ಪಬ್ಲಿಕ್‍ಪರೀಕ್ಷೆ ರದ್ದು ಪಡಿಸಲು ಆಗ್ರಹಿಸಿ ಪ್ರತಿಭಟನೆ
ಕಲಬುರಗಿ,ಮಾ.13: ಎಐಡಿಎಸ್‍ಓ ಜಿಲ್ಲಾ ಸಮಿತಿಯಿಂದ ಪ್ರತಿಭಟನೆ ನಡೆಸಿ 5,8,9ನೇ ತರಗತಿಯ ಪಬ್ಲಿಕ್‍ಪರೀಕ್ಷೆ ಯನ್ನು ಪ್ರಸ್ತುತ ಶೈಕ್ಷಣಿಕ ವರ್ಷ ರದ್ದುಗೊಳಿಸಲು ಆಗ್ರಹಿಸಲಾಯಿತು.5,8 ಹಾಗೂ 9ನೇ ತರಗತಿ ವಿದ್ಯಾರ್ಥಿಗಳ ಪಬ್ಲಿಕ್ ಪರೀಕ್ಷೆಗಳನ್ನು ರದ್ದುಗೊಳಿಸಬೇಕೆಂದು ಸುಪ್ರೀಂಕೋರ್ಟ್ ತೀರ್ಪು ಹೊರಡಿಸಿದೆ. ಆದರೆ, ರಾಜ್ಯ ಸರ್ಕಾರವು ಆದೇಶ ಹೊರಡಿಸಿ ಪರೀಕ್ಷೆಗಳನ್ನು ಮಧ್ಯಂತರದಲ್ಲಿ ತಡೆ ಹಿಡಿದಿದ್ದು, ಪರೀಕ್ಷೆಗಳನ್ನು ಮುಂದೂಡಿದೆ. ಸರ್ವೋಚ್ಚ ನ್ಯಾಯಾಲಯ ತೀರ್ಪು ನೀಡಿದ ನಂತರವೂ, ಪರೀಕ್ಷೆ ರದ್ದುಗೊಳಿಸುವ ಬದಲು, ರಾಜ್ಯ ಸರ್ಕಾರ ಪರೀಕ್ಷೆಯನ್ನು ಮುಂದೂಡಿದೆ. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಈ ಶೈಕ್ಷಣಿಕ ವರ್ಷದ ಪರೀಕ್ಷೆಗಳನ್ನು ರದ್ದುಪಡಿಸಿ, ಮುಂದಿನ ವರ್ಷ ಪ್ರಜಾತಾಂತ್ರಿಕ ಪ್ರಕ್ರಿಯೆ ಮೂಲಕ ಪಬ್ಲಿಕ್ ಪರೀಕ್ಷೆಗಳನ್ನು ನಡೆಸುವ ಕುರಿತು ನಿರ್ಧಾರ ಕೈಗೊಳ್ಳಬೇಕೆಂದು ಎಐಡಿಎಸ್‍ಓ ಆಗ್ರಹಿಸಿದೆ.ಪ್ರತಿಭಟನೆಯಲ್ಲಿ ಜಿಲ್ಲಾ ಅಧ್ಯಕ್ಷ ಸ್ನೇಹಾ ಕಟ್ಟಿಮನಿ, ಜಿಲ್ಲಾ ಕಾರ್ಯದರ್ಶಿ ತುಳಜರಾಮ ಎನ್.ಕೆ,ಉಪಾಧ್ಯಕ್ಷೆ ಪ್ರೀತಿ ದೊಡ್ಡಮನಿ, ಗೋವಿಂದ ಯಾಳವಾರ, ನಾಗರಾಜ ರಾವೂರ ಸದಸ್ಯರಾದ ಸಂತೋಷ ಸೇರಿ ಹಲವಾರು ವಿದ್ಯಾರ್ಥಿಗಳು ಭಾಗವಹಿಸಿದ್ದರು.