ಭಾರತೀಯ ವಿಜ್ಞಾನಿಗಳ ಕೊಡುಗೆ ಅಪಾರ
ಬೀದರ್:ಮಾ.9: ವಿಶ್ವಕ್ಕೆ ಭಾರತೀಯ ವಿಜ್ಞಾನಿಗಳ ಕೊಡುಗೆ ಅಪಾರವಾಗಿದೆ ಎಂದು ಕರ್ನಾಟಕ ಪಶು ವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಸಂಶೋಧನಾ ನಿರ್ದೇಶಕ ಡಾ. ಬಿ.ವಿ. ಶಿವಪ್ರಕಾಶ ನುಡಿದರು.
ಇಲ್ಲಿಯ ಬಸವೇಶ್ವರ ಶಿಕ್ಷಣ ಮಹಾವಿದ್ಯಾಲಯದಲ್ಲಿ ಪೆÇ್ರ. ಬಿ.ಜಿ. ಮೂಲಿಮನಿ ಫೌಂಡೇಷನ್ ಸಹಯೋಗದಲ್ಲಿ ಈಚೆಗೆ ಆಯೋಜಿಸಿದ್ದ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಭಾರತೀಯ ವಿಜ್ಞಾನಿ ಹಾಗೂ ಎಂಜಿನಿಯರಗಳು ವಿಶ್ವದ ಎಲ್ಲೆಡೆ ಇದ್ದಾರೆ. ವಿಜ್ಞಾನ ಹಾಗೂ ತಂತ್ರಜ್ಞಾನ ಕ್ಷೇತ್ರಕ್ಕೆ ಕೊಡುಗೆ ನೀಡುತ್ತಿದ್ದಾರೆ ಎಂದು ತಿಳಿಸಿದರು.
ವಿಕಸಿತ ಭಾರತ ಸಂಕಲ್ಪದೊಂದಿಗೆ ಭಾರತ ವಿಜ್ಞಾನ ಹಾಗೂ ತಂತ್ರಜ್ಞಾನ ಕ್ಷೇತ್ರದ ಅಭಿವೃದ್ಧಿಗೆ ಹಾಕಿಕೊಂಡ ಯೋಜನೆಗಳನ್ನು ವಿವರಿಸಿದರು.
ಮೈಲೂರು ಸರ್ಕಾರಿ ಪ್ರೌಢಶಾಲೆಯ ವಿಜ್ಞಾನ ಶಿಕ್ಷಕ ದೇವಿಪ್ರಸಾದ್ ಕಲಾಲ್ ಮಾತನಾಡಿ, ಶಿಕ್ಷಕರು ಮಕ್ಕಳಲ್ಲಿ ವೈಜ್ಞಾನಿಕ ಮನೋಭಾವ ಬೆಳೆಸಬೇಕು ಎಂದು ಹೇಳಿದರು.
ಬಿ.ಜಿ. ಮೂಲಿಮನಿ ಫೌಂಡೇಷನ್ ಕಾರ್ಯದರ್ಶಿ ರೇವಣಸಿದ್ದಪ್ಪ ಜಲಾದೆ ಪ್ರಾಸ್ತಾವಿಕವಾಗಿ ಮಾತನಾಡಿ, ಫೌಂಡೇಷನ್ ಜಿಲ್ಲೆಯ ಶೈಕ್ಷಣಿಕ ಅಭಿವೃದ್ಧಿಗೆ ಪೂರಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದೆ ಎಂದು ತಿಳಿಸಿದರು.
ಪ್ರಾಚಾರ್ಯ ಡಾ. ಮಲ್ಲಿಕಾರ್ಜುನ ಕನಕಟ್ಟೆ ಅಧ್ಯಕ್ಷತೆ ವಹಿಸಿದ್ದರು. ಫೌಂಡೇಷನ್ ಅಧ್ಯಕ್ಷ ಶಿವಲಿಂಗಪ್ಪ ಜಲಾದೆ, ಖಜಾಂಚಿ ಓಂಕಾರ ಮಾಶೆಟ್ಟಿ, ಉಪನ್ಯಾಸಕರಾದ ಸಂತೋಷಕುಮಾರ ಸಜ್ಜನ್, ರಾಜಕಮಾರ ಶಿಂಧೆ ಇದ್ದರು.
ಪಾಂಡುರಂಗ ಕುಂಬಾರ ನಿರೂಪಿಸಿದರು. ವೀಣಾ ಜಲಾದೆ ಸ್ವಾಗತಿಸಿದರು. ಶಿಲ್ಪಾ ಹಿಪ್ಪರಗಿ ವಂದಿಸಿದರು.