ಪ್ರಾದೇಶಿಕ ಕೇಂದ್ರದಲ್ಲಿ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ
ಕಲಬುರಗಿ : ಸೆ.17:ನಗರದ ಅಬ್ದುಲ್ ನಜೀರ್ ಸಾಬ್ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಂಸ್ಥೆಯ ಪ್ರಾದೇಶಿಕ ಕೇಂದ್ರ ಕಲಬುರಗಿಯಲ್ಲಿ ಕಲ್ಯಾಣ ಕರ್ನಾಟಕ ಉತ್ಸವ ಆಚರಣೆ ಮಾಡಲಾಯಿತು.
ಪ್ರಾದೇಶಿಕ ಕೇಂದ್ರದ ಉಪ ನಿರ್ದೇಶಕರಾದ ಧನರಾಜ್ ಬೋರಾಳೆ ಅವರು ರಾಷ್ಟ್ರಪಿತ ಮಹಾತ್ಮ ಗಾಂಧಿ, ಸರ್ದಾರ ವಲ್ಲಭಬಾಯಿ ಪಟೇಲ್ ಹಾಗೂ ಡಾ.ಬಿ.ಆರ್. ಅಂಬೇಡ್ಕರ ರವರ ಭಾವಚಿತ್ರಗಳಿಗೆ ಪೂಜೆ ಸಲ್ಲಿಸಿ, ಧ್ವಜಾರೋಹಣ ಮಾಡಿ ಮಾತನಾಡುತ್ತ ನಮ್ಮ ದೇಶಕ್ಕೆ ಸ್ವಾತಂತ್ರ್ಯ ಬಂದು ಒಂದು ವರ್ಷದ ನಂತರ ಕಲ್ಯಾಣ ಕರ್ನಾಟಕಕ್ಕೆ ಸ್ವಾತಂತ್ರ್ಯ ಲಭಿಸಿತು ಇದಕ್ಕೆ ಅನೇಕ ಮಹನಿಯರ ತ್ಯಾಗ ಬಲಿದಾನದಿಂದ ಲಭಿಸಿದೆ ಎಂದರು.
ಕಾರ್ಯಕ್ರಮದಲ್ಲಿ ಸಂಸ್ಥೆಯ ಬೋಧಕರಾದ ಶಿವಪುತ್ರಪ್ಪ ಗೊಬ್ಬೂರು, ಡಾ.ರಾಜು ಕಂಬಳಿಮಠ, ಸಂತೋಷ ಎನ್. ಆಡಳಿತ ಮತ್ತು ಲೆಕ್ಕಾಧಿಕಾರಿಗಳಾದ ಕು.ಸಾಕ್ಷಿ ಪಾಟೀಲ್, ವ್ಯವಸ್ಥಾಪಕರಾದ ಪ್ರಶಾಂತ ಅಂಗಡಿ, ಸಿಬ್ಬಂಧಿಗಳಾದ ಅರ್ಚನ ಪಾಟೀಲ್, ಅಶ್ವೀನಿ ಪೂಜಾರಿ, ಮತ್ತು ಸಿಬ್ಬಂಧಿಗಳು ಉಪಸ್ಥಿತರಿದ್ದರು.