ವಾಡಿ ಪಟ್ಟಣಕ್ಕೆ ಜಿಲ್ಲಾಧಿಕಾರಿ ಬಿ ಫೌಜಿಯಾ ತರನ್ನುಮ್ ಭೇಟಿ ನೀಡಿ ಸ್ಥಳ ಪರಿಶೀಲನೆ
ಕಲಬುರಗಿ:ಮಾ.8: ಜಿಲ್ಲೆಯಲ್ಲಿ ಜರುಗುತ್ತಿರುವ ಸಂವಿಧಾನ ಜಾಗೃತಿ ಜಾಥಾದ ಸಮಾರೋಪ ಸಮಾರಂಭವು ಇದೇ ಮಾರ್ಚ್ ೧೧ ರಂದು ಚಿತ್ತಾಪುರ ತಾಲೂಕಿನ ವಾಡಿ ಪಟ್ಟಣದ ಎ.ಸಿ.ಸಿ ಕಂಪನಿ ಗೇಟ್ ಹತ್ತಿರದ ಸುರಕ್ಷಾ ಕ್ಯಾಂಟೀನ್ ಆವರಣದಲ್ಲಿ ಶುಕ್ರವಾರದಂದು ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಭೇಟಿ ನೀಡಿ ಸ್ಥಳ ಪರಿಶೀಲನೆ ಮಾಡಿದರು.
ಮಹಿಳಾ ದಿನಾಚರಣೆ ಪ್ರಯುಕ್ತವಾಗಿ ಆರೋಗ್ಯ ನಿರೀಕ್ಷಕ ಅಧಿಕಾರಿ ಲತಾ ಮಣಿಯವರಿಂದ ಜಿಲ್ಲಾಧಿಕಾರಿಯವರಿಗೆ ಸನ್ಮಾನಿಸಲಾಯಿತು.