ವಿದ್ಯಾರ್ಥಿನಿ ಮನೆಗೆ ಸಚಿವರ ಭೇಟಿ:ಪೋಷಕರಿಗೆ ಸಾಂತ್ವನ
ಚಿತ್ತಾಪುರ:ಮಾ.12: ಇತ್ತೀಚಿಗೆ ಕರದಾಳ ಗ್ರಾಮದಲ್ಲಿರುವ ರಾಷ್ಟ್ರೀಯ ಮಾಧ್ಯಮಿಕ ಶಿಕ್ಷಣ ಅಭಿಯಾನ ವಸತಿ ಶಾಲೆಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದ ಕಡಬೂರು ಗ್ರಾಮದ 16 ವರ್ಷದ ವಿದ್ಯಾರ್ಥಿನಿ ಭಾಗ್ಯಶ್ರೀ ಅವರ ಮನೆಗೆ ಗ್ರಾಮೀಣಾಭಿವೃದ್ದಿ ಹಾಗೂ ಪಂಚಾಯತ ರಾಜ್ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಿಯಾಂಕ್ ಖರ್ಗೆ ಅವರು ಭೇಟಿ ಮಾಡಿ ಪೋಷಕರಿಗೆ ಸಾಂತ್ವನ ಹೇಳಿದರು.
ವಿದ್ಯಾರ್ಥಿನಿಯ ಆತ್ಮಹತ್ಯೆಗೆ ದುಃಖ ವ್ಯಕ್ತಪಡಿಸಿದ ಸಚಿವರು ವಸತಿ ಶಾಲೆಯ ಮಕ್ಕಳಿಗೆ ಕೌನ್ಸಲಿಂಗ್ ಮಾಡಿಸಲಾಗುವುದು ಎಂದು ಭರವಸೆ ನೀಡಿದರು.
ಇಂತಹ ಸಂಕಷ್ಟದ ಸಂದರ್ಭದಲ್ಲಿ ತಾವು ಕುಟುಂಬದ ಜೊತೆಗೆ ಇರುವುದಾಗಿ ಭರವಸೆ ನೀಡಿದ ಸಚಿವರು ಕಾಂಗ್ರೆಸ್ ಪಕ್ಷದ ವತಿಯಿಂದ 1ಲಕ್ಷ ರೂಪಾಯಿ ಪರಿಹಾರ ಹಣವನ್ನು ಪೆÇೀಷಕರಿಗೆ ನೀಡಿದರು.
ಈ ಸಂದರ್ಭದಲ್ಲಿ ವಾಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಹೇಮೂದ್ ಸಾಹೇಬ್, ಭೀಮಣ್ಣ ಸಾಲಿ, ಶಿವಾನಂದ ಪಾಟೀಲ, ತಹಸೀಲ್ದಾರ ಸೈಯದ್ಶಾ ಷಾಷಾವಲಿ ಸೇರಿದಂತೆ ಇತರರು ಇದ್ದರು.