ಭಾರತೀಯ ಯೋಗ ಶಿಕ್ಷಣ ಸಂಸ್ಥೆಯಿಂದ ಅಂತರಾಷ್ಟ್ರೀಯ ಮಹಿಳಾ ದಿನ ಆಚರಣೆ
ಸಂಜೆವಾಣಿ ವಾರ್ತೆ
ಚಿತ್ರದುರ್ಗ: ಮಾ.೮: ಅಂತರಾಷ್ಟ್ರೀಯ ಮಹಿಳಾ ದಿನದ ಅಂಗವಾಗಿ ಶುಕ್ರವಾರ ನಗರದ ಭಾರತೀಯ ಯೋಗ ಶಿಕ್ಷಣ ಸಂಸ್ಥೆ ಚಿತ್ರದುರ್ಗ ವತಿಯಿಂದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಹಿರಿಯ ಯೋಗ ಸಾಧಕಿ ಶ್ರೀಮತಿ ವನಜಾಕ್ಷಮ್ಮ ಹಾಗೂ ಬಾಲಕಿ ಕು. ಮೋನಿಕರವರು ದೀಪ ಬೆಳಗಿಸಿ ಕೇಕ್ ಕತ್ತರಿಸುವುದರೊಂದಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.ಅಂತರರಾಷ್ಟ್ರೀಯ ಮಹಿಳಾ ದಿನವು ಮಹಿಳೆಯರ ಸಾಮರ್ಥ್ಯವನ್ನು ಅರಿತುಕೊಳ್ಳಲು ಮತ್ತು ಪ್ರತಿಯೊಬ್ಬ ಮಹಿಳೆ ಮತ್ತು ಹೆಣ್ಣು ಸುರಕ್ಷಿತವಾಗಿ ಮತ್ತು ಮಹಿಳೆಯರು ಸಬಲರಾಗಿ ಜಗತ್ತನ್ನು ಮುನ್ನಡೆಸಲು ನಮಗೆಲ್ಲರಿಗೂ ನೆನಪಿಸುತ್ತದೆ. ನಾವು ಇಂದು 49 ನೇ ವರ್ಷದ ಅಂತರಾಷ್ಟ್ರೀಯ ಮಹಿಳಾ ದಿನವನ್ನು ಆಚರಿಸುತ್ತಿರುವ ಈ ಸಂಧರ್ಭದಲ್ಲಿ ಈಗಲೂ ನಾವು ಲಿಂಗ ಸಮಾನತೆಯನ್ನು ಸಾಧಿಸುವಲ್ಲಿ ಹೋರಾಡುತ್ತಿರುವುದು ವಿಪರ್ಯಾಸವೆನಿಸುತ್ತದೆ ಮಹಿಳೆಯರು ಇದುವರೆಗೆ ಸಾಧಿಸಿರುವ ಪ್ರಗತಿ ಮತ್ತು ಮುಂದೆ ಇರುವ ಅವಳಿಗೆ ಎದುರಾಗುವ ಸವಾಲುಗಳನ್ನು ಪ್ರತಿಬಿಂಬಿಸುವುದು ಅತ್ಯಗತ್ಯವಾಗಿದೆ ಎಂದು ಹೇಳಿದರು.ಕಾರ್ಯಕ್ರಮದಲ್ಲಿ ಭಾರತೀಯ ಯೋಗ ಶಿಕ್ಷಣ ಸಂಸ್ಥೆ ಅಧ್ಯಕ್ಷ ಹಾಗೂ ಯೋಗ ಪ್ರಚಾರಕ ರವಿ ಕೆ.ಅಂಬೇಕರ್ ಎಲ್ಲಾ ಮಹಿಳಾ ಸಾಧಕಿಯರಿಯ ಶುಭಾಶಯ ಕೋರಿದರು. ಕಾರ್ಯಕ್ರಮದಲ್ಲಿ ನಿವೃತ್ತ ಹಿರಿಯ ಪೋಲಿಸ್ ಅಧಿಕಾರಿ ಮಲ್ಲಿಕಾರ್ಜುನಚಾರ್ ಸೇರಿದಂತೆ ಯೋಗ ಕೇಂದ್ರದ ಹಲವಾರು ಯೋಗ ಸಾಧಕಿಯರು ಹಾಜರಿದ್ದರು.