ಅಮರ ಗಣಾಧೀಶ್ವರ ದೇವಸ್ಥಾನಕ್ಕೆ ಸಚಿವ ಎಂ.ಬಿ. ಪಾಟೀಲ ಭೇಟಿ
ವಿಜಯಪುರ, ಮಾ. 11: ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಅವರು ರವಿವಾರ ನಗರದ 770 ಅಮರ ಗಣಾಧೀಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ, ದೇವರ ದರ್ಶನ ಪಡೆದರು.
ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯ ಈ ದೇವಸ್ಥಾನವನ್ನು ರೂ 1.51 ಕೋ. ವೆಚ್ಚದಲ್ಲಿ ಪುನರುಜ್ಜೀವನಗೊಳಿಸಿದ್ದು, ಮಹಾಶಿವರಾತ್ರಿಯ ದಿನ ಲೋಕಾರ್ಪಣೆಯಾಗಿದೆ. ಈ ದೇವಸ್ಥಾನಕ್ಕೆ ಭೇಟಿ ನೀಡಿದ ಸಚಿವರು, ನಾಡಿನ ಜನತೆಯ ಒಳಿತು ಬಯಸಿ ಪ್ರಾರ್ಥನೆ ಸಲ್ಲಿಸಿದರು.
ಅಲ್ಲದೇ, ಈ ಸಂದರ್ಭದಲ್ಲಿ ಬಿ.ಎಲ್.ಡಿ.ಇ ಸಂಸ್ಥೆಯ ನಿರ್ದೇಶಕ ಸಂಗು ಸಜ್ಜನ, ಎಂಜಿನಿಯರ್ ಆರ್. ಎಸ್. ಜಿರಲಿ ಮತ್ತು ಎಂಜಿನಿಯರ್ ಯು. ಎನ್. ಕರಡಿ ಅವರನ್ನು ಸನ್ಮಾನಿಸಿ ಗೌರವಿಸಿದರು.
ಈ ವೇಳೆ ಜಿಲ್ಲಾಧಿಕಾರಿ ಟಿ. ಭೂಬಾಲನ್, ಸೈನಿಕ ಶಾಲೆಯ ಪ್ರಿನ್ಸಿಪಾಲ್ ಗ್ರುಪ್ ಕ್ಯಾಪ್ಟನ್ ಪ್ರತಿಭಾ ಬಿಷ್ಠ, ಶ್ರೀ ಬಿ. ಎಂ. ಪಾಟೀಲ ವೈದ್ಯಕೀಯ ಕಾಲೇಜಿನ ಪ್ರಾಚಾರ್ಯ ಡಾ. ಅರವಿಂದ ಪಾಟೀಲ, ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ರಾಜೇಶ ಹೊನ್ನುಟಗಿ, ಉಪಪ್ರಾಚಾರ್ಯ ಡಾ. ಎಂ. ಬಿ. ಪಾಟೀಲ, ಡಾ. ಉದಯಕುಮಾರ ನುಚ್ಚಿ ಡಾ. ಮಹಾಂತೇಶ ಬಿರಾದಾರ, ಡಾ. ರವಿ ಬಿರಾದಾರ, ಮುಂತಾದವರು ಉಪಸ್ಥಿತರಿದ್ದರು.