ಹಿಂದೂ-ಮುಸ್ಲಿಮರಿಂದ ಭಾವೈಕ್ಯತೆಯ ಗಣೇಶೋತ್ಸವ
ಸಂಜೆವಾಣಿ ನ್ಯೂಸ್
ಮೈಸೂರು: ಸೆ.17:- ನಗರದ ಸುಣ್ಣದ ಕೆರೆ ಯಲ್ಲಿ ಶ್ರೀ ವಿನಾಯಕ ಯುವಕರ ಬಳಗ ವತಿಯಿಂದ ಗಣೇಶ ಪ್ರತಿಷ್ಠಾಪನೆ ಯಲ್ಲಿ ಮುಸಲ್ಮಾನ್ ಸಮುದಾಯದ ಮುಖಂಡರು ಈದ್ ಮಿಲಾದ್ ಅಂಗವಾಗಿ ಮಕ್ಕಳಿಗೆ ಪುಸ್ತಕ ಹಾಗೂ ಹೋಳಿಗೆ ವಿತರಿಸಿ ಶುಭಾಶಯ ವಿನಿಮಯ ಮಾಡಿಕೊಳ್ಳುವ ಮೂಲಕ ಭಾವೈಕ್ಯತೆಯ ಸಂದೇಶ ಸಾರಿದರು.
ಕಾಂಗ್ರೆಸ್ ಮುಖಂಡ ಹಾಗೂ ಡಿಸಿಎಂ ಶಿವಕುಮಾರ್ ಅವರ ಅಪ್ತರೂ ಆದ ಶ್ರೀನಾಥ್ ಬಾಬು ಮಾತನಾಡಿ, ನಮ್ಮ ದೇಶದಲ್ಲಿ ವರ್ಷದಲ್ಲಿ ಹಲವಾರು ಹಬ್ಬಗಳನ್ನು ಆಚರಣೆ ಮಾಡುತ್ತಿದ್ದು, ಪ್ರತಿ ವರ್ಷವೂ ಸಹ ಗೌರಿ ಗಣೇಶ ಮತ್ತು ಈದ್ ಮಿಲಾದ್ ಹಬ್ಬ ಸಮೀಪ ಬಂದಿದ್ದರಿಂದ ಉಭಯ ಸಮಾಜದ ಬಾಂಧವರು ಈ ಹಬ್ಬಗಳನ್ನು ಬಹಳ ಶಾಂತಿಯುತವಾಗಿ ಆಚರಣೆ ಮಾಡಿ ಸೌಹಾರ್ದತೆಯಿಂದ ಬಾಳುವಂತೆ ಹೇಳಿದರು.
ಕಾಂಗ್ರೆಸ್ ಚಾಮುಂಡೇಶ್ವರಿ ಕ್ಷೇತ್ರದ ಅಲ್ಪಸಂಖ್ಯಾತ ಅಧ್ಯಕ್ಷ ಆರಿಫ್ ಪಾಷಾ ಮಾತನಾಡಿ ಹಿಂದೂ, ಮುಸಲ್ಮಾನ ಸಮುದಾಯಗಳು ಸೇರಿದಂತೆ ಎಲ್ಲಾ ಜನಾಂಗದ ಜನರು ಸೌಹಾರ್ದತೆಯಿಂದ ಬದುಕುತ್ತಿದ್ದು, ಈದ್ ಮಿಲಾದ್ ಹಾಗೂ ಮೊಹರಂನಲ್ಲಿ ಹಿಂದೂಗಳು ಪಾಲ್ಗೊಂಡು ಸೌಹಾರ್ದ ಸಾರುವ ಕೆಲಸಗಳು ಪ್ರತಿ ಜಿಲ್ಲೆಯಲ್ಲೂ ಆಗಬೇಕು ಇಂತಹ ಕಾರ್ಯಕ್ರಮಗಳಿಂದ ಸೌಹಾರ್ದಥ ಹೆಚ್ಚು ಗಟ್ಟಿಯಾಗುತ್ತದೆ ಎಂದು ಹೇಳಿದರು.
ಶ್ರೀ ವಿನಾಯಕರ ಯುವಕರ ಬಳಗದ ಅಧ್ಯಕ್ಷ ಮಂಜುನಾಥ್, ಕೆಪಿಸಿಸಿ ಸದಸ್ಯರಾದ ನಜರ್ಬಾದ್ ನಟರಾಜ್, ಶ್ರೀ ವಿನಾಯಕ ಗೆಳೆಯರ ಬಳಗದ ಅಧ್ಯಕ್ಷ ಮಂಜುನಾಥ್, ಕಿಶೋರ್ ಕುಮಾರ್, ಜಿ ರಾಘವೇಂದ್ರ, ಬ್ಯಾಂಕ್ ಸಿದ್ದರಾಜು, ಸಿದ್ದರಾಮಯ್ಯ ಬ್ರಿಗೇಡ್ ಅಧ್ಯಕ್ಷರಾದ ಹಿನಕಲ್ ಉದಯ್, ಕಿರಣ್, ಚಕ್ರಪಾಣಿ,ಮುಸಲ್ಮಾನ್ ಸಮುದಾಯದ ಮುಖಂಡರುಗಳಾದ ಕಾಂಗ್ರೆಸ್ ಚಾಮುಂಡೇಶ್ವರಿ ಕ್ಷೇತ್ರದ ಅಲ್ಪಸಂಖ್ಯಾತ ಅಧ್ಯಕ್ಷ ಆರಿಫ್ ಪಾಷಾ, ಗುಲ್ಚನ್ ಪಾಷಾ, ಇರ್ಫಾನ್, ಸೈಯಾದ್, ಇಮ್ರಾನ್ ಪಾಷಾ, ಮಹಮ್ಮದ್, ಶಫಿ ಉಲ್ಲಾ ಖಾನ್ ಇನ್ನಿತರರು ಹಾಜರಿದ್ದರು.