ಕ್ರೀಡಾಂಗಣ ಕಾಮಗಾರಿ ಗುಣಮಟ್ಟದಿಂದ ನಡೆದಿದೆ
ಚಿತ್ತಾಪೂರ:ಮಾ.13: ತಾಲೂಕಿನಲ್ಲಿ ಉತ್ತಮ ಕ್ರೀಡಾ ವಾತಾವರಣ ಹಾಗೂ ಕ್ರೀಡಾಪಟುಗಳಿಗೆ ಅನುಕೂಲ ಮಾಡಿಕೊಡುವ ಉದ್ದೇಶದಿಂದ ಸಚಿವರು 6.30 ಕೋಟಿ ಅನುದಾನ ಬಿಡುಗಡೆ ಮಾಡಿದ್ದಾರೆ ಪ್ರಸ್ತುತ ಕಾಮಗಾರಿ ಪ್ರಗತಿಯಲ್ಲಿದ್ದು, ಕಾಮಗಾರಿ ಗುಣಮಟ್ಟದಿಂದ ನಡೆಯುತ್ತಿದೆ ಎಂದು ಬ್ಯಾಡ್ಮಿಂಟನ್ ಅಸೋಸಿಯೇಷನ್ ಅಧ್ಯಕ್ಷ ಸಾಬಣ್ಣ ಕಾಶಿ ಹೇಳಿದರು.
ಪಟ್ಟಣದ ಹೊರವಲಯದ ಕ್ರೀಡಾಂಗಣದಲ್ಲಿ ಹಮ್ಮಿಕೊಂಡಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಕೆಲವರು ಇಲ್ಲಸಲ್ಲದ ಹೇಳಿಕೆ ನೀಡಿ ಗೊಂದಲ ಮೂಡಿಸುತ್ತಿದ್ದಾರೆ. ಕಾಮಗಾರಿ ಗುಣಮಟ್ಟದಿಂದ ಮಾಡಲು ಸಚಿವರು ಈಗಾಗಲೇ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದ್ದಾರೆ ಎಂದರು. ಜೊತೆಗ ಕಾಮಗಾರಿ ನಡೆಯುವ ಸ್ಥಳದಲ್ಲಿ ಗುತ್ತಿಗೆದಾರರು. ಅಧಿಕಾರಿಗಳು ಉಪಸ್ಥಿತರಿದ್ದು ನಿಗಾ ವಹಿಸುತ್ತಿದ್ದಾರೆ ಜೊತೆಗೆ ನಮ್ಮ ಬ್ಯಾಡ್ಮಿಂಟನ್ ಅಸೋಸಿಯೇಷನ್ ಕಮಿಟಿಯವರು ಸಹ ನಿಗಾ ವಹಿಸುತ್ತಿದ್ದೆವೆ ಎಂದರು.
ವಾಲೀಬಾಲ, ಕಬ್ಬಡ್ಡಿ, ಕ್ರಿಕೆಟ್, ಹಾಕಿ, ಪುಟ್ಬಾಲ್, ಅಥ್ಲೆಟಿಕ ಸೇರಿದಂತೆ ದೇಶಿಯ ಕ್ರೀಡಾಪಟುಗಳ ಬಹುದಿನಗಳ ಬೇಡಿಕೆಯಾಗಿದ್ದ ಕ್ರೀಡಾಂಗಣ ನಿರ್ಮಾಣವಾಗುತ್ತಿರುವುದು ಹೆಮ್ಮೆಯ ಸಂಗತಿಯಾಗಿದ್ದು, ಶಿಕ್ಷಣಕ್ಕಾಗಿ. ಎಜುಕೇಶನ್ ಹಬ್ ಮಾಡಿದಂತೆ ಕ್ರೀಡಾಪಟುಗಳಿಗೆ ಕ್ರೀಡಾ ಹಬ್ ಮಾಡುವ ಗುರಿಯನ್ನು ಸಚಿವರು ಹೊಂದಿದ್ದಾರೆ ಎಂದರು
ಈ ಸಂದರ್ಭದಲ್ಲಿ ಬ್ಯಾಡ್ಮಿಂಟನ್ ಅಸೋಸಿಯೇಷನ್ ಉಪಾಧ್ಯಕ್ಷ ಸಂತೊಷ ಕಲಾಲ್, ಕಾರ್ಯದರ್ಶಿ ಬಾಬು ಕಾಶಿ, ಲಖನ್‍ಸಿಂಗ್ ರಜಪುತ್, ಶ್ರೀನಿವಾಸ ಪೇಂದು, ರೋಹಿತ್ ಚವ್ಹಾಣ, ಅಬ್ದುಲ್ ಖದೀರ್, ವಿಜಯಕುಮಾರ ಗಡ್ಡಿಮನಿ ಇದ್ದರು.