ಮೂಲ ಸೌಕರ್ಯ ಒದಗಿಸಲು ಬದ್ಧ :ಶಾಸಕ ಡಾ.ಶೈಲೇಂದ್ರ ಬೆಲ್ದಾಳೆ
ಬೀದರ:ಮಾ.13:ಶಾಲಾ, ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಮೂಲ ಸೌಕರ್ಯ ಕಲ್ಪಿಸಲು ನಾನು ಬದ್ಧವಾಗಿದ್ದೇನೆ ಈ ನಿಟ್ಟಿನಲ್ಲಿ ಸರ್ಕಾರಿ ಶಾಲೆ-ಕಾಲೇಜುಗಳಿಗೆ ಮೂಲ ಸೌಕರ್ಯಗಳು ನೀಡಲಾಗುತ್ತಿದೆ ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಂಡು ಉತ್ತಮವಾಗಿ ಅಭ್ಯಾಸ ಮಾಡಬೇಕು ಎಂದು ಬೀದರ್ ದಕ್ಷಿಣ ಕ್ಷೇತ್ರದ ಶಾಸಕರಾದ ಡಾ.ಶೈಲೇಂದ್ರ ಬೆಲ್ದಾಳೆ ಅವರು ಹೇಳಿದರು.
ಬೀದರ್ ದಕ್ಷಿಣ ಕ್ಷೇತ್ರದ ಘೋಡಂಪಳ್ಳಿ ಗ್ರಾಮದಲ್ಲಿರುವ ವಸತಿ ಯುಕ್ತ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸುಮಾರು 3 ಕೋಟಿ ರೂ. ವೆಚ್ಚದಲ್ಲಿ ಕಾಂಪೌಂಡ್ ವಾಲ್ ನಿರ್ಮಾಣ ಕಾಮಗಾರಿ ಹಾಗೂ ಮೂಲ ಸೌಕರ್ಯ ಕಲ್ಪಿಸುವ ಕಾರ್ಯಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ನಮ್ಮ ಕ್ಷೇತ್ರ ಸಂಪೂರ್ಣ ಗ್ರಾಮೀಣ ಪ್ರದೇಶದಿಂದ ಕೂಡಿದ್ದು ಬಡ ವಿದ್ಯಾರ್ಥಿಗಳ ಹೆಚ್ಚಿನ ವಿದ್ಯಾಭಾಯಸಕ್ಕಾಗಿ ಈ ಕಾಲೇಜು ಆರಂಭವಾಗಿದ್ದು, ಈ ಕಾಲೇಜಿನಲ್ಲಿ ಕಾಂಪೌಂಡ್ ವಾಲ್ ಹಾಗೂ ಮೂಲ ಸೌಕರ್ಯ ಕೊರತೆಯಿಂದ ವಿಧ್ಯಾರ್ಥಿಗಳಿಗೆ ತೊಂದರೆ ಅನುಭವಿಸುವಂತಾಗಿತ್ತು ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಈ ಕುರಿತು ನನಗೆ ಮನವಿ ಸಲ್ಲಿಸಿದ್ದರು ಹೀಗಾಗಿ ಇದೀಗ ಕಾಲೇಜು ಅಭಿವೃದ್ಧಿಗೆ ಅನುದಾನ ಕಲ್ಪಿಸಲಾಗಿದೆ ಎಂದು ಹೇಳಿದರು. ಈ ಕಾಲೇಜಿನಲ್ಲಿ ಗ್ರಾಮೀಣ ಭಾಗದ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ ಕಾಲೇಜಿನಲ್ಲಿ ಶಿಕ್ಷರು ವಿಧ್ಯಾರ್ಥಿಗಳ ಉತ್ತಮ
ಭವಿಷ್ಯ ರೂಪಿಸಲು ಹಗಲಿರುಳು ಶ್ರಮಿಸಬೇಕು. ವಿದ್ಯಾರ್ಥಿಗಳು ಸಹ ಉತ್ತಮವಾಗಿ ಶಿಕ್ಷಣ ಪಡೆಯುವ ಮೂಲಕ ಒಳ್ಳೆಯ ಸ್ಥಾನಮಾನ ಪಡೆದುಕೊಂಡು ಉತ್ತಮ ಜೀವನ ನಡೆಸಬೇಕು ಎಂದರು. ಈ ಕಾಮಗಾರಿ ಗುತ್ತಿಗೆದಾರರು ಉತ್ತಮವಾಗಿ ಕಾಲಮಿತಿಯೊಳಗೆ ಪೂರ್ಣಗೋಳಿಸಬೇಕು ಸೂಚಿಸಿದರು.
ಈ ಸಂದರ್ಭದಲ್ಲಿ ಮುಖಂಡರಾದ ಶಿವರಾಜ್ ಪಾಟೀಲ, ಶಿವಕುಮಾರ ಸ್ವಾಮಿ, ಚಂದ್ರಯ್ಯಾ ಸ್ವಾಮಿ, ಶಿವಕುಮಾರ ಪಾಟೀಲ್ ಚಿಟ್ಟಾ, ಆನಂದ ಪಾಟೀಲ, ರಾಜಕುಮಾರ ಸಿದ್ದಣ್ಣ, ಆದಿತ್ಯಾ ರೆಡ್ಡಿ, ಸಯ್ಯಪ್ಪಾ, ವಿಜಯಕುಮಾರ , ವಿಜಯಕುಮಾರ ಝರೆಪ್ಪ, ಕಾಲೇಜಿನ ಪ್ರಾಂಶುಪಾಲರಾದ ದೇವಿದಾಸ್ ತುಮಕುಂಟೆ, ಪ್ರೋ. ವೇಧ ಪ್ರಕಾಶ ಆರ್ಯ, ಪ್ರೋ. ಅಂಜಲಿ ಲುಲ್ಲೆ, ಪ್ರೋ ಭಾಗ್ಯವಂತಿ ಚಿಲ್ಲಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು. ಡಾ. ಸಂತೋಷ ಬಡಿಗೇರ ನಿರೂಪಣೆ ಮಾಡಿದರು. ಸಚಿದಾನಂದ ರುಮ್ಮಾ ವಂದಿಸಿದರು.