ನಗರದಲ್ಲಿ  ಪೊಲೀಸ್ ರನ್ಗ್ರೀಷ್ಮ ಮಹೇಶ ಪ್ರಥಮ
(ಸಂಜೆವಾಣಿ ವಾರ್ತೆ)
ಬಳ್ಳಾರಿ, ಮಾ.10:  ಕರ್ನಾಟಕ ರಾಜ್ಯ ಪೊಲೀಸ್ ಸುವರ್ಣ ಮಹೋತ್ಸವ ಆಚರಣೆ ಅಂಗವಾಗಿ ಇಂದು ಬೆಳಿಗ್ಗೆ ನಗರದಲ್ಲಿ ಜಿಲ್ಲಾ ಪೊಲೀಸ್ 10 ಕಿ.ಮೀ.ರನ್ ಹಮ್ಮಿಕೊಂಡಿತ್ತು.
ಸದೃಢತೆ ಹಾಗೂ ಡ್ರಗ್ಸ್ ಮುಕ್ತ ಕರ್ನಾಟಕ ನಿರ್ಮಾಣದ ದ್ಯೇಯೋದ್ದೇಶದೊಂದಿಗೆ  ಈ ಓಟವನ್ನು ಮುನಿಸಿಪಲ್ ಹೈಸ್ಕೂಲ್ ಮೈದಾನದಿಂದ  ಹಮ್ಮಿಕೊಂಡಿತ್ತು.‌
ಪೊಲೀಸ್ ಮಹಾ ನಿರೀಕ್ಷಕ ಲೋಕೀಶ್ ಅವರು ಇದಕ್ಕೆ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಬಳ್ಳಾರಿ ವಲಯ ಪೊಲೀಸ್ ಮಹಾ ನಿರೀಕ್ಷಕ ಬಿ.ಎಸ್.ಲೋಕೇಶ ಕುಮಾರ್, ಯುವ ಜನತೆಯು ಮಾದಕ ವಸ್ತುಗಳಿಂದ ದೂರ ಉಳಿದು, ಸದೃಢ ದೇಹದೊಂದಿಗೆ ಉತ್ತಮ ಆರೋಗ್ಯ ಹೊಂದಬೇಕು ಯುವ ಜನತೆಯಲ್ಲಿ ಮತ್ತು ವಿದ್ಯಾರ್ಥಿಗಳಲ್ಲಿ ಮಾದಕ ವಸ್ತುಗಳ ಬಗ್ಗೆ ಪರಿಣಾಮ ಕುರಿತು ಪೊಲೀಸ್ ಇಲಾಖೆಯಿಂದ ಜಾಗೃತಿ ಮೂಡಿಸಲಾಗುತ್ತಿದೆ. ತಮ್ಮ ಸುತ್ತಮುತ್ತಲಿನಲ್ಲಿ ಯಾರಾದರೂ ಡ್ರಗ್ಸ್ ಗಳ ದುಶ್ಚಟಕ್ಕೆ ಒಳಗಾಗಿದ್ದಲ್ಲಿ ಅಥವಾ ವ್ಯಸನಿಗಳು ಕಂಡುಬಂದಲ್ಲಿ ಪೊಲೀಸ್ ಇಲಾಖೆಗೆ ಮಾಹಿತಿ ನೀಡಬೇ ರಾಜ್ಯ ಮತ್ತು ರಾಷ್ಟ್ರವನ್ನು ಡ್ರಗ್ಸ್ ಮುಕ್ತ ಮಾಡುವ ನಿಟ್ಟಿನಲ್ಲಿ ರಾಜ್ಯ ಪೊಲೀಸ್ ಸುವರ್ಣ ಮಹೋತ್ಸವ ಅಂಗವಾಗಿ ರಾಜ್ಯವ್ಯಾಪಿ ಮ್ಯಾರಥಾನ್ ಹಮ್ಮಿಕೊಳ್ಳಲಾಗಿದ್ದು, ಯುವ ಜನತೆಯು ಮಾದಕ ವಸ್ತುಗಳ ವ್ಯಸನಕ್ಕೆ ಬಲಿಯಾಗದೇ ಆರೋಗ್ಯಕರ ಮತ್ತು ಉತ್ತಮ ಜೀವನ ರೂಪಿಸಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು.‌
ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಮಾತನಾಡಿ, ಜಿಲ್ಲಾ ಪೊಲೀಸ್ ಇಲಾಖೆಯು ಡ್ರಗ್ಸ್ ಮುಕ್ತ ಜಿಲ್ಲೆ ಮಾಡುವ ಪಣತೊಟ್ಟಿದ್ದು, ಯುವ ಪೀಳಿಗೆಯು ಮಾದಕ ವಸ್ತುಗಳಿಗೆ ಬಲಿಯಾಗದೆ, ಅವರು ತಮ್ಮ ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು  ಎಂದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಭಂಡಾರು ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ಯುವಜನತೆಯು ಗಾಂಜಾ, ಮದ್ಯ, ಇತರೆ ಮಾದಕ ವಸ್ತುಗಳ ವ್ಯಸನಕ್ಕೆ ಬಲಿಯಾಗದೆ ಪುಸ್ತಕ ಓದುವ ಹವ್ಯಾಸ ಬೆಳೆಸಿಕೊಳ್ಳಬೇಕು. ಯುವ ಸಮೂಹ ಮಾದಕ ವ್ಯಸನಕ್ಕೆ ಒಳಗಾಗದೇ ಸದೃಢ ದೇಹ ಹೊಂದುವುದರ ಕಡೆ ಗಮನ ಹರಿಸಬೇಕು ಎಂದರು.
ಶಾಲಾ ಕಾಲೇಜು ವಿದ್ಯಾರ್ಥಿಗಳು, ಯುವಕರು, ಸಾರ್ವಜನಿಕರು ಸೇರಿದಂತೆ ಸುಮಾರು 1500 ಕ್ಕೂ ಹೆಚ್ಚು ಜನ ಮತ್ತು 300 ಜನ ಪೊಲೀಸ್ ಸಿಬ್ಬಂದಿಗಳು ಭಾಗವಹಿಸಿದ್ದರು.
ನಗರದ ಮುಷಿಪಲ್ ಹೈಸ್ಕೂಲ್ ಮೈದಾನದಿಂದ ಆರಂಭಗೊಂಡ  ಓಟ.  ಗಡಿಗೆ ಚೆನ್ನಪ್ಪ ಸರ್ಕಲ್, ಬ್ರೂಸ್ ಪೇಟೆ, ತೇತು ಬೀದಿ, ಗವಿಯಪ್ಒ ಸರ್ಕಲ್, ಅಂಬೇಡ್ಕರ್, ಸುಧಾ ಸರ್ಕಲ್, ಇನ್ಪಾಂಟ್ರಿರೋಡ್, ವಾಲಗಮೀಕಿ ಸರ್ಕಲ್, ದುರ್ಗಮ್ಮ ದೇವಸ್ಥಾನ, ಹಳೇ ಬಸ್ ನಿಲ್ದಾಣದ ಮೂಲಕ ಮುನಿಷಿಪಲ್ ಹೈಸ್ಕೂಲ್ ಮೈದನಕ್ಕೆ ಬಂದು ತಲುಪಿತು.
 ಪುರುಷರ ವಿಭಾಗ:
ಪ್ರಥಮ ಬಹುಮಾನ – ಗಾಲಿ ರುಕ್ಮಿಣಮ್ಮ ಚೆಂಗಾರೆಡ್ಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿ ಆರ್.ಮಹೇಶ್ (ರೂ.5000 ಮತ್ತು ಟ್ರೋಪಿ). ದ್ವಿತೀಯ ಬಹುಮಾನ – ವಿದ್ಯಾರ್ಥಿ ತಿಪ್ಪೇಶ್ ಯಾದವ್ (ರೂ.3000 ಮತ್ತು ಟ್ರೋಪಿ), ತೃತೀಯ ಬಹುಮಾನ – ವಿದ್ಯಾರ್ಥಿ ನಿತಿನ್ (ರೂ.2000 ಮತ್ತು ಟ್ರೋಪಿ).
