ಸರಕಾರಿ ನೌಕರರು ಯಾವುದೇ ರಾಜಕೀಯ ಪಕ್ಷಗಳ ಸಭೆಸಮಾರಂಭಗಳಲ್ಲಿ ಭಾಗವಹಿಸಬಾರದು: ಜಿಲ್ಲಾಧಿಕಾರಿ ಗೋವಿಂದರೆಡ್ಡಿ
ಬೀದರ, ಮಾ. 13: ಸರಕಾರಿ ನೌಕರರು ಯಾವುದೇ ರಾಜಕೀಯ ಪಕ್ಷಗಳ ಸಭೆ ಸಮಾರಂಭಗಳಲ್ಲಿ ಭಾಗವಹಿಸುವದು ಮತ್ತು ಸಾಮಾಜಿಕ ಮಾಧ್ಯಮಗಳಲ್ಲಿ ರಾಜಕೀಯ ಪಕ್ಷ ಹಾಗೂ ಅಭ್ಯರ್ಥಿಗಳ ಪರ ಹಾಗೂ ವಿರೋಧವಾಗಿ ಪೆÇೀಸ್ಟ್, ಕಮೆಂಟ್, ಫಾರ್ವರ್ಡ್, ವೈಯಕ್ತಿಕವಾಗಿ ಮಾಡಬಾರದು ಹಾಗೆ ಮಾಡಿದ ದೂರುಗಳೆನಾದರು ಬಂದಲ್ಲಿ ತಾವು ಸಸ್ಪೆಂಡ್ ಆಗುತ್ತಿರಾ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳಾದ ಗೋವಿಂದರೆಡ್ಡಿ ಹೇಳಿದರು.
ಅವರು ಮಂಗಳವಾರ ಸಂಜೆ ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ಲೋಕಸಭಾ ಸಾರ್ವತ್ರಿಕ ಚುನಾವಣೆ -2024 ಕರ್ತವ್ಯಕ್ಕೆ ನಿಯೋಜಿತ ಅಧಿಕಾರಿಗಳಿಗೆ ಕರೆದ ಪೂರ್ವಭಾವಿ ಸಭೆಯಲ್ಲಿ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿ ಮಾತನಾಡಿದರು.
ಈಗ ಸಮಯ ಬಹಳ ಕಡಿಮೆ ಇರುವುದರಿಂದ ಸೆಕ್ಟರ್ ಅಧಿಕಾರಿಗಳು ಪೆÇೀಲಿಂಗ್ ಭೂತಗಳಿಗೆ ಭೇಟಿ ನೀಡಿ ತಮ್ಮ ರೂಟ ನೋಡಿಕೊಳ್ಳಬೇಕು ಹಾಗೂ ಕ್ರಿಟಿಕಲ್ ಮತ್ತು ವಲನರೇಬಲ್ ಪೆÇೀಲಿಂಗ್ ಭೂತಗಳ ಮಾಹಿತಿ ತಮ್ಮಲ್ಲಿ ಇರಬೇಕು ಮತ್ತು ಪೆÇೀಲಿಂಗ್ ಭೂತಗಳು ಬದಲಾಗಿದ್ದರೆ ಅದರ ಮಾಹಿತಿಯನ್ನು ನೀಡಬೇಕೆಂದು ಹೇಳಿದರು.
