ಚಿಂಚೋಳಿ ನೀರಿನ ಸಮಸ್ಯೆ ಪರಿಹಾರಕ್ಕೆ ಶಾಸಕರ ಸೂಚನೆ
ಚಿಂಚೋಳಿ,ಮಾ.12- ತಹಸೀಲ್ ಕಾರ್ಯಾಲಯದಲ್ಲಿ ಶಾಸಕರಾದ ಡಾ. ಅವಿನಾಶ ಜಾಧವ್ ಅವರ ಅಧ್ಯಕ್ಷತೆಯಲ್ಲಿ ಜರುಗಿದ ಟಾಸ್ಕ್ ಪೆÇೀರ್ಸ ಕಮಿಟಿಯನ್ನು ಉದ್ದೇಶಿಸಿ ಮಾತನಾಡಿದ ಶಾಸಕ ಡಾ. ಅವಿನಾಶ ಜಾಧವ, ಅವರು, ತಾಲೂಕಿನಲ್ಲಿ ಯಾವುದೇ ಗ್ರಾಮದಲ್ಲಿ ನೀರಿನ ಕೊರತೆ ಆಗದಂತೆ ಅಧಿಕಾರಿಗಳು ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕು ಎಂದರು.
ಯಾವುದೇ ಗ್ರಾಮದಲ್ಲಿ ನೀರಿನ ಸಮಸ್ಯೆ ಇದ್ದರೂ ಕೂಡ ಅಧಿಕಾರಿಗಳು ಆ ಗ್ರಾಮಗಳಿಗೆ ಭೇಟಿ ನೀಡಿ ಸಮಸ್ಯೆ ಬಗೆಹರಿಸಬೇಕು ಪ್ರತಿಯೊಂದು ಗ್ರಾಮ ಮತ್ತು ತಾಂಡಾಗಳಲ್ಲಿ ಬೇಸಿಗೆ ಕಾಲದಲ್ಲಿ ಕುಡಿಯುವ ನೀರಿನ ಸಮಸ್ಯೆ ಜನರಿಗೆ ನೀರು ತೊಂದ್ರೆ ಆಗದಂತೆ ಅಧಿಕಾರಿಗಳು ಗಮನ ಹರಿಸಬೇಕೆಂದು ಹೇಳಿದರು.
ಸಭೆಯಲ್ಲಿ ತಹಶೀಲ್ದಾರ್ ವೆಂಕಟೇಶ್ ದುಗ್ಗನ, ತಾಲೂಕ ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳಾದ ಶಂಕರ ರಾಠೋಡ್, ಗ್ರಾಮೀಣ ಕುಡಿಯುವ ನೀರಿನ ಇಲಾಖೆ ಅಧಿಕಾರಿಗಳಾದ ರಾಹುಲ ಕಾಂಬಳೆ, ಕೃಷಿ ಇಲಾಖೆ ಅಧಿಕಾರಿಗಳಾದ ವೀರಶೆಟ್ಟಿ ರಾಠೋಡ್, ಪಶು ಸಂಗೋಪನ ಇಲಾಖೆ ಅಧಿಕಾರಿಗಳಾದ ಡಾ. ಧನರಾಜ ಬೊಮ್ಮ, ಯುವರಾಜ್ ರಾಠೋಡ್, ರವಿ ಚಿಟ್ಟ, ಸುಭಾಷ್ ನೆಡಗುಂದಿ, ಮತ್ತು ವಿವಿಧ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸಭೆಯಲ್ಲಿ ಭಾಗಿಯಾಗಿದ್ದರು