ಮಹಿಳಾ ವಿಭಾಗ:
ಪ್ರಥಮ ಬಹುಮಾನ – ಪುಪಿಲ್ ಟ್ರೀ ಶಾಲೆಯ ವಿದ್ಯಾರ್ಥಿನಿ ಗಿರಿಷ್ಮಾ (ರೂ.5000 ಮತ್ತು ಟ್ರೋಪಿ), ದ್ವಿತೀಯ ಬಹುಮಾನ – ವಿದ್ಯಾರ್ಥಿನಿ ಜಾಹೀಧ (ರೂ.3000 ಮತ್ತು ಟ್ರೋಪಿ), ತೃತೀಯ ಬಹುಮಾನ – ವಿದ್ಯಾರ್ಥಿನಿ ಆಶಾ (ರೂ.2000 ಮತ್ತು ಟ್ರೋಪಿ).
 ಸಮಾಧಾನಕರ ಬಹುಮಾನ:
ಪುರುಷ ಮತ್ತು ಮಹಿಳಾ ವಿಭಾಗದಲ್ಲಿ ಭಾಗವಹಿಸಿ ಮ್ಯಾರಥಾನ್ ಪೂರ್ಣಗೊಳಿಸಿದ ತಲಾ 12  ಸ್ಪರ್ಧಾಳುಗಳಿಗೆ (ರೂ.1000 ಮತ್ತು ಪ್ರಮಾಣ ಪತ್ರ) ಸಮಾಧಾನಕರ ಬಹುಮಾನ ವಿತರಿಸಲಾಯಿತು.
ಮಾದಕ ವಸ್ತುಗಳಿಂದ ದೂರವಿರುತ್ತೇನೆ ಎಂಬ ಪ್ರತಿಜ್ಞಾ ವಿಧಿಯನ್ನು ಸ್ವೀಕಾರ ಮಾಡುವ ಸಹಿ ಸಂಗ್ರಹ ಅಭಿಯಾನ ವಿಶೇಷವಾಗಿತ್ತು. ರಾಜ್ಯ ರಸ್ತೆ ಸುರಕ್ಷತಾ ಪ್ರಾಧಿಕಾರದ ವತಿಯಿಂದ ರಸ್ತೆ ನಿಯಮ ಪಾಲನೆ ಕುರಿತು ಜಾಗೃತಿ ಮೂಡಿಸುವ ವಿಡಿಯೋಗಳನ್ನು ಎಲ್ಇಡಿ ಮೂಲಕ ಪ್ರದರ್ಶಿಸಲಾಯಿತು.
ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆಯ ಆಯುಕ್ತ ಜಿ.ಖಲೀಲ್ ಸಾಬ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ನವೀನ್ ಕುಮಾರ್, ಬಳ್ಳಾರಿ ನಗರ ಡಿ.ಎಸ್.ಪಿ ಚಂದ್ರಕಾಂತ ನಂದಾರೆಡ್ಡಿ, ತೋರಣಗಲ್ಲು ವಿಭಾಗ ಡಿ.ಎಸ್.ಪಿ ಪ್ರಸಾದ್ ಗೋಖಲೆ, ಗಾಂಧಿನಗರದ ಪಿ.ಐ ಸಿದ್ದರಾಮೇಶ್ವರ್ ಸೇರಿದಂತೆ ಪೊಲೀಸ್ ಇಲಾಖೆಯ ಅಧಿಕಾರಿಗಳು, ಸಿಬ್ಬಂಧಿ ವರ್ಗದವರು, ವಿದ್ಯಾರ್ಥಿಗಳು, ಯುವಕರು, ಸಾರ್ವಜನಿಕರು ಮತ್ತಿತರರು ಉಪಸ್ಥಿತರಿದ್ದರು.