ಸಾಮಾಜಿಕ ನ್ಯಾಯವೆಂದರೆ  ಅಸಮಾನತೆ ಹೋಗಲಾಡಿಸುವುದು

ಸಂಜೆವಾಣಿ ವಾರ್ತೆ
ದಾವಣಗೆರೆ.ಮಾ.೮:  ಸಾಮಾಜಿಕ ನ್ಯಾಯವೆಂದರೆ ಸಮಾಜದಲ್ಲಿರುವ ಎಲ್ಲಾ ರೀತಿಯ ಅಸಮಾನತೆ ಹೋಗಲಾಡಿಸಿ ಹಿಂದುಳಿದ, ಬಡವರ, ದುರ್ಬಲರ ಹಾಗೂ ತುಳಿತಕ್ಕೆ ಮತ್ತು ಶೋಷಣೆಗೆ ಒಳಪಟ್ಟ ಅಸಹಾಯಕರನ್ನು ರಾಜಕೀಯವಾಗಿ ಆರ್ಥಿಕವಾಗಿ, ರಾಜಕೀಯ ಮತ್ತು ಸಾಮಾಜಿಕವಾಗಿ ಮೇಲಕ್ಕೆತ್ತಲು ಶಾಸನಗಳನ್ನು, ಕಾರ್ಯಕ್ರಮಗಳನ್ನು ಮತ್ತು ಯೋಜನೆಗಳನ್ನು ರೂಪಿಸಿ ಅವುಗಳನ್ನು ಜಾರಿಗೊಳಿಸುವುದು ಸಾಮಾಜಿಕ ನ್ಯಾಯದಿನ ಉದ್ದೇಶ ಎಂದು ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಎಲ್ ಎಚ್ ಅರುಣಕುಮಾರ ಹೇಳಿದರು. ನಗರದ ದೇವರಾಜ್ ಅರಸ ಬಡಾವಣೆಯಲ್ಲಿನ ವಿಕಲಾಂಗ ವ್ಯಕ್ತಿಗಳ ಕೌಶಲ್ಯ ಅಭಿವೃದ್ಧಿ, ಪುನರ್ವಸತಿ ಮತ್ತು ಸಬಲೀಕರಣಕ್ಕಾಗಿ ಸಂಯೋಜಿತ ಪ್ರಾದೇಶಿಕ ಕೇಂದ್ರದಲ್ಲಿ ವಿಶ್ವ ಸಾಮಾಜಿಕ ನ್ಯಾಯ ದಿನದ ಅಂಗವಾಗಿ ಅಂಗವೈಕಲ್ಯ ಹೊಂದಿರುವ ವ್ಯಕ್ತಿಗಳು, ಆರೈಕೆ ನೀಡುವವರು ಮತ್ತು ವಿದ್ಯಾರ್ಥಿಗಳಿಗಾಗಿ ಏರ್ಪಡಿಸಿದ್ದ ಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಸಂವಿಧಾನದ ಪ್ರಸ್ತಾವನೆಯಲ್ಲಿ ಎಲ್ಲಾ ಪ್ರಜೆಗಳಿಗೆ ಸಾಮಾಜಿಕ, ಆರ್ಥಿಕ ಹಾಗೂ ರಾಜಕೀಯ ನ್ಯಾಯ ದೊರಕಿಸಿಕೊಡುವುದಾಗಿ ಸ್ಪಷ್ಟಪಡಿಸಿದೆ. ಯಾವ ಭೇದವಿಲ್ಲದೆ ಪ್ರತಿಯೊಬ್ಬ ಪ್ರಜೆಗೂ ಮೂಲಭೂತ ಹಕ್ಕುಗಳಾದ ಸಮಾನತೆಯ, ಸ್ವಾತಂತ್ರ÷್ಯ, ಶೋಷಣೆಯ ವಿರುದ್ಧ, ಧಾರ್ಮಿಕ ಸ್ವಾತಂತ್ರ÷್ಯ, ಸಾಂಸ್ಕöÈತಿಕ, ಶೈಕ್ಷಣಿಕ, ಸಂವಿಧಾನಾತ್ಮಕ ಪರಿಹಾರದ ಹಕ್ಕುಗಳನ್ನು ನೀಡಲಾಗಿದೆ ಎಂದರು. ಸಂವಿಧಾನದಲ್ಲಿ ವಿಕಲಚೇತನ ಹಕ್ಕುಗಳ ರಕ್ಷಣೆ ಮತ್ತು ಅವರ ಸುರಕ್ಷತೆಯು ಮಾನವಹಕ್ಕುಗಳ ಅಡಿಯಲ್ಲಿಬರುತ್ತದೆ. ಅವರಿಗೆ ಸಾಮಾಜಿಕ ನ್ಯಾಯ ಒದಗಿಸುವುದು ನಮ್ಮೇಲ್ಲರ ಜವಾಬ್ದಾರಿಯಾಗಿದೆ ಎಂದು ಹೇಳಿದರು. ದಾವಣಗೆರೆ ಸಿಆರ್‌ಸಿ ನಿರ್ದೇಶಕಿ ಮೀನಾಕ್ಷಿ ಮಾತನಾಡಿ, ದಾವಣಗೆರೆ ಸಿಆರ್‌ಸಿ ಕೇಂದ್ರವು 21 ಬಗೆಯ ವಿಕಲಚೇತನರಿಗೆ ಪುನರವಸತಿ ಶಿಕ್ಷಣ, ಸರಕಾರದ ಯೋಜನೆಗಳು ದೊರಕುವಂತೆ ಮಾಡವಲ್ಲಿ ಯಶಸ್ವಿಯಾಗಿ ಕಾರ್ಯನಿರ್ವಹಿಸುತ್ತಿದೆ ಎಂದರು.