ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ತರಬೇತಿ ಕಾರ್ಯಕ್ರಮ
ಗದಗ,ಮಾ9: ಗದಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ, ಮಕ್ಕಳ ರಕ್ಷಣಾ ನಿರ್ದೇಶನಾಲಯ, ಬೆಂಗಳೂರು, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಜಿಲ್ಲಾ ಪೆÇೀಲಿಸ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಇವರ ಸಹಯೋಗದಲ್ಲಿ “ಬಾಲನ್ಯಾಯ (ಮಕ್ಕಳ ಪಾಲನೆ ಮತ್ತು ರಕ್ಷಣೆ) ಕಾಯ್ದೆ- ಪೆÇೀಕ್ಸೊ ಕಾಯ್ದೆ, ಬಾಲ್ಯವಿವಾಹ ನಿಷೇಧ ಕಾಯ್ದೆ ಹಾಗೂ ಆರ್.ಟಿ.ಇ ಕಾಯ್ದೆ , ಬಾಲಕಾರ್ಮಿಕ ಹಾಗೂ ಭಿಕ್ಷಾಟನೆ ನಿಷೇಧ ಹಾಗೂ ನಿಯಂತ್ರಣ ಕಾಯ್ದೆಯ ಹಾಗೂ ಮನೋಸಾಮಾಜಿಕ ಸಮಸ್ಯೆಗಳು ಹಾಗೂ ಪರಿಹಾರ ಕುರಿತು ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಮಂಗಳವಾರದಂದು ತರಬೇತಿ ಕಾರ್ಯಕ್ರಮವನ್ನು ನಗರದ ಜಗದ್ಗುರು ತೊಂಟದಾರ್ಯ ಪ್ರೌಢಶಾಲೆಯಲ್ಲಿ ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮಕ್ಕೆ ಅತಿಥಿಗಳಾಗಿ ಆಗಮಿಸಿದ ನಿರೂಪಣಾಧಿಕಾರಿಗಳಾದ ಶ್ರೀಮತಿ ರಾಧಾ ಜಿ ಮಣ್ಣೂರು ಇವರು ಮಾತನಾಡುತ್ತಾ ಮಕ್ಕಳಿಗೆ ಸಂಬಂಧಿಸಿದ ಯೋಜನೆಗಳ ಸಫಲತೆ ಹಾಗೂ ಮಕ್ಕಳ ಹಕ್ಕುಗಳ ರಕ್ಷಣೆಗಾಗಿ ಸಾಕಷ್ಟು ಕಾರ್ಯಕ್ರಮ ಕೈಗೊಳ್ಳುತ್ತಿದ್ದು ಶ್ಲಾಘನಿಯವಾಗಿದೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕದಿಂದ ಮಕ್ಕಳ ಅಭಿವೃದ್ಧಿ ಹಾಗೂ ಮಕ್ಕಳ ರಕ್ಷಣೆಗಾಗಿ ಸಾಕಷ್ಟು ಯೋಜನೆಗಳಿದ್ದು ಅವುಗಳನ್ನು ಮಕ್ಕಳಿಗೆ ತಲುಪಿಸುವ ಕಾರ್ಯವನ್ನು ಸತತವಾಗಿ ಮಾಡುತ್ತ ಬಂದಿದ್ದು ಮಕ್ಕಳು ತಮಗಿರುವ ಹಕ್ಕುಗಳು ಹಾಗೂ ಯೋಜನೆಗಳ ಕುರಿತು ತಿಳಿದುಕೊಂಡಿರಬೇಕು ಅಂದಾಗ ಮಾತ್ರ ಮಕ್ಕಳು ಉತ್ತಮ ಅಭಿವೃದ್ಧಿ ಹೊಂದಲು ಸಾಧ್ಯ ಎಂದು ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷರಾದ ಶ್ರೀಮತಿ ಅನ್ನಪೂರ್ಣ ಗಾಣಿಗೇರ ಇವರು ಮಾತನಾಡಿ ಶಾಲಾ ವಿದ್ಯಾರ್ಥಿಗಳೆಲ್ಲ ಉತ್ತಮ ನಡುವಳಿಕೆಯೊಂದಿಗೆ ತಮ್ಮ ಗೌರವ ಕಾಪಾಡಿಕೊಳ್ಳಬೇಕು ಹಾಗೂ ತಮ್ಮ ಭವಿಷ್ಯದ ಕುರಿತು ಕಾಳಜಿ ಉಳ್ಳವರಾಗಿರಬೇಕು ಎಂದರು.
ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಡಾ. ಸೋಮಶೇಖರ ಬಿಜ್ಜಳ ಇವರು ಮಕ್ಕಳು ಹದಿವಯಸ್ಸಿನಲ್ಲಿ ಆಗುವ ದೈಹಿಕ, ಮಾನಸಿಕ, ಭೌದ್ಧಿಕ ಬದಲಾವಣೆಗಳು ಮಕ್ಕಳಿಗಿಂತ ತಂದೆ-ತಾಯಿಗಳು ಹೆಚ್ಚಾಗಿ ಕಾಳಜಿವಹಿಸಬೇಕು. ಮಕ್ಕಳ ಉತ್ತಮ ಬೆಳವಣಿಗೆಗೆ ತಾಯಿ ಗರ್ಭದಿಂದಲೇ ಆರೈಕೆ, ಮುಖ್ಯ ಅನುವಂಶತೆ ಹಾಗೂ ಮಿದುಳಿನ ಬೆಳವಣಿಗೆಗೆ ಅದು ಸಾಕಷ್ಟು ಪರಿಣಾಮಕಾರಿ ಹೀಗಾಗಿ ಹೆಣ್ಣು ಮಕ್ಕಳು ಗರ್ಭಿಣಿಯಾದಾಗ ಉತ್ತಮ ವಿಚಾರ ಹಾಗೂ ವಾತಾವರಣ ಹೊಂದುವುದು ಅವಶ್ಯಕವಾಗಿದೆ. ಮಗು ಉತ್ತಮ ಬೆಳವಣಿಗೆಗೆ ಪೆÇೀಷಕರ ಆರೈಕೆ, ಹಿರಿಯರ ನಡುವಳಿಕೆ, ಕುಟುಂಬದ ವಾತಾವರಣ ಬಹುಮುಖ್ಯ ಎಂದು ಮಕ್ಕಳಿಗೆ ಅರಿವು ಮೂಡಿಸಿದರು.
ಕಾರ್ಯಕ್ರಮದಲ್ಲಿ ಜಗದ್ಗುರು ತೊಂಟದಾರ್ಯ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ಕೋಟ್ರೇಶ ಮೆಣಸಿನಕಾಯಿ, ರಮೇಶ ಕಳ್ಳಿಮನಿ, ಶ್ರೀಮತಿ ರೂಪಾ ಉಪ್ಪಿನ್, ಶ್ರೀಮತಿ ಲಲಿತಾ ಕುಂಬಾರ, ಸಮಾಜ ಕಾರ್ಯಕರ್ತರು ಹಾಗೂ ಬೈಲಪ್ಪಗೌಡ ಮಲ್ಲನಗೌಡ್ರ, ಇವರು ಭಾಗವಹಿಸಿದ್ದರು. ರಮೇಶ ಕಳ್ಳಿಮನಿ ಕಾರ್ಯಕ್ರಮ ನಿರೂಪಿಸಿದರು.