ವಂದೇ ಭಾರತ್ ಎಕ್ಸ್‍ಪ್ರೆಸ್ ರೈಲಿಗೆ ವರ್ಚುವಲ್ ಮೂಲಕ ಪ್ರಧಾನಿ ನರೇಂದ್ರ ಮೋದಿ ಚಾಲನೆ
ಕಲಬುರಗಿ: ಮಾ. 12: ಕಲಬುರಗಿ–ಬೆಂಗಳೂರು ಮಧ್ಯೆ ವಾರದಲ್ಲಿ ಆರು ದಿನ ಸಂಚರಿಸುವ ವಂದೇ ಭಾರತ್ ಎಕ್ಸ್‍ಪ್ರೆಸ್ ರೈಲಿಗೆ ವರ್ಚುವಲ್ ಮೂಲಕ ಗುಜರಾತ್‍ನ ಅಹಮದಾಬಾದ್‍ನಿಂದ ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಚಾಲನೆ ನೀಡಿದರು.
ಕಲಬುರಗಿ ನಿಲ್ದಾಣದಲ್ಲಿ ನಿಂತಿದ್ದ ವಂದೇ ಭಾರತ್ ರೈಲಿಗೆ ಬಲೂನ್, ಹೂಗಳಿಂದ ಅಲಂಕಾರ ಮಾಡಲಾಗಿತ್ತು. ಬೆಳಿಗ್ಗೆ 9.40ಕ್ಕೆ ವರ್ಚುವಲ್ ಮೂಲಕ ಹಸಿರು ನಿಶಾನೆ ತೋರಿಸುತ್ತಿದ್ದಂತೆ ವಂದೇ ಭಾರತ್ ಎಕ್ಸ್‍ಪ್ರೆಸ್ ರೈಲು ಚಲಿಸಲು ಆರಂಭಿಸಿತು. ಈ ವೇಳೆ ನಿಲ್ದಾಣದಲ್ಲಿದ್ದ ಸಾರ್ವಜನಿಕರು, ಕಾರ್ಯಕರ್ತರು ‘ವಂದೇ ಭಾರತ್, ಭಾರತ್ ಮಾತಾಕೀ ಜೈ’ ಎಂದು ಘೋಷಣೆ ಕೂಗಿದರು.
ಕಲಬುರಗಿ ಇತಿಹಾಸದಲ್ಲಿ 3000 ಕೋಟಿ ಬಂದಿಲ್ಲಾ ಇದು ರೈಲ್ವೆ ಸ್ಟೇಷನ್ ಅಥವಾ ವಿಮಾನ ನಿಲ್ದಾಣ ಅನ್ನುವತರ ಬದಲಾವಣೆ ಆಗುತ್ತೆ ಮೇಘಾ ಟೆಕ್ನಿಕಲ್ ಪಾರ್ಕ ಫೀರೋಜೋಬಾದ ಮತ್ತು ಕಿರಣಗಿ ಗ್ರಾಮದಲ್ಲಿ ನಿರ್ಮಿಸುತ್ತಿದ್ದವೆ ಇದು ಸುಮಾರು 1 ಲಕ್ಷ ಉದ್ಯೋಗಳು ಸೃಷ್ಟಿಯಾಗುತ್ತೆ ಜಲ್ ಜೀವನ ಮಿಷಿನಲ್ಲಿ ಸನ್ನಿತಿಯ ಬ್ಯಾರೆಜನಿಂದ 1000 ಹಳ್ಳಿಗಳಿಗೆ ನೀರು ಕೊಡುವಂತಹ ಕೆಲಸವಾಗಿದೆ. 10 ಕೋಟಿ ವೆಚ್ಚದಲ್ಲಿ ಕೋಲ್ಡ್ ಕಲಬುರಗಿ: ಕಲಬುರಗಿ-ಬೆಂಗಳೂರು ನಡುವೆ ಸಂಚರಿಸುವ ನೂತನ ವಂದೇ ಭಾರತ್ ರೈಲಿಗೆ ಮಂಗಳವಾರ ಪ್ರಧಾನಿ ನರೇಂದ್ರ ಮೋದಿ ಅವರು ಗುಜರಾತಿನ ಅಹಮದಬಾದ್ ಕಂಟ್ರೋಲ್ ಸೆಂಟರ್ ನಿಂದ ವರ್ಚುವಲ್ ಮೂಲಕ ಹಸಿರು ನಿಶಾನೆ ತೋರಿ ಚಾಲನೆ ನೀಡಿದರು.
