ಮಾ.10ರಂದು ಡಾ.ಬಿ.ಆರ್.ಅಂಬೇಡ್ಕರ್, ಗೌತಮ ಬುದ್ಧ ಪ್ರತಿಮೆ ಅನಾವರಣ ಕಾರ್ಯಕ್ರಮ
ಸಂಜೆವಾಣಿ ವಾರ್ತೆ
ಪಿರಿಯಾಪಟ್ಟಣ: ಮಾ.09:- ತಾಲೂಕಿನ ನವಿಲೂರು ಗ್ರಾಮದಲ್ಲಿ ವಿಶ್ವ ರತ್ನ ಡಾ. ಬಿ.ಆರ್ ಅಂಬೇಡ್ಕರ್ ಹಾಗೂ ಗೌತಮ ಬುದ್ಧರ ಪ್ರತಿಮೆಗಳ ಅನಾವರಣ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ನವಿಲೂರು ಗ್ರಾಮ ಪಂಚಾಯಿತಿ ಸದಸ್ಯ ಎನ್.ಸಿ ಚೆಲುವರಾಜ್ ತಿಳಿಸಿದರು.
ಪಟ್ಟಣದ ಕಾರ್ಯನಿರತ ಪತ್ರಕರ್ತರ ಸಂಘದ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ನವಿಲೂರು ಗ್ರಾಮದಲ್ಲಿ ದಿನಾಂಕ 10 ರ ಭಾನುವಾರದಂದು ಮದ್ಯಾಹ್ನ 1 ಗಂಟೆಗೆ ಬಿ ಆರ್ ಅಂಬೇಡ್ಕರ್ ಯುವಕ ಸಂಘದ ವತಿಯಿಂದ ಸಂವಿಧಾನ ಶಿಲ್ಪಿ ಡಾಕ್ಟರ್ ಬಿ.ಆರ್. ಅಂಬೇಡ್ಕರ್ ಹಾಗೂ ಗೌತಮ ಬುದ್ಧರ ಪ್ರತಿಮೆಗಳನ್ನು ಅನಾವರಣ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು ಈ ಕಾರ್ಯಕ್ರಮಕ್ಕೆ ತಾಲೂಕಿನ ಎಲ್ಲಾ ಸಮುದಾಯದ ಮುಖಂಡರು, ಸಾರ್ವಜನಿಕರು , ಸಂಘ ಸಂಸ್ಥೆಗಳು ಸಹಕಾರ ನೀಡುವುದರ ಮೂಲಕ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಮನವಿ ಮಾಡಿದರು
ಮುಖಂಡ ತಮ್ಮಣ್ಣಯ್ಯ ಮಾತನಾಡಿ ಸಮಾಜ ಕಲ್ಯಾಣ ಇಲಾಖೆ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಎಚ್. ಸಿ ಮಹದೇವಪ್ಪನವರು ಪ್ರತಿಮೆಗಳನ್ನು ಅನವರಣ ಗೊಳಿಸುವರು. ಪಶುಸಂಗೋಪನ ಮತ್ತು ರೇಷ್ಮೆ ಸಚಿವ ಕೆ.ವೆಂಕಟೇಶ್ ಕಾರ್ಯಕ್ರಮವು ಉದ್ಘಾಟಿಸುವವರು. ಮುಖ್ಯ ಅತಿಥಿಗಳಾಗಿ ಮಾಜಿ ಶಾಸಕರಾದ ಎಚ್.ಸಿ ಬಸವರಾಜಪ್ಪ, ಕೆ. ಮಹದೇವ್, ಪಿರಿಯಾಪಟ್ಟಣ ತಾಲೂಕು ದಂಡಾಧಿಕಾರಿ ಕುಂಜಿ ಅಹಮದ್ ವಿಶೇಷ ಆಹ್ವಾನಿತರಾಗಿ ರಘೋತ್ತಮ, ಬೌದ ಗುರುಗಳಾದ ಟುಲ್ಕ ಚಿತ್ತಾರ, ಕರ್ಮಪ, ರಿಂಪೆÇೀಜಿ ಪೆÇಮ್ರ ಕಾಂಗ್ ಸ್ಟೈನ್ತೈ, ತೇವಾಂಗ ಥಾರ್ಚಿನ್ ಹಾಗೂ ನವಿಲೂರು ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಸರೋಜಾಪ್ರಕಾಶ್ ಕಾರ್ಯಕ್ರಮದಲ್ಲಿ ದೀಪ ಬೆಳಗಿಸುವವರು, ಡಾ.ಬಿ.ಆರ್ ಅಂಬೇಡ್ಕರ್ ಯುವಕ ಸಂಘದ ಅಧ್ಯಕ್ಷ ಮಹದೇವ್ ಕಾರ್ಯಕ್ರಮತೆ ಅಧ್ಯಕ್ಷತೆ ವಹಿಸಿಕೊಳ್ಳುತ್ತಾರೆ ನವಿಲೂರು ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಬಸವರಾಜ್ ಸದ್ಯಸ್ಯರಾದ ಮಹದೇವ್ ಎನ್.ಡಿ, ಯಶೋದಮ್ಮ, ಮಂಜುಳ, ಶಾಂತಮ್ಮ ಸೇರಿದಂತೆ ತಾಲೂಕಿನ ಎಲ್ಲಾ ದಲಿತ ಮುಖಂಡರು ಹಾಗೂ ಸಂಘಟನೆಯ ಪದಾಧಿಕಾರಿಗಳು ಗ್ರಾಮದ ಮಹಿಳಾ ಸ್ವಸಹಾಯ ಸಂಘಗಳು ಸದಸ್ಯರುಗಳು ಭಾಗವಹಿಸಲಿದ್ದಾರೆ ಎಂದು ಮಾಹಿತಿ ನೀಡಿದರು.
ಪತ್ರಿಗೋಷ್ಠಿಯಲ್ಲಿ ದಲಿತ ಮುಖಂಡರಾದ ಪಿ.ಮಹದೇವ್, ಐಲಾಪುರ ರಾಮು, ಎನ್.ಡಿ ಮಹಾದೇವ್, ಚೆನ್ನಪ್ಪ, ಪ್ರಕಾಶ್ ಹಾಜರಿದ್ದರು