ವಿದ್ಯಾರ್ಥಿನಿ ಸಾವು: ವಾರ್ಡನ್ ವಿರುದ್ಧ ಎಫ್‍ಐಆರ್
ಚಿತ್ತಾಪುರ:ಮಾ.12: ತಾಲ್ಲೂಕಿನ ಕರದಾಳ ಗ್ರಾಮದ ರಾಷ್ಟ್ರೀಯ ಮಾಧ್ಯಮಿಕ ಶಿಕ್ಷಣ ಅಭಿಯಾನ ವಸತಿ ನಿಲಯದಲ್ಲಿ ಭಾಗ್ಯಶ್ರೀ ಸಾಯಬಣ್ಣಾ ಎಂಬ ವಿದ್ಯಾರ್ಥಿನಿ ಇತ್ತೀಚಿಗೆ ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ವಸತಿ ನಿಲಯದ ಹೊರಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದ ವಾರ್ಡನ್ ಶ್ರೀಮತಿ ರೇಣುಕಾ ಮೂಲಿಮಠ, ಕಾವಲುಗಾರರ ಮತ್ತು ಸಿಬ್ಬಂದಿ ವರ್ಗದವರ ವಿರುದ್ಧ ಚಿತ್ತಾಪುರ ಪೆÇಲೀಸ್ ಠಾಣೆಯಲ್ಲಿ ಎಫ್‍ಐಆರ್ ದಾಖಲಾಗಿದೆ.
ಎಫ್‍ಐಆರ್ ದಾಖಲಾದ ಬೆನ್ನಲ್ಲೇ ವಸತಿ ನಿಲಯದ ವಾರ್ಡನ್ ರೇಣುಕಾ ಅವರನ್ನು ಕರ್ತವ್ಯದಿಂದ ಬಿಡುಗಡೆ ಮಾಡಿ ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರು ಆದೇಶ ಹೊರಡಿಸಿದ್ದಾರೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಸಿದ್ದವೀರಯ್ಯ ರುದ್ದನೂರ ತಿಳಿಸಿದ್ದಾರೆ.
ವಿದ್ಯಾರ್ಥಿನಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಳ್ಳಲು ವಸತಿ ನಿಲಯದ ವಾರ್ಡನ್ ನಿರ್ಲಕ್ಷ್ಯವೇ ಕಾರಣ ಎಂದು ವಿದ್ಯಾರ್ಥಿನಿಯ ಪೆÇೀಷಕರು ಆರೋಪ ಮಾಡಿದ್ದರು.
ಹೀಗಾಗಿ, ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಎಫ್‍ಐಆರ್ ದಾಖಲಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವರು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತರಾಜ್ ಸಚಿವರಾದ ಪ್ರಿಯಾಂಕ್ ಖರ್ಗೆ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದರು.
ಇನ್ನೂ ವಿದ್ಯಾರ್ಥಿನಿಯ ಸಾವಿನ ಪ್ರಕರಣ ಕುರಿತು ಸಿಬಿಐ ತನಿಖೆಗೆ ಒಪ್ಪಿಸಬೇಕು ಎಂದು ದಲಿತ ವಿದ್ಯಾರ್ಥಿ ಪರಿಷತ್ ಜಿಲ್ಲಾ ಘಟಕ ಒತ್ತಾಯಿಸುತ್ತಿದೆ. ವಿದ್ಯಾರ್ಥಿನಿಯ ಸಾವಿನ ಕುರಿತು ಸಾಕಷ್ಟು ಅನುಮಾನದ ಮಾತುಗಳು ಕೇಳಿಬರುತ್ತಿವೆ.
ವಿದ್ಯಾರ್ಥಿನಿಯ ಸಾವಿನ ಕುರಿತು ನಿಖರ ಮಾಹಿತಿ ಬರುತ್ತದೆ ಎಂಬುದು ಕಾದುನೋಡಬೇಕಾಗಿದೆ