ಈಶಾನ್ಯ ಪದವೀಧರ ಕ್ಷೇತ್ರಕ್ಕೆ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧೆ : ಪ್ರತಾಪ್ ರೆಡ್ಡಿ
ಸಂಜೆವಾಣಿ ವಾರ್ತೆ
 ಹಗರಿಬೊಮ್ಮನಹಳ್ಳಿ. ಮಾ.11 ಜೂನ್ ತಿಂಗಳಲ್ಲಿ ಈಶಾನ್ಯ ಪದವೀಧರ ಕ್ಷೇತ್ರದಿಂದ ವಿಧಾನ ಪರಿಷತ್ತಿಗೆ ನಡೆಯುವ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತೇನೆ ಎಂದು ಬಳ್ಳಾರಿಯ ನಾರಾ ಪ್ರತಾಪ್ ರೆಡ್ಡಿ ತಿಳಿಸಿದರು.
 ಪಟ್ಟಣದಲ್ಲಿ ಭಾನುವಾರ ಕರೆದ ಪತ್ರಿಕಾಗೋಷ್ಠಿ, ಉದ್ದೇಶಿಸಿ ಮಾತನಾಡಿ ಕಳೆದ 2018ರ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿದಾಗ ನನಗೆ ಬೆಂಬಲಿಸಿ ಮತ ನೀಡಿದ್ದಾರೆ. ಕೆಲವು ಕುಲಗೆಟ್ಟ ಮತಗಳಿಂದಾಗಿ ಸ್ವಲ್ಪದರಲ್ಲಿ ಪರಾಭವ ಕೊಂಡಿರುವೆ. ಆದರೂ ನಾನು ಕ್ಷೇತ್ರ ವ್ಯಾಪ್ತಿಯಲ್ಲಿ ನಿರಂತರವಾಗಿ ಪದವೀಧರೊಂದಿಗೆ ಸಂಪರ್ಕ ಹೊಂದಿರುವೆ. ಈಗಾಗಲೇ 7 ಜಿಲ್ಲೆಗಳಿಗೆ ಭೇಟಿ ನೀಡಿ ಗ್ರೌಂಡ್ ಮಟ್ಟದಲ್ಲಿ ಪ್ರಚಾರ ಆರಂಭಿಸಿರುವೆ. ಈಗ ತಾಲೂಕು ಮಟ್ಟದಲ್ಲಿ  ಪ್ರಚಾರ ಕೈಗೊಳ್ಳುವ ನಿಟ್ಟಿನಲ್ಲಿ ಈ ತಾಲೂಕಿನಿಂದ ಪ್ರಾರಂಭ ಮಾಡಲಾಗಿದೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ  ನಾವು ಕಾಂಗ್ರೆಸ್ ಅಭ್ಯರ್ಥಿ ನಾರಾ ಭರತ್ ರೆಡ್ಡಿಗೆ ಬೆಂಬಲಿಸಿ ಪ್ರಚಂಡ ಬಹುಮತದೊಂದಿಗೆ ಗೆಲ್ಲಿಸಿಕೊಂಡು ಬಂದೆವು. ಆ ಸಂದರ್ಭದಲ್ಲಿ  ನಮಗೆ ಟಿಕೆಟ್ ನೀಡುವ ಭರವಸೆ ನೀಡಿದ್ದರು. ಆದರೆ ಈಗ ಟಿಕೆಟ್ ನೀಡದೆ  ಯಾವುದೇ ಒಂದು ಕಾರಣ ಹೇಳದೆ ಕಾಂಗ್ರೆಸ್ ಅಭ್ಯರ್ಥಿಯನ್ನು ಘೋಷಿಸಿದ್ದಾರೆ. ಇದರಿಂದ ನಮ್ಮ ಬೆಂಬಲಿಗರು ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಬೇಕು ಎಂದರು. ಜೊತೆಗೆ ಅಮ್ಮ ಆದ್ಮಿ  ಪಕ್ಷ ನಮಗೆ ಬೆಂಬಲ ಘೋಷಿಸಿದೆ. ಮುಖ್ಯಮಂತ್ರಿ ಚಂದ್ರು ಬಹಿರಂಗವಾಗಿ ಏಳು ಜಿಲ್ಲೆಗಳಿಗೆ ಭೇಟಿ ನೀಡಿ ಬೆಂಬಲಿಸಲು ಕರೆ ನೀಡಿದ್ದಾರೆ. ಚುನಾವಣೆಯಲ್ಲಿ ನನಗೆ ಬೆಂಬಲಿಸಿ ಪ್ರಥಮ ಪ್ರಾಶಸ್ತ್ಯ ಮತ ನೀಡಿದರೆ ಕ್ಷೇತ್ರದ ಶೈಕ್ಷಣಿಕ ಮತ್ತು ಔದ್ಯೋಗಿಕ ಸೇವೆ ಮಾಡುತ್ತೇನೆ. ಪ್ರತಿ ಮೂರು ತಿಂಗಳಿಗೊಮ್ಮೆ ಜಿಲ್ಲಾ ಮಟ್ಟದ ಉದ್ಯೋಗ ಮೇಳ  ಮಾಡುವ ಮೂಲಕ ಉದ್ಯೋಗವನ್ನು ನೀಡುವ ಮೂಲಕ ನಿರುದ್ಯೋಗ ಸಮಸ್ಯೆ ಬಗೆಹರಿಸುತ್ತೇನೆ ಎಂದರು. ಈ ಸಂದರ್ಭದಲ್ಲಿ ಜಿಲ್ಲಾ ಕಾಸಪ ಅಧ್ಯಕ್ಷ  ನಿಷ್ಟಿ ರುದ್ರಪ್ಪ, ಮುಖಂಡರಾದ ಕೇಶವ ರೆಡ್ಡಿ. ಅಂಬಾಡಿ ನಾಗರಾಜ್ ಇದ್ದರು
One attachment • Scanned by Gmail