ಕಲಬುರಗಿಯಲ್ಲೂ ಬಾಂಬರ್‍ಗಾಗಿ ಶೋಧ
ಕಲಬುರಗಿ,ಮಾ.9-ಬೆಂಗಳೂರಿನ ದಿ ರಾಮೇಶ್ವರಂ ಕೆಫೆ ಬಾಂಬ್ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಂಬರ್ ಪತ್ತೆಗಾಗಿ ಎನ್‍ಐಎ ಅಧಿಕಾರಿಗಳ ತಂಡ ಇಂದು ಕಲಬುರಗಿಯಲ್ಲಿ ಶೋಧ ಕಾರ್ಯಾಚರಣೆ ನಡೆಸಿದೆ ಎಂದು ತಿಳಿದುಬಂದಿದೆ.
ನಗರದ ರೈಲ್ವೆ ನಿಲ್ದಾಣ, ಬಸ್ ನಿಲ್ದಾಣ ಮತ್ತು ಕೆಲವು ಲಾಡ್ಜ್‍ಗಳಲ್ಲಿ ಎನ್‍ಐಎ ಅಧಿಕಾರಿಗಳ ತಂಡ ಶೋಧ ಕಾರ್ಯಾಚರಣೆ ನಡೆಸಿದೆ ಎಂದು ವರದಿಯಾಗಿದೆ.
ಮಾರ್ಚ್ ಒಂದರಂದು ಬೆಂಗಳೂರಿನ ವೈಟ್‍ಫಿಲ್ಡ್ ಪ್ರದೇಶದಲ್ಲಿರುವ ದಿ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಪೋಟ ನಡೆದಿತ್ತು. ಘಟನೆಯಲ್ಲಿ ಒಂಬತ್ತು ಜನರು ಗಾಯಗೊಂಡಿದನ್ನು ಇಲ್ಲಿ ಸ್ಮರಿಸಬಹುದು.