ಬಸವೇಶ್ವರ ಸೇವಾ ಸಮಿತಿಯಿಂದ ಸಿಎಂ ಸಿದ್ದರಾಮಯ್ಯಗೆ ಸನ್ಮಾನ
ಬಸವನಬಾಗೇವಾಡಿ:ಮಾ.12: ಪ್ರತ್ಯೇಕ ಅಭಿವೃದ್ದಿ ಪ್ರಾಧಿಕಾರ ರಚಿಸಿರುವ ಹಿನ್ನಲೆಯಲ್ಲಿ ಸೋಮವಾರ ಬೆಂಗಳೂರಿನ ಕಾವೇರಿ ನಿವಾಸದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನ ಬಸವೇಶ್ವರ ಸೇವಾ ಸಮಿತಿಯ ಸದಸ್ಯರು ರಾಜ್ಯದ ಜವಳಿ, ಕಬ್ಬು, ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಅವರ ನೇತೃತ್ವದಲ್ಲಿ ಸನ್ಮಾನಿಸಿ ಗೌರವಿಸಿದರು. ಇದೇ ಸಂಧರ್ಭದಲ್ಲಿ ಮುಂಭರುವ ಬಸವ ಜಯಂತಿ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನ ಅವ್ಹಾನಿಸಲಾಯಿತು, ಈ ಸಂಧರ್ಭದಲ್ಲಿ ವಿರಕ್ತಮಠದ ಸಿದ್ದಲಿಂಗ ಸ್ವಾಮೀಜಿ, ಬಸವೇಶ್ವರ ಸೇವಾ ಸಮಿತಿ ಅಧ್ಯಕ್ಷ ಈರಣ್ಣ ಪಟ್ಟಣಶೆಟ್ಟಿ, ಬಸವ ಸೈನ್ಯ ಸಂಸ್ಥಾಪಕ ಅಧ್ಯಕ್ಷ ಶಂಕರಗೌಡ ಬಿರಾದಾರ, ಮುಖಂಡರಾದ ಸಂಗಮೇಶ ಒಲೇಕಾರ, ಬಸವರಾಜ ಕೋಟಿ, ಸಂಗಣ್ಣ ಕಲ್ಲೂರ, ಶೇಖರ ಗೊಳಸಂಗಿ, ಭರತ ಅಗರವಾಲ, ಬಸವರಾಜ ಹಾರಿವಾಳ, ಮಹಾಂತೇಶ ಆದಿಗೊಂಡ, ಸುಭಾಸ ಚಿಕ್ಕೊಂಡ, ಬಸವರಾಜ ಗೊಳಸಂಗಿ, ರವಿ ರಾಠೋಡ, ಸಂಕನಗೌಡ ಪಾಟೀಲ ಇದ್ದರು.