ವಿಜಯಪುರ ಮಹಿಳಾ ವಿವಿಗೆಡಾ.ಶೈಲೇಂದ್ರ ಬೆಲ್ದಾಳೆ ನೇಮಕ
ಬೀದರ್: ಮಾ.12:ವಿಜಯಪುರದಲ್ಲಿರುವ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ವಿದ್ಯಾವಿಷಯಕ ಪರಿಷತ್ ಸದಸ್ಯರನ್ನಾಗಿ ಬೀದರ್ ದಕ್ಷಿಣ ವಿಧಾನಸಭೆ ಕ್ಷೇತ್ರದ ಶಾಸಕರಾದ ಡಾ.ಶೈಲೇಂದ್ರ ಬೆಲ್ದಾಳೆ ಅವರನ್ನು ಸರ್ಕಾರ ನಾಮನಿರ್ದೇಶನ ಮಾಡಿ ಆದೇಶ ಹೊರಡಿಸಿದೆ.
ವಿಶ್ವವಿದ್ಯಾಲಯದ ಕುಲಾಧಿಪತಿಗಳೂ ಆಗಿರುವ ರಾಜ್ಯಪಾಲರ ಆಜ್ಞಾನುಸಾರ ಇತ್ತೀಚೆಗೆ ಸರ್ಕಾರದ ಉನ್ನತ ಶಿಕ್ಷಣ ಇಲಾಖೆ ವಿದ್ಯಾವಿಷಯಕ ಪರಿಷತ್ತಿಗೆ ನಾಮನಿರ್ದೇಶನ ಮಾಡಿ ಆದೇಶ ಹೊರಡಿಸಿದ್ದು, ಇದರಲ್ಲಿ ಡಾ.ಬೆಲ್ದಾಳೆ ಅವರಿಗೆ ಸ್ಥಾನ ನೀಡಲಾಗಿದೆ. ಡಾ. ಶೈಲೇಂದ್ರ ಬೆಲ್ದಾಳೆ ಅವರು ರಾಜ್ಯದ ಏಕೈಕ ಮಹಿಳಾ ವಿಶ್ವವಿದ್ಯಾಲಯಕ್ಕೆ ನಾಮನಿರ್ದೇಶನಗೊಂಡಿರುವುದಕ್ಕೆ ಜಿಲ್ಲಾ ಬಿಜೆಪಿ ಹಾಗೂ ಅವರ ಅಭಿಮಾನಿ ಬಳಗ ಹರ್ಷ ವ್ಯಕ್ತಪಡಿಸಿದೆ. ಡಾ.ಬೆಲ್ದಾಳೆ ಅವರು ವಿಶ್ವವಿದ್ಯಾಲಯದಿಂದ ಬರುವ ದಿನಗಳಲ್ಲಿ ಬೀದರ್ ಜಿಲ್ಲೆಗೆ ಅನುಕೂಲ ಕಲ್ಪಿಸಿಕೊಡುವ ಕೆಲಸ ಮಾಡಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.