ಇದಕ್ಕೂ ಮುನ್ನ ಕಲಬುರಗಿ ನಗರದ ರೈಲು ನಿಲ್ದಾಣದಲ್ಲಿ ಸೊಲ್ಲಾಪುರ್ ರೈಲ್ವೆ ವಿಭಾಗದಿಂದ ಏರ್ಪಡಿಸಿದ ವೇದಿಕೆ ಕಾರ್ಯಕ್ರಮದಲ್ಲಿ ಕಲಬುರಗಿ-ಬೆಂಗಳೂರು ವಂದೇ ಭಾರತ್ ರೈಲಿಗೆ ಔಪಚಾರಿಕವಾಗಿ ಚಾಲನೆ ನೀಡಲಾಯಿತು.
ಬಳಿಕ ಕಲಬುರಗಿ ಸಂಸದ ಡಾ. ಉಮೇಶ್ ಜಾಧವ್ ಮಾತನಾಡಿ, ದೇಶದ ಅಭಿವೃದ್ಧಿ ಹೊಂದಿರುವ ಜಾಗದಲ್ಲಿ ಪ್ರಧಾನಿ ಮೋದಿ ಅವರು ವಂದೇ ಭಾರತ್ ರೈಲಿಗೆ ಚಾಲನೆ ನೀಡಿದ್ದಾರೆ. ಅದರಲ್ಲಿ ಕಲಬುರಗಿಯು ಒಂದಾಗಿದ್ದು ಸಂತಸದ ಸಂಗತಿಯಾಗಿದೆ. ಸ್ವಾತಂತ್ರ್ಯದ ಬಳಿಕ ಕಲಬುರಗಿ-ಬೆಂಗಳೂರು ನಡುವೆ ನೇರ ರೈಲು ಹಾಗೂ ಕಲಬುರಗಿ-ಬೆಂಗಳೂರು ನಡುವಿನ ವಂದೇ ಭಾರತ್ ರೈಲು ಸಂಚಾರ ಆರಂಭವಾಗಿವೆ. ಹೀಗಾಗಿ ಜಿಲ್ಲೆಯ ಜನರ ನಿತ್ಯದ ಬದುಕಲ್ಲಿ ಸಾಕಷ್ಟು ಬದಲಾವಣೆ ತರಲಿದ್ದು, ಬಡವರು ಹಾಗೂ ಮಧ್ಯಮ ವರ್ಗದ ಜನರಿಗೆ ಅನುಕೂಲವಾಗಲಿದೆ ಎಂದು ಹೇಳಿದರು.
ಕಲಬುರಗಿ-ಬೆಂಗಳೂರು ನಡುವೆ ವಂದೇ ಭಾರತ್ ರೈಲು ಸಂಚಾರ ಮಾಡುತ್ತಿರುವುದು ನಮ್ಮ ಹೆಮ್ಮೆಯಾಗಿದೆ. ಈ ವಂದೇ ಭಾರತ್ ರೈಲು ವಾಡಿ, ಮಂತ್ರಾಲಯ, ರಾಯಚೂರು,ಧರ್ಮಾವರಂ, ಅನಂತಪುರಂ ಮಾರ್ಗವಾಗಿ ಬೆಂಗಳೂರು ಸಂಚಾರ ಮಾಡಲಿದೆ ಎಂದರು.
ಸಾಮಾನ್ಯ ಜನರ ಸಮಸ್ಯೆ ಅರಿತು ಇದೀಗ ಕಲಬುರಗಿ- ಬೆಂಗಳೂರು ಮಧ್ಯ ವಿಶೇಷ ರೈಲು ಹಾಗೂ ವಂದೇ ಭಾರತ್ ರೈಲು ತರಲಾಗಿದೆ. ಅಲ್ಲದೇ, ವಾಡಿ, ಶಹಾಬಾದ್ ಹಾಗೂ ಗಾಣಗಾಪುರ ರೈಲು ನಿಲ್ದಾಣಗಳ ಅಭಿವೃದ್ಧಿ ಕಾಮಗಾರಿಗಾಗಿ 300 ಕೋಟಿ ರು. ಗಳ ಅನುದಾನ ನಿಗದಿ ಪಡಿಸಲಾಗಿದೆ. ನಿಲೂರ ಮೇಲ್ಸೇತುವೆ ಮೇಲ್ದರ್ಜೆಗೆ ಏರಿಸಲಾಗಿದೆ. ಜಿಲ್ಲೆಯಲ್ಲಿ ಒಂದು ಲಕ್ಷ ಜನರಿಗೆ ಉದ್ಯೋಗ ನೀಡುವ ಪಿಎಂ ಮಿತ್ರ ಯೋಜನೆಯ ಜವಳಿ ಪಾರ್ಕ್ ಗೆ ಮುಖ್ಯಮಂತ್ರಿಗಳು ಅನುಮೋದನೆ ನೀಡಿ ಕೇಂದ್ರಕ್ಕೆ ಕಳುಹಿಸಿದ್ದು, ತಾಂತ್ರಿಕ ಸಮಸ್ಯೆಗಳು ಇತ್ಯಾರ್ಥಗೊಂಡಿವೆ. ಶೀಘ್ರವೇ ಆರಂಭವಾಗಲಿದೆ.
