ದಾವಣಗೆರೆ; ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ

ಸಂಜೆವಾಣಿ ವಾರ್ತೆ
ದಾವಣಗೆರೆ.ಮಾ.೧೨; ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ವಿವಿಧ ಇಲಾಖೆ ಸಹಯೋಗದಲ್ಲಿ ಜಿಲ್ಲಾಧಿಕಾರಿ ಕಚೇರಿಯ ತುಂಗಭದ್ರ ಸಭಾಂಗಣದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮವನ್ನು ಆಚರಿಸಲಾಯಿತು .ಜಿಲ್ಲಾಧಿಕಾರಿ ಡಾ.ವೆಂಕಟೇಶ್.ಎಂ.ವಿ ಸಮಾರಂಭ ಉದ್ಘಾಟಿಸಿದರು. ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ  ಮಹಾವೀರ.ಮ.ಕರೆಣ್ಣವರ ಅಧ್ಯಕ್ಷತೆ ವಹಿಸಿದ್ಧರು.ಮುಖ್ಯ ಅತಿಥಿಗಳಾಗಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುರೇಶ್.ಬಿ.ಇಟ್ನಾಳ್,  ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್, ಅಪರ ಜಿಲ್ಲಾಧಿಕಾರಿ ಸೈಯ್ಯದಾ ಆಫ್ರೀನ್ ಭಾನು.ಎಸ್.ಬಳ್ಳಾರಿ, ಪಾಲಿಕೆ ಆಯುಕ್ತರಾದ ರೇಣುಕಾ,  ಉಪವಿಭಾಗಾಧಿಕಾರಿ ದುರ್ಗಾಶ್ರೀ ಎನ್, ವಿಭಾಗದ ಸಹಾಯಕ ಕಾರ್ಮಿಕ ಆಯುಕ್ತರಾದ ವೀಣಾ ಎಸ್.ಆರ್, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಷಣ್ಮುಖಪ್ಪ, ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಹಿರಿಯ ಭೂ ವಿಜ್ಞಾನಿ ರಶ್ಮಿ.ಸಿ.ಆರ್  ಭಾಗವಹಿಸಿದ್ಧರು.