16 ರಂದು ಕಾಂಗ್ರೆಸ್ ಸೇವಾ ದಳದ ವಿಭಾಗ ಮಟ್ಟದ ಸಭೆ
ಕಲಬುರಗಿ,ಮಾ.13-ಕರ್ನಾಟಕ ಪ್ರದೇಶ ಕಾಂಗ್ರೆಸ್ ಸೇವಾ ದಳದ ವಿಭಾಗ ಮಟ್ಟದ ಸಭೆ ಮಾ.16 ರಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾ ಕಾಂಗ್ರೆಸ್ ಪಕ್ಷದ ಕಾರ್ಯಾಲಯದಲ್ಲಿ ಪಕ್ಷದ ಜಿಲ್ಲಾ ಅಧ್ಯಕ್ಷರಾದ ಜಗದೇವ ಗುತ್ತೇದಾರ ಕಾಳಗಿ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ.
ಅಂದಿನ ಸಭೆಗೆ ಅಖಿಲ ಭಾರತ ಕಾಂಗ್ರೆಸ್ ಸೇವಾ ದಳದ ಕಾರ್ಯದರ್ಶಿ ಮತ್ತು ಉಸ್ತುವಾರಿ ಬಲರಾಮಸಿಂಗ್ ಬದೋರಿಯಾ, ರಾಜ್ಯ ಅಧ್ಯಕ್ಷ ಎಂ.ರಾಮಚಂದ್ರ ಅವರು ಆಗಮಿಸಲಿದ್ದಾರೆ. ಮುಂಬರುವ ಲೋಕಸಭಾ ಚುನಾವಣೆ ಮತ್ತು ಕಾಂಗ್ರೆಸ್ ಸೇವಾ ದಳದ ಸಂಘಟನೆಯ ಬಗ್ಗೆ ಸಭೆಯಲ್ಲಿ ಚರ್ಚಿಸಲಾಗುವುದು ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸೇವಾದಳದ ರಾಜ್ಯ ಉಪಾಧ್ಯಕ್ಷರಾದ ಕುಪೇಂದ್ರ ಎಸ್.ಧೂಳೆ ತಿಳಿಸಿದ್ದಾರೆ.
ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ, ಸಚಿವ ಡಾ.ಶರಣಪ್ರಕಾಶ ಪಾಟೀಲ, ಆಳಂದ ಶಾಸಕ ಹಾಗೂ ಮುಖ್ಯಮಂತ್ರಿಗಳ ಸಲಹೆಗಾರರಾದ ಬಿ.ಆರ್.ಪಾಟೀಲ, ಜೇವರ್ಗಿ ಶಾಸಕ ಹಾಗೂ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಡಾ.ಅಜಯಸಿಂಗ್, ಶಾಸಕಿ ಹಾಗೂ ಕರ್ನಾಟಕ ರೇಷ್ಮೆ ಉದ್ಯಮಗಳ ನಿಮಗಮದ ಅಧ್ಯಕ್ಷರಾದ ಕನೀಜ್ ಫಾತಿಮಾ, ಅಫಜಲಪುರ ಶಾಸಕ ಎಂ.ವೈ.ಪಾಟೀಲ, ಶಾಸಕ ಅಲ್ಲಮಪ್ರಭು ಪಾಟೀಲ, ವಿಧಾನ ಪರಿಷತ್ ಸದಸ್ಯ ತಿಪ್ಪಣ್ಣಪ್ಪ ಕಮಕನೂರ, ಮಾಜಿ ಸಚಿವ ರೇವು ನಾಯಕ ಬೆಳಮಗಿ, ಮುಖಂಡರಾದ ಸುಭಾಷ ರಾಠೋಡ್ ಅವರು ಸಭೆಯಲ್ಲಿ ಭಾಗವಹಿಸುವರು.
ಆದ್ದರಿಂದ ಕಲಬುರಗಿ ವಿಭಾಗದ ಬೀದರ್, ಕಲಬುರಗಿ, ರಾಮಚೂರು, ಕೊಪ್ಪಳ, ಬಳ್ಳಾರಿ, ಯಾದಗಿರಿ, ವಿಜಯನಗರ ಜಿಲ್ಲೆಯ ಎಲ್ಲಾ ಮುಖ್ಯ ಸಂಘಟಿಕರು, ರಾಜ್ಯ ಮಟ್ಟದ ಪದಾಧಿಕಾರಿಗಳು, ತರಬೇತಿ ಪಡೆದಿರುವ ಸೇವಾ ದಳದ ಕಾರ್ಯಕರ್ತರು ಹಾಗೂ ಮಹಿಳಾ ಸಂಘಟಕಿಯರು, ಯಂಗ್ ಬ್ರಿಗೇಡ್ ಸಂಘಟಿಕರು, ಸಂಚಾಲಕರು ಸರಿಯಾದ ಸಮಯಕ್ಕೆ ಸಮವಸ್ತ್ರದೊಂದಿಗೆ ಟೋಪಿ ಸಹಿತ ಕಡ್ಡಾಯವಾಗಿ ಹಾಜರಾಗಬೇಕು ಎಂದು ಅವರು ತಿಳಿಸಿದ್ದಾರೆ.