ಪಟ್ಟಣದ ರಸ್ತೆ ದುರಸ್ತಿ ಕಾರ್ಯ ಪೂರ್ಣಗೊಳಿಸುವಂತೆ ಆಗ್ರಹ
ಸಂಜೆವಾಣಿ ವಾರ್ತೆ,
ಮರಿಯಮ್ಮನಹಳ್ಳಿ, ಮಾ.14: ಪಟ್ಟಣದ ನಾಣಿಕೇರಿ ವೃತ್ತ ಸೇರಿದಂತೆ ದೇವಲಾಪುರ ರಸ್ತೆಯುದ್ದಕ್ಕೂ ಪಾವಗಡ ಕುಡಿಯುವ ನೀರಿನ ಯೋಜನೆಯ ಕಾಮಗಾರಿ ಕೆಲಸದಲ್ಲಿ ಹಾಳಾದ ರಸ್ತೆಯ ದುರಸ್ತಿ ಕಾರ್ಯ ನೆನೆಗುದಿಗೆ ಬಿದ್ದಿದ್ದು, ಸರಿಪಡಿಸದೇ ಇದ್ದಲ್ಲಿ ಮುಂದಿನ ದಿನಗಳಲ್ಲಿ ರಸ್ತೆ ತಡೆ ಮಾಡಿ ಹೋರಾಟ ಮಾಡಲಾಗುವುದು ಎಂದು ಬಿಜೆಪಿ ವಿಜಯನಗರ ಯುವಮೋರ್ಚ ಜಿಲ್ಲಾಧ್ಯಕ್ಷ ಕಿಚಿಡಿ ಕೊಟ್ರೇಶ್ ಉಪ ತಹಶೀಲ್ದಾರರ ಮುಖಾಂತರ ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ನೀಡಿದರು.
ಮರಿಯಮ್ಮನಹಳ್ಳಿಯ ಮುಖಾಂತರ ಪಾವಗಡಕ್ಕೆ ತುಂಗಭದ್ರಾ ನದಿಯಿಂದ ಕುಡಿಯುವ ನೀರಿನ ಪೈಪ್ ಲೈನ್ ಕಾಮಗಾರಿ ಕೆಲಸ ಕಳೆದ ಆರು ತಿಂಗಳಿಂದ ನಡೆದಿದೆ. ಕಾಮಗಾರಿ ಕೆಲಸ ಮುಗಿದಿದ್ದು, ಗುತ್ತಿಗೆದಾರರು ರಸ್ತೆ ದುರಸ್ತಿ ಕಾರ್ಯ ಮಾಡದೇ ವಿಳಂಬ ಮಾಡುತ್ತಿದ್ದಾರೆ. ಇದರಿಂದ ಪಟ್ಟಣದ ಮುಖ್ಯ ರಸ್ತೆಯಲ್ಲಿ ಅಪಘಾತಗಳು ಸಂಭವಿಸುತ್ತಿವೆ. ಆದರೂ ಈ ಬಗ್ಗೆ ಯಾರೂ ತಲೆಕೆಡಿಸಿಕೊಳ್ಳುತ್ತಿಲ್ಲ. ಈ ಕೂಡಲೇ ರಸ್ತೆ ದುರಸ್ತಿ ಕಾರ್ಯವನ್ನು ಕೈಗೆತ್ತಿಕೊಳ್ಳದೇ ರಸ್ತೆ ದುರಸ್ತಿ ಕಾರ್ಯ ಪೂರ್ಣಗೊಳಿಸದಿದ್ದರೇ ಮುಂದಿನ ದಿನಗಳಲ್ಲಿ ರಸ್ತೆ ತಡೆ ಮಾಡಿ ಹೋರಾಟ ಮಾಡುತ್ತೇವೆ ಎಂದು ಎಚ್ಚರಿಸಿದರು.
ನಂತರ ಮಾತನಾಡಿದ ವಿಜಯನಗರ ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಕೃಷ್ಙನಾಯ್ಕ್ ಮಾತನಾಡಿ, ಪಾವಗಡ ಕುಡಿಯುವ ನೀರಿನ ಯೋಜನೆ ಕಾಮಗಾರಿಯ ಗುತ್ತಿಗೆದಾರರು ರಸ್ತೆ ದುರಸ್ತಿ ಕಾರ್ಯದಲ್ಲಿ ವಿಳಂಬ ಮಾಡುತ್ತಿರುವುದರಿಂದ ರಸ್ತೆ ಅಪಘಾತಗಳು ಹೆಚ್ಚುತ್ತಿದ್ದು ಈ ಕೂಡಲೇ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಪ.ಪಂನ ಉಪ ತಹಶೀಲ್ದಾರ ನಾಗರಾಜ,ಯುವಮೋರ್ಚ ಜಿಲ್ಲಾ ಕಾರ್ಯದರ್ಶಿ ಹನುಮನಾಯ್ಕ್,  ಪಕ್ಷದ ನಾಯಕರುಗಳಾದ ಮಜ್ಗಿ ನಾಗರಾಜ್, ಯುವಮೋರ್ಚ ಕಾರ್ಯದರ್ಶಿಭರತ್ ಕುಮಾರ್,ಎಲ್.ಮಂಜುನಾಥ,ಶ್ರೀನಿವಾಸ ಬ್ಯಾಲಕುಂದಿ,ಅಂಬರೀಶ್, ರಾಜೇಶ್,ಶಶಿಕುಮಾರ್ ಹಾಗೂ  ಇತರರು ಇದ್ದರು.
One attachment • Scanned by Gmail