ಸಿಸಿ ರಸ್ತೆಗಳ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ
ಸಂಜೆವಾಣಿ ವಾರ್ತೆ,
ವಿಜಯಪುರ,ಮಾ.10: ನಗರದ ವಾರ್ಡ್ ನಂ.21ರ ಸದಾಶಿವ ನಗರದ ಆಂತರಿಕ ರಸ್ತೆಗಳನ್ನು ರೂ.1 ಕೋಟಿ ಅನುದಾನದಲ್ಲಿ ಸಿಸಿ ರಸ್ತೆಗಳನ್ನಾಗಿ ಅಭಿವೃದ್ಧಿಪಡಿಸುವ ಕಾಮಗಾರಿಗೆ ನಗರ ಶಾಸಕÀ ಬಸನಗೌಡ ಪಾಟೀಲ ಯತ್ನಾಳ ಅವರು ಶುಕ್ರವಾರ ಭೂಮಿಪೂಜೆ ನೆರವೇರಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಬಸನಗೌಡ ಪಾಟೀಲ ಯತ್ನಾಳ ಆವರು, ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಿದರು. ಬಳಿಕ ಗ್ರಾಮೀಣ ಅಭಿವೃದ್ಧಿ ಸಂಸ್ಥೆ, ಸದಾಶಿವ ನಗರ ಅಭಿವೃದ್ಧಿ ಸಂಘ ಹಾಗೂ ಮಹಾನಗರ ಪಾಲಿಕೆ ಸಹಯೋಗದಲ್ಲಿ ಸಿದ್ಧಪಡಿಸಲಾದ ಸಮುದಾಯ ಸಹಯೋಗದಲ್ಲಿ ಘನ ತ್ಯಾಜ್ಯದಿಂದ ಎರೆಹುಳು ಗೊಬ್ಬರ ತಯಾರಿಕಾ ಘಟಕದ ಪ್ರಾತ್ಯಕ್ಷಿಕ ವೀಕ್ಷಣೆ ಮಾಡಿದರು.
ಮಹಾನಗರ ಪಾಲಿಕೆ ಸದಸ್ಯರಾದ ಮಲ್ಲಿಕಾರ್ಜುನ (ಕುಮಾರ) ಗಡಗಿ, ಪ್ರೇಮಾನಂದ ಬಿರಾದಾರ, ಮುಖಂಡರಾದ ಜಿ.ಎಸ್.ಗದಗಿಮಠ, ಡಾ.ಬಾಬು ಸಜ್ಜನ, ಸಂತೋಷ ಜೋಳದ, ಪಾಪು ಖ್ಯಾತನ್, ಚನ್ನಬಸಯ್ಯ ಸ್ವಾಮಿ, ಪ್ರವೀಣ ಹಳ್ಳಿ, ರಾಚು ಬಿರಾದಾರ ಸೇರಿದಂತೆ ಕಾರ್ಯಕರ್ತರು, ಅಭಿಮಾನಿಗಳು ಹಾಗೂ ಸ್ಥಳೀಯ ನಿವಾಸಿಗಳು ಇದ್ದರು.