ಚುನಾವಣೆ ನೀತಿ ಸಂಹಿತೆ ಜಾರಿಯಾದ 24 ತಾಸಿನಲ್ಲಿ ಕಟೌಟ, ಪೆÇೀಸ್ಟರ, ಬ್ಯಾನರ್ ತೆರವುಗೊಳಿಸಬೇಕು. ನಗರಗಳಲ್ಲಿ ಮುನ್ಸಿಪಾಲಟಿ ಮತ್ತು ಗ್ರಾಮಗಳಲ್ಲಿ ತಾಲ್ಲೂಕು ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿಗಳು ಈ ಪೆÇೀಸ್ಟರ, ಬ್ಯಾನರ ತೆರವುಗೊಳಿಸುವಂತೆ ನೋಡಿಕೊಳ್ಳಬೇಕು. ಎಫ್.ಎಸ್.ಟಿ ಹಾಗೂ ಎಸ್.ಎಸ್.ಟಿ ತಂಡಗಳು ತಮ್ಮ ಕಾರ್ಯ ಪ್ರಾರಂಭಿಸಬೇಕು. ಚುನಾವಣೆಗೆ ನಿಯೋಜಿತ ಅಧಿಕಾರಿಗಳು ತಮ್ಮ ಪರವಾಗಿ ಬೇರೆ ಸಿಬ್ಬಂದಿಗಳಿಗೆ ಕಳಿಸುವ ಹಾಗಿಲ್ಲ ಹಾಗೆ ಕಂಡುಬಂದರೆ ತಮ್ಮ ಮೇಲೆ ಮುಲಾಜಿಲ್ಲದೆ ಕ್ರಮ ತೆಗೆದುಕೊಳ್ಳಬೇಕಾಗುತ್ತದೆ. ತಮ್ಮ ಸಮಸ್ಯೆಯ ಅನಿವಾರ್ಯ ಕಾರಣಗಳಿದ್ದಲ್ಲಿ ಮೇಲಾಧಿಕಾರಿಗಳ ಗಮನಕ್ಕೆ ತರಬೇಕು ಎಂದರು.
ಅನುಮತಿ ಇಲ್ಲದೆ ಚುನಾವಣೆ ಪ್ರಚಾರದಲ್ಲಿ ತೊಡಗಿರುವ ವಾಹನಗಳು ಕಂಡು ಬಂದರೆ ಅವುಗಳನ್ನು ಸೀಜ ಮಾಡಿ ಚುನಾವಣೆ ಮುಗಿಯುವತನಕ ಬಿಡಬಾರದು ಮತ್ತು ರೋಡ ಶೋ ಗೆ ಅನುಮತಿ ನೀಡುವಾಗ ಹತ್ತು ವಾಹನಗಳ ನಂತರ ನೂರು ಮೀಟರ್ ಅಂತರ ಕಾಯ್ದುಕೊಂಡು ಹೋಗುವಂತೆ ತಿಳಿಸಬೇಕು ಹಾಗೂ ಜನಬಿಡು ಪ್ರದೇಶ ಮಾರ್ಕೆಟ, ಆಸ್ಪತ್ರೆ, ಟ್ರಾಮಾ ಸೆಂಟರ್ ನಂತಹ ಪ್ರದೇಶಗಳಲ್ಲಿ ಅನುಮತಿ ನೀಡಬಾರದು ಹಾಗೂ ಪ್ರಾಣಿ ಮತ್ತು ಮಕ್ಕಳನ್ನು ರೋಡ ಶೋ ಸಂದರ್ಭದಲ್ಲಿ ಬಳಸುವಹಾಗಿಲ್ಲ ಎಂದು ಹೇಳಿದರು.
ಯಾವುದೇ ರಾಜಕೀಯ ಪಕ್ಷಗಳ ಸಭೆ, ಸಮಾರಂಭ ಹಾಗೂ ರೋಡ್ ಶೋ ಗೆ ಬೆಳಿಗ್ಗೆ 6 ರಿಂದ ರಾತ್ರಿ 10 ರವರೆಗೆ ಮಾತ್ರ ಕಾಲವಕಾಶ ಇರುತ್ತದೆ. ಮನೆಗಳ ಮೇಲೆ ಗೋಡೆ ಬರಹ ಹಾಗೂ ಬ್ಯಾನರಗಳನ್ನು ಕಟ್ಟಬೇಕಾದಲ್ಲಿ ಆ ಮನೆಯ ಮಾಲೀಕರ ಅನುಮತಿ ಇರಬೇಕು. ಪೆÇೀಲಿಂಗ್ ಭೂತ ನೂರು ಮೀಟರ್ ಒಳಗಡೆ ಯಾವುದೇ ರಾಜಕೀಯ ಪಕ್ಷಗಳ ಸಂಕೇತವಿರುವ ಟೋಪಿ, ಶಾಲು ಧರಿಸಿಕೊಂಡು ಬರುವಂತಿಲ್ಲ ಎಂದು ಹೇಳಿದರು.
