ಮಾ.16ರಂದು ಬಿಜೆಪಿ ಮಂಡಲ ಪದಾಧಿಕಾರಿಗಳ ಪದಗ್ರಹಣ.

ಸಂಜೆವಾಣಿವಾರ್ತೆ
ಹರಪನಹಳ್ಳಿ.ಮಾ.13; ಬಿಜೆಪಿ ಮಂಡಲ ನೂತನ ಅಧ್ಯಕ್ಷ ಕೆ.ಲಕ್ಷ್ಮಣ್ ಹಾಗೂ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ಮಾ.16ರಂದು ಬೆಳಗ್ಗೆ 10.30ಕ್ಕೆ ಪಟ್ಟಣದ ತರಳಬಾಳು ಕಲ್ಯಾಣ ಮಂಟಪದಲ್ಲಿ ನಡೆಯಲಿದೆ ಎಂದು ಬಿಜೆಪಿ ವಿಜಯನಗರ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಸಂಜೀವರೆಡ್ಡಿ ತಿಳಿಸಿದರು.ಪಟ್ಟಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಅಂದಿನ ಪದಗ್ರಹಣ ಕಾರ್ಯಕ್ರಮಕ್ಕೆ ಶಾಸಕ ಬೈರತಿ ಬಸವರಾಜ, ಸಂಸದ ಜಿ.ಎಂ.ಸಿದ್ದೇಶ್ವರ ಸೇರಿದಂತೆ ರಾಜ್ಯ ನಾಯಕರು ಆಗಮಿಸುತ್ತಾರೆ, ಹರಪನಹಳ್ಳಿಯಲ್ಲಿ ಈವರೆಗೂ ನಿಲುಗಡೆಯಾಗಿದ್ದ ಪಕ್ಷದ ಚಟುವಟಿಕೆಗಳು ಪುನಾರಂಭವಾಗುತ್ತವೆ, ಈ ಕಾರ್ಯಕ್ರಮಕ್ಕೆ ಇಲ್ಲಿಯ ಮಾಜಿ ಶಾಸಕ ಜಿ.ಕರುಣಾಕರರೆಡ್ಡಿಯವರನ್ನು ಆಹ್ವಾನಿಸಲಾಗುವುದು ಎಂದು ತಿಳಿಸಿದರು.ಕಳೆದ ವಿಧಾನಸಭಾ ಚುನಾವಣೆಯಲ್ಲಿ ವ್ಯತ್ಯಾಸ ಆಗಿರಬಹುದು, ಕೆಲವರಿಗೆ ನೋವು ಆಗಿರಬಹುದು, ಕೆಲವರಲ್ಲಿ ಭಿನ್ನಾಭಿಪ್ರಾಯವ ಇರಬಹುದು ಇವೆಲ್ಲಾ ಸರಿಪಡಿಸುವ ಕೆಲಸವನ್ನು ರಾಜ್ಯ ಮುಖಂಡರು ಮಾಡುತ್ತಾರೆ ಎಂದು ಹೇಳಿದರು.ಗ್ರಾಮ ಚಲೋ ಅಭಿಯಾನ, ಬೂತ್‌ಗೆ ಒಬ್ಬ ಕಾರ್ಯಕರ್ತನ ನೇಮಕ, ಪ್ರತಿ ಗ್ರಾ.ಪಂಗೆ ವಾಟ್ಸಪ್ ಗ್ರೂಪ್ ರಚನೆ, ಗೋಡೆ ಬರಹ ಕೆಲಸದಲ್ಲಿ ಹರಪನಹಳ್ಳಿ ಮಂಡಲ ಘಟಕ ರಚನೆ ತಡವಾಯಿತು, ಇಂತಹ ಸಂದರ್ಭದಲ್ಲಿ ರಾಜ್ಯದ್ಯಾಕ್ಷರ ಸೂಚನೆ ಮೇರೇಗೆ ಕುಡುಚಿ ಮಾಜಿ ಶಾಸಕ ಪಿ.ರಾಜೀವ ಇಲ್ಲಿಗೆ ಬಂದು ಎಲ್ಲರ ಅಭಿಪ್ರಾಯ ಸಂಗ್ರಹ ಮಾಡಿ ರಾಜ್ಯದ್ಯಕ್ಷರ ಗಮನಕ್ಕೆ ತಂದರು ನಂತರ ಹರಪನಹಳ್ಳಿ ಮಂಡಲ ಅಧ್ಯಕ್ಷರನ್ನಾಗಿ ಕೆ.ಲಕ್ಷ್ಮಣ ಅವರನ್ನು ನೇಮಕ ಮಾಡಲಾಯಿತು ಎಂದು ಅಧ್ಯಕ್ಷರ ನೇಮಕ ಕುರಿತು ಮಾಹಿತಿ ನೀಡಿದರು.ಗ್ಯಾರಂಟಿಗಳ ಹಾಗೂ ಸುಳ್ಳು ಭರವಸೆಗಳ ಮೂಲಕ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ಬಿಜೆಪಿ ಕಾರ್ಯಕರ್ತರಲ್ಲಿ ನಿರ್ಲಿಪ್ತಾ ಭಾವನೆ ಇತ್ತು, ಬಿ.ವೈ.ವಿಜಯೇಂದ್ರ ಪಕ್ಷದ ಚುಕ್ಕಾಣಿ ಹಿಡಿದ ನಂತರ ಕಾರ್ಯಕರ್ತರಲ್ಲಿ ಹೊಸ ಹುಮ್ಮಸ್ಸು ತಂದು ಬಿಜೆಪಿ ಪಕ್ಷಕ್ಕೆ ಶಕ್ತಿ ತುಂಬಿದ್ದಾರೆ ಎಂದು ಹೇಳಿದರು.