ಕೌಶಲ್ಯ ಅಭಿವೃದ್ಧಿ ನಿಗಮದ ನೂತನ ಅಧ್ಯಕ್ಷೆ ಕಾಂತಾ ನಾಯಕಗೆ ಸನ್ಮಾನ
ವಿಜಯಪುರ,ಮಾ.10:ಕೌಶಲ್ಯ ಅಭಿವೃದ್ಧಿ ನಿಗಮದ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಕಾಂತಾ ನಾಯಕ ಅವರು ಅಧಿಕಾರ ವಹಿಸಿಕೊಂಡು ವಿಜಯಪುರ ಜಿಲ್ಲಾ ಕಾಂಗ್ರೆಸ ಕಚೇರಿಗೆ ಪ್ರಪ್ರಥಮ ಬಾರಿಗೆ ಭೇಟಿ ನೀಡಿದ ಹಿನ್ನಲೆಯಲ್ಲಿ
ವಿಜಯಪುರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹಾಗೂ ಮಾಜಿ ಶಾಸಕ ರಾಜು ಆಲಗೂರ ಅವರು ಜಿಲ್ಲಾ ಕಾಂಗ್ರೆಸ್ ವತಿಯಿಂದ ಕಾಂತ ನಾಯಕ ಆವರನ್ನು ಸನ್ಮಾನಿಸಿದರು.
ಇದೇ ಸಂಧರ್ಭದಲ್ಲಿ ಕೆಪಿಸಿಸಿ ಸದಸ್ಯ ಬಿ.ಎಸ್. ಪಾಟೀಲ (ಯಾಳಗಿ), ಪಕ್ಷದ ಮುಖಂಡರುಗಳಾದ ಡಾ. ಪ್ರಭುಗೌಡ ಪಾಟೀಲ (ಚಬನೂರ), ಚಾಂದಸಾಬ ಗಡಗಲಾವ, ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ವಿದ್ಯಾರಾಣಿ ತುಂಗಳ, ಜಿಲ್ಲಾ ಪಂಚಾಯತಿ ಮಾಜಿ ಅಧ್ಯಕ್ಷೆ ಸುಜಾತಾ ಕಳ್ಳಿಮನಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಾದ ಜಮೀರ್ ಬಕ್ಷಿ, ಆರತಿ ಶಹಾಪುರ, ಬಶೀರ ಶೇಠ, ಬಾಳನಗೌಡ ಪಾಟೀಲ, ರಾಮಚಂದ್ರ ಹಕ್ಕಿ, ಪ್ರಧಾನ ಕಾರ್ಯದರ್ಶಿಗಳಾದ ಸಾಹೇಬಗೌಡ ಬಿರಾದಾರ, ಶಬ್ಬೀರ ಜಹಾಗೀದಾರ, ಸೋಮನಾಥ ಕಳ್ಳಿಮನಿ, ಸುರೇಶ ಘೋಣಸಗಿ, ಹೊನ್ನಮಲ್ ಸಾರವಾಡ, ವಸಂತ ಹೊನಮೊಡೆ, ಹಾಜಿಲಾಲ ದಳವಾಯಿ, ಜಿಲ್ಲಾ ಕಾಂಗ್ರೆಸ್ ಪದಾಧಿಕಾರಿಗಳು, ಜಿಲ್ಲಾ ಅಂಗ ಘಟಕದ ಅಧ್ಯಕ್ಷರುಗಳು, ಮಹಿಳಾ ಕಾಂಗ್ರೆಸ್ ಕಾರ್ಯಕರ್ತರು, ಅಭಿಮಾನಿಗಳು ಉಪಸ್ಥಿತರಿದ್ದರು.