ಜತೆಗೆ 1500 ಕೋಟಿ ರು. ವೆಚ್ಚದಲ್ಲಿ ಜಿಲ್ಲೆಗೆ 71ಕೀಮಿ ಉದ್ದದ ಭಾರತ ಮಾಲಾ ಯೋಜನೆಯಡಿ ಸೂರತ್-ಚೆನೈ ಹೈವೇ ಕಾರಿಡಾರ್ ರಸ್ತೆಯ ಕೆಲಸ ಶುರುವಾಗಿದೆ. 110 ಗ್ರಾಮಗಳಿಗೆ 24*7 ಶುದ್ಧ ಕುಡಿಯುವ ನೀರಿನ ಸೌಲಭ್ಯ, ಬೆಣ್ಣೆತೋರಾ, ಬೆಡಸೂರ ಕೆಲಸಗಳು ನಡೆಯುತ್ತಿವೆ ಎಂದರು.
ಕಲಬುರಗಿ ವಿಮಾನ ನಿಲ್ದಾಣದಲ್ಲಿ ಐತಿಹಾಸಿಕ ನೈಟ್ ಲ್ಯಾಂಡಿಂಗ್ ಶುರುವಾಗಿದೆ. ಬಿಪಿಸಿಎಲ್ ಕಾರ್ಗೋ ಟರ್ಮಿನಲ್, 65 ಕೋಟಿ ವೆಚ್ಚದಲ್ಲಿ ಮಳಖೇಡ ಸೇತುವೆ, ಹುಮನಾಬಾದ್ ರಿಂಗ್ ರಸ್ತೆಯಿಂದ ರಾಮಮಂದಿರ ಸರ್ವಿಸ್ ರಸ್ತೆ ಸೇರಿ ಹಲವು ಕೆಲಸಗಳನ್ನು ಕಳೆದ 5 ವರ್ಷದ ಅವಧಿಯಲ್ಲಿ ಮಾಡಲಾಗಿದೆ ಎಂದು ತಮ್ಮ ಕಾರ್ಯಗಳ ಬಗ್ಗೆ ಬೆಳಕು ಚೆಲ್ಲಿದರು.
ಈ ಸಂದರ್ಭದಲ್ಲಿ ಶಾಸಕರಾದ ಬಸವರಾಜ ಮತ್ತಿಮಡು, ಅವಿನಾಶ್ ಜಾಧವ್, ಮೇಯರ್ ವಿಶಾಲ್ ದರ್ಗಿ, ಉಪ ಮೇಯರ್ ಶಿವಾನಂದ್ ಪಿಸ್ತಿ, ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್, ನಗರ ಪೆÇಲೀಸ್ ಆಯುಕ್ತ ಚೇತನ್.ಆರ್, ಪೆÇೀಲಿಸ್ ವರಿμÁ್ಠಧಿಕಾರಿ ಅಕ್ಷಯ್ ಹಾಕೆ, ಪಾಲಿಕೆ ಆಯುಕ್ತ ಭುವನೇಶ್ ದೇವಿದಾಸ್ ಪಾಟೀಲ್, ಸೊಲ್ಲಾಪುರ್ ರೈಲ್ವೆ ವಿಭಾಗದ ವ್ಯವಸ್ಥಾಪಕ ನೀರಜ್ ಕುಮಾರ್, ಮಾಜಿ ಶಾಸಕ ದತ್ತಾತ್ರೇಯ ಪಾಟೀಲ್ ರೇವೂರ್, ಜೆಡಿಎಸ್ ಜಿಲ್ಲಾಧ್ಯಕ್ಷ ಬಾಲರಾಜ್ ಗುತ್ತೇದಾರ್, ಗುಲಬರ್ಗಾ ವಿವಿ ಕುಲಪತಿ ದಯಾನಂದ್ ಅಗಸರ, ಸಿಂಡಿಕೇಟ್ ಸದಸ್ಯ ರಾಘವೇಂದ್ರ ರಟಕಲ್ ಸೇರಿ ಅನೇಕ ಮುಖಂಡರು ಉಪಸ್ಥಿತರಿದ್ದರು.