ಬೇಸಿಗೆ ಇರುವುದರಿಂದ ಕುಡಿಯುವ ನೀರಿಗಾಗಿ ಹೊಸ ಬೋರವೆಲ್ ಕೊರೆಯಬಹುದು. ದನಕರುಗಳಿಗೆ ಮೇವು ಹಾಗೂ ಉದ್ಯೋಗ ಖಾತ್ರಿ ಕೆಲಸ ಇವುಗಳಿಗೆ ಯಾವುದೇ ನಿಬರ್ಂಧಗಳಿಲ್ಲ. ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಊಟ ಕೊಡುವ ಹಾಗಿಲ್ಲ ಆದರೆ ನೀರು ಮತ್ತು ಮಜ್ಜಿಗೆ ಕೊಡಲು ಮಾತ್ರ ಅವಕಾಶವಿರುತ್ತದೆ. ಹಳ್ಳಿಗಳಲ್ಲಿ ಮಧ್ಯದ ಲೂಸ್ ಮಾರಾಟವಾಗದಂತೆ ನೋಡಿಕೊಳ್ಳಬೇಕು ಎಂದು ಅಬಕಾರಿ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು. ಚುನಾವಣೆ ಸಂದರ್ಭದಲ್ಲಿ ಅಧಿಕಾರಿಗಳು ರಜೆಯ ಮೇಲೆ ಹೋಗುವ ಹಾಗಿಲ್ಲ ಹಾಗೂ ಪೆÇೀನ ಸ್ವಿಚ್ ಆಫ್ ಇಡುವ ಹಾಗಿಲ್ಲ ಹಾಗೇನಾದರು ಕಂಡು ಬಂದರೆ ಮುಲಾಜಿಲ್ಲದೆ ತಮ್ಮ ಮೇಲೆ ನಿರ್ದಾಕ್ಷಿಣ್ಯವಾಗಿ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ಜಿಲ್ಲಾಧಿಕಾರಿಗಳು ಹೇಳಿದರು.
ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಚನ್ನಬಸವಣ್ಣ ಎಸ್.ಎಲ್ ಅವರು ಮಾತನಾಡಿ, ಎಲ್ಲರೂ ಟೀಮ್ ರೀತಿಯಲ್ಲಿ ಕೆಲಸ ಮಾಡಬೇಕು ವಿಶೇಷವಾಗಿ ಪೆÇಲೀಸ್ ಅಧಿಕಾರಿಗಳು ಹೆಚ್ಚು ರೌಂಡಿಂಗನಲ್ಲಿ ಇರಬೇಕು. ಕರ್ತವ್ಯದ ಸಮಯದಲ್ಲಿ ಏನಾದರು ಸಮಸ್ಯೆಗಳಾದರೆ ಮುಂಚಿತವಾಗಿ ನಮ್ಮ ಗಮನಕ್ಕೆ ತರಬೇಕು. ಜಿಲ್ಲಾಧಿಕಾರಿಗಳು ನಾವು ಯಾವಾಗ ಭೇಟಿ ನೀಡುತ್ತೆವೆ ಗೊತ್ತಿರುವದಿಲ್ಲ ನಾವು ಬಂದಾಗ ತಾವು ಕರ್ತವ್ಯದಲ್ಲಿ ಇರಬೇಕು. ಒಂದೇ ವೇಳೆ ಇರದೆ ಯಾವುದೇ ನೆಪ ಹೇಳಿದರು ನಾವು ಕೇಳುವುದಿಲ್ಲ ಇದು ಚುನಾವಣೆ ಕರ್ತವ್ಯ ಆಗಿರುವದರಿಂದ ಎಲ್ಲರೂ ಎಚ್ಚರಿಕೆಯಿಂದ ಕೆಲಸ ನಿರ್ವಹಿಸಬೇಕು ಎಂದರು.
ಈ ಸಭೆಯಲ್ಲಿ ಬೀದರ ಸಹಾಯಕ ಆಯುಕ್ತರಾದ ಲವೀಶ್ ಓರ್ಡಿಯಾ, ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಉಪನಿರ್ದೆಶಕರಾದ ಸುರೇಖಾ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೆಶಕರಾದ ಪ್ರಭಾಕರ್, ಜಿಲ್ಲೆಯ ಎಲ್ಲಾ ತಾಲ್ಲೂಕಿನ ತಹಶಿಲ್ದಾರರು, ತಾಲ್ಲೂಕು ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿಗಳು, ಪೆÇಲೀಸ್ ಅಧಿಕಾರಿಗಳು ಸೇರಿದಂತೆ ಚುನಾವಣೆಗೆ ನಿಯೋಜಿತ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.