಗಳಿಗೆ ಸ್ಥಳದಲ್ಲಿಯೆ ಪರಿಹಾರ ನೀಡಲಾಯಿತು ಮತ್ತು ಇತರೆ ಸಮಸ್ಯೆಗಳಿಗೆ ಪರಿಹಾರ ನೀಡಲು ಸಂಬಂಧಿಸಿದ ಇಲಾಖೆಯ ಅಧಿಕಾರಿಗಳಿಗೆ ಸಚಿವರು ಸೂಚನೆ ನೀಡಿದರು.
ಈ ಕಾರ್ಯಕ್ರಮದಲ್ಲಿ ಬೀದರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಬಸವರಾಜ ಜಾಬಶೆಟ್ಟಿ, ನಗರ ಸಭೆ ಅಧ್ಯಕ್ಷರಾದ ಮೊಹ್ಮದ ಗೌಸ್, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಗಿರೀಶ್ ಬದೊಲೆ, ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಚನ್ನಬಸವಣ್ಣ ಎಸ್.ಎಲ್, ಬೀದರ ಸಹಾಯಕ ಆಯುಕ್ತರಾದ ಲವೀಶ್ ಓರ್ಡಿಯಾ, ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ, ಉಪ ಅರಣ್ಯ ಸಂರಕ್ಷಣಾಧಿಕಾರಿ ವಾನತಿ ಎಂ. ಎಂ . ಸೇರಿದಂತೆ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಹಾಗೂ ವಿವಿಧ ಅಹವಾಲುಗಳೊಂದಿಗೆ ಆಗಮಿಸಿದ ಸಾರ್ವಜನಿಕರು ಭಾಗವಹಿಸಿದ್ದರು.