ಅನಂತಕುಮಾರ್ ಹೆಗಡೆಗೆ ಗಡಿಪಾರು ಮಾಡಿ:ಕಮಕನೂರ
ಚಿತ್ತಾಪುರ:ಮಾ.12:ಭಾರತದ ಸಂವಿಧಾನ ಬದಲಾಯಿಸುವ ಹೇಳಿಕೆ ನೀಡಿರುವ ಸಂಸದ ಅನಂತ ಕುಮಾರ್ ಹೆಗಡೆ ಅವರನ್ನು ಕೇಂದ್ರ ಸರ್ಕಾರ ಕೂಡಲೇ ಗಡಿಪಾರು ಮಾಡಬೇಕೆಂದು ವಿಧಾನ ಪರಿಷತ್ ಸದಸ್ಯರಾದ ತಿಪ್ಪಣ್ಣಪ್ಪ ಕಮಕನೂರ ಆಗ್ರಹಿಸಿದರು.
ಜಿಲ್ಲೆಯ ವಾಡಿ ಪಟ್ಟಣದಲ್ಲಿ ನಡೆದ ಸಂವಿಧಾನ ಜಾಗೃತಿ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು, ಕೂಡಲೇ ಹೆಗಡೆಯವರು ತಮ್ಮ ಹೇಳಿಕೆಯನ್ನು ಹಿಂಪಡೆಯಬೇಕು ಮತ್ತು ಸಾರ್ವಜನಿಕವಾಗಿ ಕ್ಷಮೆಯಾಚಿಸಬೇಕು. ಇಲ್ಲವಾದರೆ ಹೋರಾಟ ಮಾಡಬೇಕೆಂದು ಎಚ್ಚರಿಕೆ ನೀಡಿದರು.
ಪಂಚ ಗ್ಯಾರಂಟಿಗಳನ್ನು ನೀಡಿರುವ ಕಾಂಗ್ರೆಸ್ ಸರ್ಕಾರಕ್ಕೆ ಬೆಂಬಲಿಸಬೇಕಾಗಿದೆ. ಬರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‍ಗೆ ಬೆಂಬಲಿಸಿ ಬಿಜೆಪಿಗೆ ತಕ್ಕ ಪಾಠ ಕಲಿಸಬೇಕೆಂದರು.
ಅಭಿವೃದ್ಧಿ ಹರಿಕಾರ 371ನೇ ಕಲಂ ಜಾರಿಗೊಳಿಸಿರುವ ರೂವಾರಿ ಮಲ್ಲಿಕಾರ್ಜುನ್ ಖರ್ಗೆ ಅವರಂತೆ ಅವರ ಸುಪುತ್ರ ಪ್ರಿಯಾಂಕ ಖರ್ಗೆ ಅವರು ಉತ್ತಮ ಕೆಲಸ ಮಾಡುತ್ತಿದ್ದಾರೆ ಎಂದು ಪ್ರಶಂಸೆ ವ್ಯಕ್ತಪಡಿಸಿದರು.